Cabinet approves 4 lane construction from Barabanki to Bahraich in Uttar Pradesh worth Rs.6969.04 crore

March 18th, 04:10 pm

The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.

ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

September 11th, 08:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ವಿನೋಬಾ ಭಾವೆಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಭಾರತದ ಆಧ್ಯಾತ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಅವರ ಅತ್ಯುನ್ನತ ಕೊಡುಗೆಗಳನ್ನು ಸ್ಮರಿಸಿದರು.

ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 02nd, 03:45 pm

ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

May 02nd, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ

March 26th, 11:00 am

ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.

ಆಧ್ಯಾತ್ಮಿಕ ನಾಯಕರ ಸಂದೇಶದಿಂದಾಗಿ ಭಾರತವು ಇತರ ದೇಶಗಳಲ್ಲಿ ಕಂಡುಬರುವಂತೆ ಲಸಿಕೆ ಹಿಂಜರಿಕೆಯನ್ನು ಎದುರಿಸಲಿಲ್ಲ: ಪ್ರಧಾನಿ

August 24th, 11:01 am

ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಆಸ್ಪತ್ರೆಯು ಆಧುನಿಕತೆ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವಾಗಿದ್ದು, ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ಮತ್ತು ಕೈಗೆಟುಕುವ ಚಿಕಿತ್ಸೆಯ ಮಾಧ್ಯಮವಾಗಲಿದೆ ಎಂದು ಅವರು ಹೇಳಿದರು.

ಫರಿದಾಬಾದ್ ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ

August 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಶ್ರೀ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್, ಉಪಮುಖ್ಯಮಂತ್ರಿ ಶ್ರೀ ದುಷ್ಯಂತ್ ಚೌತಾಲಾ, ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜಾರ್, ಶ್ರೀ ಮಾತಾ ಅಮೃತಾನಂದಮಯಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.

ರಾಮ ನವಮಿಯ ಶುಭಸಂದರ್ಭದಲ್ಲಿ ಜುನಾಗಢ್‌ ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ

April 09th, 04:33 pm

ರಾಮ ನವಮಿಯ ಶುಭಸಂದರ್ಭದಲ್ಲಿ, 10ನೇ ಏಪ್ರಿಲ್, 2022 ರಂದು ಮಧ್ಯಾಹ್ನ 1 ಗಂಟೆಗೆ ಗುಜರಾತ್‌ನ ಜುನಾಗಢ್‌ ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಸ್ಥಾನದಲ್ಲಿ, ಅದರ 14 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಲಿದ್ದಾರೆ.

ಅಕ್ಟೋಬರ್ 15 ರಂದು ಸೂರತ್ ನಲ್ಲಿ ಸೌರಾಷ್ಟ್ರ ಪಟೇಲ್ ಸೇವಾ ಸಮಾಜದ ವಸತಿ ನಿಲಯ ಹಂತ – 1 ರ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಲಿರುವ ಪ್ರಧಾನಮಂತ್ರಿ

October 14th, 02:33 pm

ಸೌರಾಷ್ಟ್ರ ಪಟೇಲ್ ಸೇವಾ ಸಮಾಜದ ವಸತಿ ನಿಲಯ ಹಂತ – 1 ರ ಕಟ್ಟಡದ ಭೂಮಿ ಪೂಜೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ನೆರವೇರಿಸಲಿದ್ದಾರೆ.

ರಫ್ತುದಾರರು ಹಾಗೂ ಬ್ಯಾಂಕುಗಳಿಗೆ ಬೆಂಬಲ ನೀಡಲು 5 ವರ್ಷಗಳಲ್ಲಿ ಇಸಿಜಿಸಿ ಲಿಮಿಟೆಡ್‌ನಲ್ಲಿ 4,400 ಕೋಟಿ ರೂ. ಹೂಡಿಕೆಗೆ ಸರ್ಕಾರದ ಅನುಮೋದನೆ

September 29th, 04:18 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್‌ಗೆ (ಹಿಂದೆ ಇದನ್ನು ಭಾರತೀಯ ರಫ್ತು ಸಾಲ ಖಾತ್ರಿ ನಿಗಮ ಎಂದು ಕರೆಯಲಾಗುತ್ತಿತ್ತು) ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು ವರ್ಷದವರೆಗೆ, 4,400 ಕೋಟಿ ರೂ ಬಂಡವಾಳ ಪುನರ್ಧನವನ್ನು ಅನುಮೋದಿಸಿದೆ. ಅನುಮೋದಿತ ಪುನರ್ಧನ ಮತ್ತು ಐಪಿಒ ಮೂಲಕ ಅಧಿಕ ರಫ್ತುಗಳಿಗೆ ಬೆಂಬಲ ನೀಡಲು ಇಸಿಜಿಸಿಯ ತಾಳಿಕೆ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

"ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಸಮಗ್ರ ವಿವಿಧೋದ್ದೇಶ ನಿಗಮ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ: 25 ಕೋಟಿ ಮೂಲ ಬಂಡವಾಳದೊಂದಿಗೆ ಆ ಭಾಗದ ಅಭಿವೃದ್ಧಿಗೆ ಸ್ಥಾಪನೆಯಾಗುತ್ತಿರುವ ಮೊದಲ ನಿಗಮ "

July 22nd, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಸಮಗ್ರ ವಿವಿಧೋದ್ದೇಶ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮೋದನೆ ನೀಡಿದೆ.

ಸಿಎಸ್ಐಆರ್ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

June 04th, 10:28 am

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಸ್‌ಐಆರ್ ಸೊಸೈಟಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಹಿಸಿದ್ದರು. ಕೊರೋನಾ ಸಾಂಕ್ರಾಮಿಕ ಈ ಶತಮಾನದ ಅತಿದೊಡ್ಡ ಸವಾಲಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ಮೋದಿ ಹೇಳಿದರು . ಆದರೆ ಹಿಂದೆ ದೊಡ್ಡ ಮಾನವೀಯ ಬಿಕ್ಕಟ್ಟು ಉಂಟಾದಾಗಲೆಲ್ಲಾ ವಿಜ್ಞಾನವು ಉತ್ತಮ ಭವಿಷ್ಯದ ಹಾದಿಯನ್ನು ಸಿದ್ಧಪಡಿಸಿದೆ.

ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಸಿಎಸ್ಐಆರ್ ಸೊಸೈಟಿಯ ಸಭೆ

June 04th, 10:27 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್ಐಆರ್) ಸೊಸೈಟಿಯ ಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.

ಡಾ. ಹರೇಕೃಷ್ಣಾ ಮಹತಾಬ್ ಅವರ ಒಡಿಶಾ ಇತಿಹಾಸದ ಹಿಂದಿ ಆವೃತ್ತಿಯ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ

April 09th, 12:18 pm

ಈ ಸಮಾರಂಭದಲ್ಲಿ ನನ್ನೊಂದಿಗೆ ಹಾಜರಿರುವ ಭರ್ತ್ರುಹರಿ ಮಹತಾಬ್ ಜಿ, ಅವರು ಕೇವಲ ಲೋಕಸಭೆಯಲ್ಲಿ ಸದಸ್ಯರಲ್ಲ, ಉತ್ತಮ ಸಂಸದರು ತಮ್ಮ ಕರ್ತವ್ಯಗಳನ್ನು ಹೇಗೆ ನಿರ್ವಹಿಸಬಲ್ಲರು ಎನ್ನುವುದಕ್ಕೆ ಜೀವಂತ ಉದಾಹರಣೆ ಅವರು, ಧರ್ಮೇಂದ್ರ ಪ್ರಧಾನ್ ಜಿ, ಇತರ ಹಿರಿಯ ಗಣ್ಯರು, ಮಹಿಳೆಯರೆ ಮತ್ತು ಮಹನೀಯರೆ! ‘ಉತ್ಕಲ್ ಕೇಶರಿ’ಹರೇಕೃಷ್ಣಾ ಮಹತಾಬ್ ಜಿ ಅವರೊಂದಿಗೆ ಸಂಬಂಧಿಸಿದ ಈ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಕ್ಕಿದ್ದು ನನಗೆ ಬಹಳ ಸಂತೋಷದ ಸಂಗತಿಯಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ನಾವೆಲ್ಲರೂ ‘ಉತ್ಕಲ್ ಕೇಸರಿ’ ಹರೇಕೃಷ್ಣಾ ಮಹತಾಬ್ ಜಿ ಅವರ 120 ನೇ ಜನ್ಮ ದಿನಾಚರಣೆಯನ್ನು ಬಹಳ ಸ್ಪೂರ್ತಿದಾಯಕ ಸಂದರ್ಭವಾಗಿ ಆಚರಿಸಿದ್ದೇವೆ. ಇಂದು ನಾವು ಅವರ ಪ್ರಸಿದ್ಧ ಪುಸ್ತಕ ‘ಒಡಿಶಾ ಇತಿಹಾಸ್’(ಇತಿಹಾಸ) ನ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಒಡಿಶಾದ ವಿಶಾಲ ಮತ್ತು ವೈವಿಧ್ಯಮಯ ಇತಿಹಾಸವು ದೇಶದ ಜನರನ್ನು ತಲುಪುವುದು ಬಹಳ ಮುಖ್ಯ. ಒಡಿಯಾ ಮತ್ತು ಇಂಗ್ಲಿಷ್ ನಂತರ ಹಿಂದಿ ಆವೃತ್ತಿಯ ಮೂಲಕ ನೀವು ಇದರ ಅಗತ್ಯವನ್ನು ಪೂರೈಸಿದ್ದೀರಿ. ಈ ನವೀನ ಪ್ರಯತ್ನಕ್ಕಾಗಿ ಭಾಯಿ ಭರ್ತ್ರುಹರಿ ಮಹತಾಬ್ ಜಿ, ಹರೇಕೃಷ್ಣಾ ಮಹತಾಬ್ ಫೌಂಡೇಶನ್ ಮತ್ತು ವಿಶೇಷವಾಗಿ ಶಂಕರ್ ಲಾಲ್ ಪುರೋಹಿತ್ ಜಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ.

