ಗುಜರಾತ್‌ನ ದಾಹೋದ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 26th, 11:45 am

ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು

May 26th, 11:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.

ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 02:00 pm

ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

April 24th, 01:30 pm

ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.

ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 09th, 09:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ವಾರಣಾಸಿಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ಅವರು 3,880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ

March 07th, 03:00 pm

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು

March 07th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.

Delhi needs a government that works in coordination, not one that thrives on conflicts: PM Modi

January 31st, 03:35 pm

Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”

PM Modi electrifies New Delhi’s Dwarka Rally with a High-Octane speech

January 31st, 03:30 pm

Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”

3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 04th, 07:45 pm

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.

ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ

July 03rd, 12:45 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ

July 03rd, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ

April 28th, 02:28 pm

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.

ಕರ್ನಾಟಕದ ಉತ್ತರ ಕನ್ನಡದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಪಠ್ಯ

April 28th, 11:30 am

ಉತ್ತರ ಕನ್ನಡದಲ್ಲಿ ನಡೆದ ಎರಡನೇ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಒಂದು ಕಡೆ ವೋಟ್ ಬ್ಯಾಂಕ್ ಹಸಿವಿನಿಂದ ರಾಮ ಮಂದಿರಕ್ಕೆ ಅಗೌರವ ತೋರುತ್ತಿದ್ದಾರೆ. ಇನ್ನೊಂದು ಬದಿಯಲ್ಲಿ, ಇಕ್ಬಾಲ್ ಅನ್ಸಾರಿ ಎಂಬ ಅನ್ಸಾರಿ ಕುಟುಂಬವಿದೆ, ಅವರ ಇಡೀ ಕುಟುಂಬವು ಮೂರು ತಲೆಮಾರುಗಳಿಂದ ರಾಮ ಮಂದಿರದ ವಿರುದ್ಧದ ಪ್ರಕರಣದಲ್ಲಿ ಹೋರಾಡಿದೆ ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ಅವರು ಅದನ್ನು ಒಪ್ಪಿಕೊಂಡರು. ರಾಮ ಮಂದಿರದ ಟ್ರಸ್ಟಿಗಳು ಅನ್ಸಾರಿ ಅವರನ್ನು ಆಹ್ವಾನಿಸಿದಾಗ, ಅವರು 'ಪ್ರಾಣ ಪ್ರತಿಷ್ಠಾ'ದಲ್ಲಿ ಪಾಲ್ಗೊಂಡರು.

ಪ್ರಧಾನಿ ಮೋದಿ ಅವರು ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 28th, 11:00 am

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಪ್ರಗತಿಯತ್ತ ಸಾಗಿದಾಗ ಎಲ್ಲರೂ ಸಂತೋಷದಿಂದ ಇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ 'ಪರಿವಾರ್ಹಿತ್'ನಲ್ಲಿ ಎಷ್ಟು ತೊಡಗಿದೆಯೆಂದರೆ ಅದು ಭಾರತ ಮಾಡುವ ಪ್ರತಿಯೊಂದು ಅಭಿವೃದ್ಧಿಯ ದಾಪುಗಾಲಿನಿಂದ ವಿಚಲಿತಗೊಳ್ಳುತ್ತದೆ.

ಇಂಡಿ ಮೈತ್ರಿ ಯಾವಾಗಲೂ ದೇಶವನ್ನು ಅಸ್ಥಿರತೆಗೆ ತಳ್ಳಿದೆ: ಚಂದ್ರಾಪುರದಲ್ಲಿ ಪ್ರಧಾನಿ ಮೋದಿ

April 08th, 05:01 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಲೇ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಸ್ಥಿರತೆ ಮತ್ತು ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದರು. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ರಾಷ್ಟ್ರದ ಒಳಿತಿಗಾಗಿ ನಿರಂತರ ಪ್ರಯತ್ನಗಳಿಗೆ ಕರೆ ನೀಡಿದರು.

ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

April 08th, 05:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಲೇ ಮಹಾರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಸ್ಥಿರತೆ ಮತ್ತು ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದರು. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಎತ್ತಿ ತೋರಿಸಿದರು ಮತ್ತು ರಾಷ್ಟ್ರದ ಒಳಿತಿಗಾಗಿ ನಿರಂತರ ಪ್ರಯತ್ನಗಳಿಗೆ ಕರೆ ನೀಡಿದರು.

ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 07th, 12:20 pm

ನನ್ನ ಕಾಶ್ಮೀರಿ ಸಹೋದರ ಸಹೋದರಿಯರೆ, ಭೂಮಿಯ ಮೇಲಿನ ಈ ಸ್ವರ್ಗದಲ್ಲಿರುವಾಗ, ಈ ಅಪೂರ್ವವಾದ ಪ್ರಕೃತಿ ಸೌಂದರ್ಯ ಅನುಭವಿಸುವ, ಈ ಶುದ್ಧ ಗಾಳಿಯನ್ನು ಉಸಿರಾಡುವ ಮತ್ತು ನಿಮ್ಮ ಪ್ರೀತಿಯ ಬೆಚ್ಚಗಾಗುವ ಭಾವನೆ ಸೆರೆಹಿಡಿಯಲು ನನಗೆ ಪದಗಳೇ ನಿಲುಕುತ್ತಿಲ್ಲ!

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

March 07th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ವದೇಶ್ ದರ್ಶನ್ ಮತ್ತು ಶ್ರೀನಗರದ ‘ಹಜರತ್‌ ಬಾಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ’ ಯೋಜನೆ ಸೇರಿದಂತೆ 1400 ಕೋಟಿ ರೂ.ಗಿಂತ ಹೆಚ್ಚಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ಮತ್ತು ‘ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (ಸಿಬಿಡಿಡಿ) ಯೋಜನೆಯಡಿ ಆಯ್ಕೆಯಾದ ಪ್ರವಾಸಿ ತಾಣಗಳನ್ನು ಘೋಷಿಸಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 1000 ಹೊಸ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ಲಕ್ಷಾಧಿಪತಿ ದೀದಿಗಳು, ರೈತರು, ಉದ್ಯಮಿಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.