ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 19th, 07:01 pm

ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

November 19th, 02:30 pm

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಉದ್ಘಾಟನೆ ಮತ್ತು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ

October 11th, 12:30 pm

ಇಂದು, ಅಕ್ಟೋಬರ್ 11, ಒಂದು ಐತಿಹಾಸಿಕ ದಿನ. ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ ಭಾರತ ಮಾತೆಯ ಇಬ್ಬರು ಮಹಾನ್ ರತ್ನಗಳಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜೀ ಮತ್ತು ಭಾರತ ರತ್ನ ಶ್ರೀ ನಾನಾ ಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರೂ ಮಹಾನ್ ಪುತ್ರರು ಗ್ರಾಮೀಣ ಭಾರತದ ಧ್ವನಿಯಾಗಿದ್ದರು, ಪ್ರಜಾಪ್ರಭುತ್ವ ಕ್ರಾಂತಿಯ ನಾಯಕರಾಗಿದ್ದರು ಮತ್ತು ರೈತರು ಹಾಗು ಬಡವರ ಕಲ್ಯಾಣಕ್ಕೆ ಸಮರ್ಪಿಸಿಕೊಂಡಿದ್ದರು. ಇಂದು, ಈ ಐತಿಹಾಸಿಕ ದಿನದಂದು, ದೇಶದ ಸ್ವಾವಲಂಬನೆಗಾಗಿ ಮತ್ತು ರೈತರ ಕಲ್ಯಾಣಕ್ಕಾಗಿ ಎರಡು ಪ್ರಮುಖ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೆಯದು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಎರಡನೆಯದು ಪಲ್ಸ್ ಸ್ವಾವಲಂಬನೆ ಮಿಷನ್ (ದಲ್ಹನ್ ಆತ್ಮ ನಿರ್ಭರತಾ ಮಿಷನ್). ಈ ಎರಡು ಯೋಜನೆಗಳು ಭಾರತದ ಲಕ್ಷಾಂತರ ರೈತರ ಭವಿಷ್ಯವನ್ನು ಪರಿವರ್ತಿಸುತ್ತವೆ. ಈ ಯೋಜನೆಗಳಿಗೆ ಭಾರತ ಸರ್ಕಾರ 35,000 ಕೋಟಿ ರೂಪಾಯಿಗಳಿಗೂ ಹೆಚ್ಚು ಖರ್ಚು ಮಾಡಲಿದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಪಲ್ಸ್ ಸ್ವಾವಲಂಬನೆ ಮಿಷನ್‌ಗಾಗಿ ನನ್ನ ಎಲ್ಲಾ ರೈತ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

PM Modi launches two major schemes in the agriculture sector with an outlay of Rs 35,440 crore

October 11th, 12:00 pm

At a programme in Delhi, PM Modi launched projects and schemes worth over Rs 35,400 crore in the Agriculture and Allied Sectors. The PM Dhan Dhaanya Krishi Yojana aims to enhance agricultural productivity, promote crop persification and sustainable practices in selected districts. He also launched the Dalhan Aatmanirbharta Mission, focused on boosting productivity and expanding the cultivation of pulses. PM Modi emphasised, “On one hand, we must be self-reliant; on the other, we must produce for the global market as well.”

2025-26 ರಿಂದ 2030-31 ರವರೆಗೆ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತ ಅಭಿಯಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

October 01st, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಬೇಳೆಕಾಳುಗಳಲ್ಲಿ ಆತ್ಮನಿರ್ಭರ ಮಿಷನ್ಗೆ ಅನುಮೋದನೆ ನೀಡಿದೆ. ಇದು ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ತರ ಉಪಕ್ರಮವಾಗಿದ್ದು, ಇದರ ಉದ್ದೇಶ ಬೇಳೆಕಾಳುಗಳಲ್ಲಿ ಸ್ವಾವಲಂಬನೆ (ಆತ್ಮನಿರ್ಭರತ) ಸಾಧಿಸುವುದಾಗಿದೆ. ಈ ಮಿಷನ್ ಅನ್ನು 2025-26 ರಿಂದ 2030-31 ರವರೆಗಿನ ಆರು ವರ್ಷಗಳ ಅವಧಿಯಲ್ಲಿ, ರೂ. 11,440 ಕೋಟಿ ಆರ್ಥಿಕ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 04th, 06:55 pm

