ಭಾರತದ ಗ್ರ್ಯಾಂಡ್ ಮುಫ್ತಿ ಶೇಖ್ ಅಬೂಬಕರ್ ಅಹ್ಮದ್ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ
February 16th, 08:16 pm
ಭಾರತದ ಗ್ರ್ಯಾಂಡ್ ಮುಫ್ತಿ ಶೇಖ್ ಅಬೂಬಕರ್ ಅಹ್ಮದ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು. ಭೇಟಿಯ ಸಮಯದಲ್ಲಿ, ಉಭಯರು ವಿವಿಧ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ದೇಶಾದ್ಯಂತ ಸಾಮಾಜಿಕ ಸಾಮರಸ್ಯ, ಭ್ರಾತೃತ್ವ ಮತ್ತು ಶಿಕ್ಷಣವನ್ನು ಸುಧಾರಿಸಲು ಗ್ರ್ಯಾಂಡ್ ಮುಫ್ತಿ ಅವರ ಶ್ಲಾಘನೀಯ ಪ್ರಯತ್ನಗಳನ್ನು ಪ್ರಧಾನಮಂತ್ರಿ ಗಮನಿಸಿದರು.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ರಾಷ್ಟ್ರೀಯ ಸಾಮರಸ್ಯಕ್ಕಾಗಿ ಸಂಸ್ಕೃತ ಶ್ಲೋಕ ಪಠಣದ ಮೂಲಕ ಕೋಪವನ್ನು ಮೀರಿ ಬೆಳೆಯುವ ಅಗತ್ಯತೆಯನ್ನು ಪ್ರತಿಪಾದಿಸಿದ ಪ್ರಧಾನಮಂತ್ರಿ
December 12th, 09:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಪದ ವಿನಾಶಕಾರಿ ಸ್ವರೂಪ ಮತ್ತು ವೈಯಕ್ತಿಕ ಯೋಗಕ್ಷೇಮ ಮತ್ತು ಸಾಮೂಹಿಕ ಪ್ರಗತಿಗೆ ಆಂತರಿಕ ಸಂಯಮದ ಮಹತ್ವವನ್ನು ಒತ್ತಿ ಹೇಳುವ ಗಂಭೀರವಾದ ಸಂದೇಶವನ್ನು ಹಂಚಿಕೊಂಡಿದ್ದಾರೆ.ಭಗವಾನ್ ಬುದ್ಧನ ಪವಿತ್ರ ಅವಶೇಷಗಳಿಗೆ ನೀಡಿದ ಗೌರವಯುತ ಸ್ವಾಗತಕ್ಕೆ ಭೂತಾನಿನ ಜನರು ಮತ್ತು ದೊರೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
November 09th, 03:43 pm
ಭಾರತದಿಂದ ಭಗವಾನ್ ಬುದ್ಧನ ಪವಿತ್ರ ಅವಶೇಷಗಳಿಗೆ ನೀಡಿದ ಗೌರವಯುತ ಸ್ವಾಗತಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೂತಾನಿನ ಜನರು ಮತ್ತು ಅಲ್ಲಿನ ದೊರೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಗವಾನ್ ಬುದ್ಧನ ಅವಶೇಷಗಳು ಶಾಂತಿ, ಕರುಣೆ ಮತ್ತು ಸಾಮರಸ್ಯದ ಕಾಲಾತೀತ ಸಂದೇಶವನ್ನು ಸಂಕೇತಿಸುತ್ತವೆ. ಭಗವಾನ್ ಬುದ್ಧನ ಬೋಧನೆಗಳು ನಮ್ಮ ಎರಡೂ ರಾಷ್ಟ್ರಗಳ ಹಂಚಿಕೆಯ ಆಧ್ಯಾತ್ಮಿಕ ಪರಂಪರೆಯ ನಡುವಿನ ಪವಿತ್ರ ಕೊಂಡಿಯಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 08th, 05:33 pm
ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 08th, 05:00 pm
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.130 ವರ್ಷಗಳ ಹಿಂದೆ ಇದೇ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣವನ್ನು ಸ್ಮರಿಸಿದ ಪ್ರಧಾನ ಮಂತ್ರಿ
September 11th, 03:39 pm
ಸ್ವಾಮಿ ವಿವೇಕಾನಂದರು 130 ವರ್ಷಗಳ ಹಿಂದೆ ಇದೇ ದಿನದಂದು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ ಇಂದಿಗೂ ಜಾಗತಿಕ ಏಕತೆ ಮತ್ತು ಸೌಹಾರ್ದತೆಯ ಸ್ಪಷ್ಟ ಕರೆಯಾಗಿ ಪ್ರತಿಧ್ವನಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.ಸ್ವಚ್ಛತೆಯನ್ನು ಉತ್ತೇಜಿಸಲು ಸೀತಾಪುರದ ಸಂಸದ ರಾಜೇಶ್ ವರ್ಮಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಿ
February 22nd, 10:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸೀತಾಪುರ (ಉತ್ತರ ಪ್ರದೇಶ) ಲೋಕಸಭಾ ಸದಸ್ಯ ಶ್ರೀ ರಾಜೇಶ್ ವರ್ಮಾ ಅವರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.ಸಾವಿತ್ರಿಬಾಯಿ ಫುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 03rd, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾವಿತ್ರಿಬಾಯಿ ಫುಲೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು
August 14th, 09:08 am
ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 17th, 12:07 pm
ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.ಮಹಿಳೆಯರ ಪ್ರಗತಿಯು ರಾಷ್ಟ್ರದ ಸಬಲೀಕರಣಕ್ಕೆ ಶಕ್ತಿ ನೀಡುತ್ತದೆ: ಪ್ರಧಾನಿ ಮೋದಿ
March 08th, 06:03 pm
ಕಛ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಮಹಿಳೆಯರು ನೈತಿಕತೆ, ನಿಷ್ಠೆ, ನಿರ್ಣಾಯಕತೆ ಮತ್ತು ನಾಯಕತ್ವದ ಪ್ರತಿಬಿಂಬ ಎಂದು ಪ್ರಧಾನಿ ಹೇಳಿದರು. ನಮ್ಮ ವೇದಗಳು ಮತ್ತು ಸಂಪ್ರದಾಯಗಳು ಮಹಿಳೆಯರು ಶಕ್ತರಾಗಿರಬೇಕು, ರಾಷ್ಟ್ರಕ್ಕೆ ನಿರ್ದೇಶನ ನೀಡಲು ಸಮರ್ಥರಾಗಿರಬೇಕು ಎಂದು ಕರೆ ನೀಡಿವೆಎಂದು ಅವರು ಹೇಳಿದರು.ಪ್ರಧಾನಮಂತ್ರಿ ಅವರು ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು
March 08th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎಂದರೆ ದಂಗರಾಜ್, ಮಾಫಿರಾಜ್, ಗುಂಡರಾಜ್ ಮೇಲೆ ನಿಯಂತ್ರಣ: ಸೀತಾಪುರದಲ್ಲಿ ಪ್ರಧಾನಿ ಮೋದಿ
February 16th, 03:46 pm
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ನಡುವೆ, ಇಂದು ಸೀತಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ರ್ಯಾಲಿ ಅಬ್ಬರ ಮುಂದುವರೆದಿದೆ. ಸಂತ ರವಿದಾಸ್ ಜಿ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ದಶಕಗಳಿಂದಲೂ ಸಂತ ರವಿದಾಸ್ ಜಿ ಅವರ ಭಕ್ತರು ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು, ಆದರೆ ಹಿಂದಿನ ಸರ್ಕಾರಗಳು ಚುನಾವಣಾ ಸಮಯದಲ್ಲಿ ಇಲ್ಲಿಗೆ ಬಂದು ಛಾಯಾಚಿತ್ರಗಳನ್ನು ತೆಗೆದುಕೊಂಡು ಹೋದರು. ಸಂತ ರವಿದಾಸ್ ಜಿ ಅವರು ಜನಿಸಿದ ಕಾಶಿಯ ಸಂಸದ ನಾನು ಎಂಬುದು ನನಗೆ ಸಂತೋಷದ ವಿಷಯ. ನಾವು ಸಂತ ರವಿದಾಸ್ ಜಿ ಅವರ ಜನ್ಮಸ್ಥಳವನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ.