ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
July 15th, 12:58 pm
ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 06:15 am
ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.Prime Minister addresses Australia-India CEOs Forum and Economic Roadmap Business event
July 09th, 06:00 am
PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರದ ಬಲವಾದ ಉತ್ತೇಜನ ಮತ್ತು ದೃಢವಾದ ನಾವೀನ್ಯತೆ ಪರಿಸರ ವ್ಯವಸ್ಥೆಯ ಬೆಳವಣಿಗೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 13th, 11:44 am
ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ಬಲವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ. ಭಾರತದ ಯುವಕರು ಆತ್ಮವಿಶ್ವಾಸದಿಂದ ತಮ್ಮ ಆಕಾಂಕ್ಷೆಗಳನ್ನು ಬೆನ್ನತ್ತಿರುವುದು ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ನಿರ್ಣಾಯಕ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.ಗುಜರಾತ್ ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 02:45 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಮೈಕ್ರಾನ್ ಟೆಕ್ನಾಲಜಿಯ ಸಿಇಒ ಸಂಜಯ್ ಮೆಹ್ರೋತ್ರಾ ಜೀ, ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಉಪಮುಖ್ಯಮಂತ್ರಿ ಹರ್ಷ ಸಂಘವಿ ಜೀ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ.ಗುಜರಾತ್‌ನ ಸನಂದ್‌ನಲ್ಲಿ ಮೈಕ್ರಾನ್ ಟೆಕ್ನಾಲಜಿಯ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 28th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರಾನ್ ಎಟಿಎಂಪಿಯನ್ನು ಉದ್ಘಾಟಿಸಿದರು (ಅಸೆಂಬ್ಲಿ, ಟೆಸ್ಟ್, ಮಾರ್ಕಿಂಗ್, ಮತ್ತು ಪ್ಯಾಕೇಜಿಂಗ್) ಸೌಲಭ್ಯವನ್ನು ಗುಜರಾತ್‌ನ ಸನಂದ್‌ನಲ್ಲಿ ಸ್ಥಾಪಿಸಲಾಗಿದೆ. ವಾಣಿಜ್ಯ ಉತ್ಪಾದನೆಯ ಆರಂಭವನ್ನು ಗುರುತಿಸುವ ಈ ಮಹತ್ವದ ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕತ್ವದತ್ತ ಭಾರತದ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಆಗಿದೆ.ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 12th, 06:45 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು
January 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
October 24th, 11:20 am
ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
October 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.