ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿಯೆಂಬ ಹೆಗ್ಗಳಿಕೆ ಗಳಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರ ಅಭಿನಂದನೆ
June 09th, 07:32 pm
ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರ ಪರಿವರ್ತನಾತ್ಮಕ ಆಡಳಿತ, ಜಾಗತಿಕ ದಕ್ಷಿಣಕ್ಕಾಗಿ ಅವರ ಪ್ರತಿಪಾದನೆ ಮತ್ತು ಸಮಗ್ರ ಮತ್ತು ಆರ್ಥಿಕವಾಗಿ ಸಕ್ರಿಯ ಭಾರತದ ಅವರ ದೂರದೃಷ್ಟಿಗೆ ಜಗತ್ತಿನಾದ್ಯಂತದ ವಿಶ್ವ ನಾಯಕರು ಗೌರವ ಸಲ್ಲಿಸಿದ್ದಾರೆ.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಭಾರತದ ಮಧ್ಯಮ ವರ್ಗವನ್ನು ಬೆಂಬಲಿಸಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ
September 04th, 08:53 pm
ಭಾರತದ ಮಧ್ಯಮ ವರ್ಗವನ್ನು ಬೆಂಬಲಿಸಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇದು ದೇಶದ ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ಪರಿವರ್ತನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಮುಂದುವರೆದಿದೆ ಎಂದು ತಿಳಿಸಿದ್ದಾರೆ.