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನು ಸಾಧಿಸಲು ಕೃಷೋನ್ನತಿ ಯೋಜನೆ (ಕೆವೈ) ಗೆ ಸಂಪುಟ ಅನುಮೋದನೆ ನೀಡಿದೆ

October 03rd, 09:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (ಸಿ ಎಸ್ ಎಸ್) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಎಂಬ ಎರಡು ಸಮೂಹ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (ಡಿಎ ಮತ್ತು ಎಫ್ ಡಬ್ಲ್ಯು) ಪ್ರಸ್ತಾವನೆಯನ್ನು ಅನುಮೋದಿಸಿತು. ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಸುಸ್ಥಿರ ಕೃಷಿಯನ್ನು ಉತ್ತೇಜಿಸುತ್ತದೆ, ಕೃಷೋನ್ನತಿ ಯೋಜನೆಯು ಆಹಾರ ಭದ್ರತೆ ಮತ್ತು ಕೃಷಿ ಸ್ವಾವಲಂಬನೆಯನ್ನು ಸಾಧಿಸುತ್ತದೆ. ವಿವಿಧ ಘಟಕಗಳ ದಕ್ಷ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಘಟಕಗಳು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ.

2024-25 ರಿಂದ 2030-31ರವರೆಗೆ ಖಾದ್ಯ ತೈಲಗಳು-ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌ಎಂಇಒ-ಎಣ್ಣೆಕಾಳುಗಳು) ಗೆ ಸಂಪುಟದ ಅನುಮೋದನೆ

October 03rd, 09:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶೀಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಖಾದ್ಯ ತೈಲಗಳಲ್ಲಿಸ್ವಾವಲಂಬನೆ (ಆತ್ಮನಿರ್ಭರ ಭಾರತ್‌) ಸಾಧಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮವಾದ ಖಾದ್ಯ ತೈಲಗಳು - ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌.ಎಂ.ಇ.ಒ-ಎಣ್ಣೆಕಾಳುಗಳು)ಗೆ ತನ್ನ ಅನುಮೋದನೆ ನೀಡಿದೆ. ಈ ಮಿಷನ್‌ ಅನ್ನು 2024-25 ರಿಂದ 2030-31 ರವರೆಗೆ ಏಳು ವರ್ಷಗಳ ಅವಧಿಯಲ್ಲಿ10,103 ಕೋಟಿ ರೂ.ಗಳ ಹಣಕಾಸು ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

Modernization of agriculture systems is a must for Viksit Bharat: PM Modi

February 24th, 10:36 am

PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.

ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

February 24th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.

ಸಮಗ್ರ ಕೃಷಿ ವಿಧಾನದ ಮೂಲಕ ಆದಾಯವನ್ನು ದುಪ್ಪಟ್ಟುಗೊಳಿಸಿಕೊಂಡ ತೆಲಂಗಾಣದ ಕರೀಂನಗರದ ವಿದ್ಯಾವಂತ ರೈತ

January 18th, 03:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತ ನಾನಾ ಮೂಲೆಗಳ ಸಾವಿರಾರು ವಿಕಸಿತ ಭಾರತ ಸಂಕಲ್ಪ ಯಾತ್ರಯ ಫಲಾನುಭವಿಗಳು ಸಂವಾದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಜನಪ್ರತಿನಿಧಿಗಳೂ ಸಹ ಭಾಗವಹಿಸಿದ್ದರು.

