80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೆಂಪು ಕೋಟೆಯ ವೇದಿಕೆಯಿಂದ ಮಾಡಿದ ಭಾಷಣದ ಪ್ರಮುಖ ಮುಖ್ಯಾಂಶಗಳು
August 15th, 04:44 pm
80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಂದು ಕೆಂಪು ಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಕಳೆದ 12 ವರ್ಷಗಳಲ್ಲಿ ಉತ್ಪಾದನೆ, ಡಿಜಿಟಲ್ ಬೆಳವಣಿಗೆ ಮತ್ತು ನಾಗರಿಕ ವಿತರಣೆಯಲ್ಲಿ ಭಾರತದ ಪ್ರಗತಿಯ ವಿವರವಾದ ವರದಿ ಕಾರ್ಡ್ ಅನ್ನು ಅವರು ಪ್ರಸ್ತುತಪಡಿಸಿದರು. ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಸಾಧಿಸಲು ಏಳು ಪ್ರಮುಖ ವಲಯಗಳನ್ನು ಒಳಗೊಂಡಿರುವ ಪರಿವರ್ತಕ ಸಪ್ತ ಧಾರವನ್ನು ಸಹ ಅವರು ಅನಾವರಣಗೊಳಿಸಿದರು.12 ವರ್ಷಗಳ ಪರಿವರ್ತನೆ: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಭಾರತದ ಪ್ರಗತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಮೋದಿ
August 15th, 01:18 pm
ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದ 12 ವರ್ಷಗಳಲ್ಲಿ ಭಾರತದ ಪರಿವರ್ತನೆಯನ್ನು ಎತ್ತಿಹಿಡಿದರು, ಉತ್ಪಾದನೆ, ಡಿಜಿಟಲ್ ಮೂಲಸೌಕರ್ಯ, ಮೂಲಭೂತ ಸೌಕರ್ಯಗಳು, ಇಂಧನ ಭದ್ರತೆ, ಯುವ ಸಬಲೀಕರಣ, ನಾವೀನ್ಯತೆ, ಸಾಮಾಜಿಕ ಭದ್ರತೆ ಮತ್ತು ಇತರ ಪ್ರಮುಖ ವಲಯಗಳಾದ್ಯಂತ ಸಾಧಿಸಿದ ಪ್ರಗತಿಯನ್ನು ವಿವರಿಸಿದರು.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ
June 17th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.India and Slovakia are moving forward in close coordination on the global stage: PM Modi at the India-Slovakia Joint Press Meet
June 15th, 03:00 pm
At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.ಸೈಪ್ರಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 22nd, 01:00 pm
ನಿಮ್ಮ ಸಂಪೂರ್ಣ ಭೇಟಿ ಸಮಯದಲ್ಲಿ, ನಾವು ನಿಜವಾಗಿಯೂ ನಿಮ್ಮ ಬೆಚ್ಚಗಿನ ಸ್ನೇಹ ಮತ್ತು ಭಾರತದೊಂದಿಗಿನ ಬಲವಾದ ಸಂಪರ್ಕವನ್ನು ಅನುಭವಿಸಿದ್ದೇವೆ. ಇಂದು ನಿಮ್ಮ ಭಾರತ ಭೇಟಿಯು ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸೂಚಿಸುತ್ತದೆ.ಭಾರತ-ಇಟಲಿ ಜಂಟಿ ಘೋಷಣೆ
May 20th, 10:28 pm
ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಸಹ ಶ್ಲಾಘಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.