ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 01:00 pm

ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.

ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್‌ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಹಾರದಲ್ಲಿ ಬಹುಪಯೋಗಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ

September 15th, 12:01 pm

ಬಿಹಾರದ ರಾಜ್ಯಪಾಲರಾದ ಶ್ರೀ ಪಗು ಚೌವ್ಹಾಣ್ , ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರದೀಪ್ ಸಿಂಗ್ ಪುರಿ, ಶ್ರೀ ರವಿಶಂಕರ್ ಪ್ರಸಾದ್, ಕೇಂದ್ರ ಮತ್ತು ರಾಜ್ಯ ಸಚಿವ ಸಂಪುಟದ ಎಲ್ಲ ಸದಸ್ಯರೇ, ಎಲ್ಲ ಸಂಸದರು, ಶಾಸಕರು ಮತ್ತು ನನ್ನ ನೆಚ್ಚಿನ ಮಿತ್ರರೇ

ಬಿಹಾರದಲ್ಲಿ ‘ನಮಾಮಿ ಗಂಗೆ’ ಮತ್ತು ‘ಅಮೃತ್’ ನಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ

September 15th, 12:00 pm

ಬಿಹಾರದಲ್ಲಿ 'ನಮಾಮಿ ಗಂಗೆ' ಮತ್ತು 'ಅಮೃತ್' ಯೋಜನೆ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂದು ಉದ್ಘಾಟನೆಯಾದ ನಾಲ್ಕು ಯೋಜನೆಗಳಲ್ಲಿ ಪಾಟ್ನಾ ನಗರದ ಬ್ಯೂರ್ ಮತ್ತು ಕರಮ್–ಲೀಚಕ್‌ನಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು 'ಅಮೃತ್' ಯೋಜನೆಯಡಿ ಸಿವಾನ್ ಮತ್ತು ಛಾಪ್ರಾದಲ್ಲಿ ನೀರು–ಸಂಬಂಧಿತ ಯೋಜನೆಗಳು ಸೇರಿವೆ. ಇದಲ್ಲದೆ, ಮುಂಗೇರ್ ಮತ್ತು ಜಮಾಲ್‌ಪುರದ ನೀರು ಸರಬರಾಜು ಯೋಜನೆಗಳಿಗೆ ಮತ್ತು ನಮಾಮಿ ಗಂಗೆ ಅಡಿಯಲ್ಲಿ ಮುಜಾಫರ್ಪುರದ ನದಿ ತಟದ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.

People of Bihar have lost faith in Mahaswarthbandhan: PM Modi in Bihar

October 26th, 05:05 pm