PM Narendra Modi addresses public meetings in Pali & Pilibanga, Rajasthan

November 20th, 12:00 pm

Amidst the ongoing election campaigning in Rajasthan, PM Modi’s rally spree continued as he addressed public meetings in Pali and Pilibanga. Addressing a massive gathering, PM Modi emphasized the nation’s commitment to development and the critical role Rajasthan plays in India’s advancement in the 21st century. The Prime Minister underlined the development vision of the BJP government and condemned the misgovernance of the Congress party in the state.

ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

August 25th, 09:30 pm

ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

August 25th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.

ರಾಜಸ್ಥಾನದ ಸಿಕಾರ್ ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 27th, 12:00 pm

ಖಾತು ಶ್ಯಾಮ್ ಜಿ ಅವರ ಭೂಮಿ ದೇಶದಾದ್ಯಂತದ ಭಕ್ತರಲ್ಲಿ ವಿಶ್ವಾಸ ಮತ್ತು ಭರವಸೆಯನ್ನು ತುಂಬುತ್ತದೆ. ಯೋಧರ ಭೂಮಿಯಾದ ಶೇಖಾವತಿಯಿಂದ ಇಂದು ರಾಷ್ಟ್ರಕ್ಕಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುವ ಅವಕಾಶ ನನಗೆ ದೊರೆತಿರುವುದು ನನ್ನ ಅದೃಷ್ಟ. ಇಂದು, ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಭಾಗವಾಗಿ ಸುಮಾರು 18,000 ಕೋಟಿ ರೂಪಾಯಿಗಳನ್ನು ಇಲ್ಲಿಂದ ಲಕ್ಷಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ.

ರಾಜಸ್ಥಾನದ ಸಿಕಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 27th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ನಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ರಾಷ್ಟ್ರಕ್ಕೆ ಸಮರ್ಪಿಸಲಾದ ಈ ಯೋಜನೆಗಳಲ್ಲಿ 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳ ಲೋಕಾರ್ಪಣೆ, ಸಲ್ಫರ್ ಲೇಪಿತ ಹೊಸ ಬಗೆಯ ಯೂರಿಯಾ – ಯೂರಿಯಾ ಗೋಲ್ಡ್ ಬಿಡುಗಡೆ, 1600ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವ್ಯವಹಾರಕ್ಕೆ ಮುಕ್ತ ಜಾಲ(ಒಎನ್ ಡಿಸಿ) ವೇದಿಕೆಗೆ ತರುವುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅಡಿ 8.5 ಕೋಟಿ ಫಲಾನುಭವಿಗಳಿಗೆ 14ನೇ ಕಂತಿನ 17,000 ಕೋಟಿ ರೂ. ಬಿಡುಗಡೆ, ಚಿತ್ತೋರ್ ಗಢ, ಧೋಲಾಪುರ್, ಸಿರೋಹಿ, ಸಿಕಾರ್ ಮತ್ತು ಶ್ರೀಗಂಗಾನಗರಗಳಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ, ಬರಾನ್, ಬುಂಡಿ, ಕರೌಲಿ, ಜುನ್ ಜಹುನು, ಸವಾಯಿ ಮಾಧೋಪುರ್, ಜೈಸಲ್ಮೇರ್, ಟೋಂಕ್ ನಲ್ಲಿ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ, ಉದಯ್ ಪುರ, ಬನ್ಸವಾರ್, ಪ್ರತಾಪ್ ಗಡ್ ಮತ್ತು ಡುಂಗಾರ್ಪುರ ಜಿಲ್ಲೆಗಳಲ್ಲಿ ಮತ್ತು ಜೋಧ್ ಪುರ್ ನ ಕೇಂದ್ರೀಯ ವಿದ್ಯಾಲಯ ತಿವರಿಯಲ್ಲಿ 6 ಏಕಲವ್ಯ ಮಾದರಿ ವಸತಿ ಶಾಲೆಗಳ ಉದ್ಘಾಟನೆಯೂ ಸೇರಿದೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ

February 09th, 02:15 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.