ಡಾ. ಹರೇಕೃಷ್ಣ ಮಹ್ತಾಬ್‌ ಅವರ ಒಡಿಶಾ ಇತಿಹಾಸ್‌ ಪುಸ್ತಕದ ಹಿಂದಿ ಆವೃತ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ

April 09th, 12:17 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 'ಉತ್ಕಲ್ ಕೇಶರಿ' ಡಾ. ಹರೇಕೃಷ್ಣ ಮಹ್ತಾಬ್‌ ಅವರು ರಚಿಸಿರುವ 'ಒಡಿಶಾ ಇತಿಹಾಸ್' ಪುಸ್ತಕದ ಹಿಂದಿ ಅನುವಾದವನ್ನು ಲೋಕಾರ್ಪಣೆ ಮಾಡಿದರು. ಒಡಿಯಾ ಮತ್ತು ಇಂಗ್ಲಿಷ್‌ನಲ್ಲಿ ಇಲ್ಲಿಯವರೆಗೆ ಲಭ್ಯವಿದ್ದ ಈ ಪುಸ್ತಕವನ್ನು ಶ್ರೀ ಶಂಕರ್‌ಲಾಲ್‌ ಪುರೋಹಿತ್‌ ಅವರು ಹಿಂದಿಗೆ ಅನುವಾದಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಕಟಕ್ ಸಂಸದರಾದ ಶ್ರೀ ಭರ್ತೃಹರಿ ಮಹ್ತಾಬ್‌ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PM Modi requests spiritual leaders to promote Aatmanirbhar Bharat by going vocal for local

November 16th, 12:46 pm

PM Modi unveiled ‘Statue of Peace’ to mark the 151st birth anniversary celebrations of Jainacharya Shree Vijay Vallabh Surishwer Ji Maharaj. Reiterating his stress on ‘vocal for local’ Shri Modi requested that as happened during the freedom struggle, all the spiritual leaders should amplify the message of Aatmanirbhar Bharat.

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ‘ಶಾಂತಿ ಪ್ರತಿಮೆ’ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

November 16th, 12:45 pm

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಸ್ಮರಣಾರ್ಥ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಿದರು. ಜೈನಾಚಾರ್ಯರ ಗೌರವಾರ್ಥವಾಗಿ ಅನಾವರಣಗೊಳಿಸಿದ ಈ ಪ್ರತಿಮೆಗೆ ‘ಶಾಂತಿ ಪ್ರತಿಮೆ’ ಎಂದು ಹೆಸರಿಸಲಾಗಿದೆ. 151 ಇಂಚು ಎತ್ತರದ ಪ್ರತಿಮೆಯನ್ನು ಅಷ್ಟಾಧಾತು ಅಂದರೆ ಅಷ್ಟ ಲೋಹಗಳಿಂದ ತಯಾರಿಸಲಾಗಿದ್ದು, ತಾಮ್ರವನ್ನು ಪ್ರಮುಖವಾಗಿ ಬಳಸಲಾಗಿದೆ. ರಾಜಸ್ಥಾನದ ಪಾಲಿಯಲ್ಲಿರುವ ಜೆತ್ಪುರದ ವಿಜಯ ವಲ್ಲಭ ಸಾಧನಾ ಕೇಂದ್ರದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

Balasaheb Vikhe Patil Ji's work for the progress of poor, efforts towards education in Maharashtra will inspire generations to come: PM

October 13th, 11:01 am

PM Narendra Modi released the biography of late Dr. Balasaheb Vikhe Patil. Speaking on the occasion, PM Modi said, Balasaheb’s work for the progress of poor, efforts towards education and success of cooperative in Maharashtra will inspire generations to come.