ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ

April 14th, 01:25 pm

ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 14th, 01:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 13th, 11:15 am

ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.

‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.

ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 05th, 09:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 24th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭವಾದ ಇಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಧಾನಮಂತ್ರಿಯವರು ಅವರನ್ನು “ವರ್ಚಸ್ವಿ ನಾಯಕಿ ಮತ್ತು ಹೃದಯ ಹಾಗೂ ಮನಸ್ಸುಗಳಲ್ಲಿ ಶಾಶ್ವತ ಸ್ಥಾನ ಗಳಿಸಿದ ಅತ್ಯುತ್ತಮ ಆಡಳಿತಗಾರ್ತಿ” ಎಂದು ಸ್ಮರಿಸಿದರು.

ಅಟಲ್ ಪಿಂಚಣಿ ಯೋಜನೆ (ಎಪಿವೈ) ಮುಂದುವರಿಕೆ ಮತ್ತು 2030-31 ರವರೆಗೆ ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು ಮತ್ತು ಅಂತರ ನಿಧಿಗೆ ಹಣಕಾಸು ಬೆಂಬಲವನ್ನು ವಿಸ್ತರಿಸಲು ಸಂಪುಟದ ಅನುಮೋದನೆ

January 21st, 12:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಅಟಲ್ ಪಿಂಚಣಿ (ಎಪಿವೈ) ಯನ್ನು 2030-31ರ ಹಣಕಾಸು ವರ್ಷದವರೆಗೆ ಮುಂದುವರಿಸಲು ಅನುಮೋದನೆ ನೀಡಿದೆ. ಇದರೊಂದಿಗೆ ಪ್ರಚಾರ ಮತ್ತು ಅಭಿವೃದ್ಧಿ ಚಟುವಟಿಕೆಗಳು ಹಾಗೂ 'ಗ್ಯಾಪ್ ಫಂಡಿಂಗ್' (ಹಣಕಾಸಿನ ಅಂತರವನ್ನು ಭರಿಸುವಿಕೆ) ಬೆಂಬಲವನ್ನು ವಿಸ್ತರಿಸಲಾಗಿದೆ.

ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 17th, 08:30 pm

ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.

ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 17th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

Bihar doesn't need ‘Katta Sarkar’: PM Modi in Sitamarhi

November 08th, 11:15 am

PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.

Unstoppable wave of support as PM Modi addresses rallies in Sitamarhi and Bettiah, Bihar

November 08th, 11:00 am

PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.

ಪಸುಂಪೊನ್ ಮುಥುರಾಲಿಂಗ ತೇಜರ್ ಅವರ ಗುರು ಪೂಜೆಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

October 30th, 12:35 pm

ಪೂಜ್ಯ ಪಸುಂಪೊನ್ ಮುಥುರಾಲಿಂಗ ತೇಜರ್ ಅವರ ಗುರು ಪೂಜೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರಿಗೆ ಹೃತ್ಪೂರ್ವಕ ನಮನ ಸಲ್ಲಿಸಿದ್ದಾರೆ.

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಗೌರವ ನಮನ

October 11th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಭಾರತದ ಅತ್ಯಂತ ನಿರ್ಭೀತ ಆತ್ಮಸಾಕ್ಷಿಯ ಧ್ವನಿಗಳಲ್ಲಿ ಒಬ್ಬರು, ಅವರು ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದಣಿವರಿಯದ ಪ್ರತಿಪಾದಕ ಎಂದು ಪ್ರಧಾನಮಂತ್ರಿ ಅವರನ್ನು ಬಣ್ಣಿಸಿದ್ದಾರೆ.

ಪ್ರಧಾನಮಂತ್ರಿ ಅವರು ಮಹಾತ್ಮ ಅಯ್ಯಂಕಾಳಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದರು

August 28th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮ ಅಯ್ಯಂಕಾಳಿ ಅವರ ಜಯಂತಿಯಂದು ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು, ಅವರನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಶಾಶ್ವತ ಸಂಕೇತ ಎಂದು ಸ್ಮರಿಸಿದರು. ಶ್ರೀ ಮೋದಿ ಅವರು, ಶಿಕ್ಷಣ ಮತ್ತು ಸಮಾನತೆಗೆ ಮಹಾತ್ಮ ಅಯ್ಯಂಕಾಳಿ ಅವರ ಅಚಲ ಬದ್ಧತೆ, ಜೊತೆಗೆ ಅವರ ಪರಂಪರೆಯು ಸಮಗ್ರ ಪ್ರಗತಿಯತ್ತ ರಾಷ್ಟ್ರದ ಸಾಮೂಹಿಕ ಪ್ರಯಾಣವನ್ನು ಈಗಲೂ ಪ್ರೇರೇಪಿಸುತ್ತಿದೆ ಎಂದು ಉಲ್ಲೇಖಿಸಿದರು.

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

July 15th, 10:50 am

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಅಕ್ರಾದ ನುಕ್ರುಮಾ ಸ್ಮಾರಕ ಉದ್ಯಾನವನದಲ್ಲಿ ಪ್ರಧಾನಮಂತ್ರಿ ಗೌರವ ನಮನ

July 03rd, 03:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘಾನಾ ರಾಷ್ಟ್ರದ ಅಕ್ರಾದಲ್ಲಿರುವ ನುಕ್ರುಮಾ ಸ್ಮಾರಕ ಉದ್ಯಾನವನಕ್ಕೆ ಭೇಟಿ ನೀಡಿ, ಘಾನಾದ ಸಂಸ್ಥಾಪಕ ಅಧ್ಯಕ್ಷರು ಮತ್ತು ಆಫ್ರಿಕಾದ ಸ್ವಾತಂತ್ರ್ಯ ಚಳವಳಿಯ ನೇತಾರರಾದ ಡಾ. ಕ್ವಾಮೆ ನುಕ್ರುಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಘಾನಾದ ಉಪಾಧ್ಯಕ್ಷರಾದ ಮಾನ್ಯ ಪ್ರೊ. ನಾನಾ ಜೇನ್ ಒಪೊಕು-ಅಗ್ಯೆಮಾಂಗ್ ಅವರು ಪ್ರಧಾನಮಂತ್ರಿ ಅವರ ಜೊತೆಗಿದ್ದರು. ಸ್ವಾತಂತ್ರ್ಯ, ಏಕತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಡಾ. ಉನ್ ಕ್ರುಮಾ ಅವರ ದೀರ್ಘಕಾಲ ಉಳಿಯುವ ಕೊಡುಗೆಗಳ ಗೌರವಾರ್ಥ ಪ್ರಧಾನಮಂತ್ರಿ ಅವರು ಪುಷ್ಪಗುಚ್ಛವನ್ನಿರಿಸಿ ಒಂದು ಕ್ಷಣ ಮೌನ ಆಚರಿಸಿದರು.

ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

March 23rd, 09:02 am

ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಹಿಯಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರನ್ನು ದೂರದೃಷ್ಟಿಯ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಎಂದು ಸ್ಮರಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 26th, 08:15 pm

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!