ಅಸ್ಸಾಂನ ಗೋಲಾಘಾಟ್ ನಲ್ಲಿ ಪಾಲಿಪ್ರೊಪಿಲೀನ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

September 14th, 03:30 pm

ಭಾರತ್ ಮಾತಾ ಕೀ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಹರ್ದೀಪ್ ಸಿಂಗ್ ಪುರಿ ಜೀ, ಅಸ್ಸಾಂ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಸ್ಸಾಂನ ಗೋಲಾಘಾಟ್ ನಲ್ಲಿ ಬಯೋಇಥೆನಾಲ್ ಸ್ಥಾವರವನ್ನು ಉದ್ಘಾಟನೆ, ಪಾಲಿಪ್ರೊಪಿಲೀನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

September 14th, 03:00 pm

ಕಳೆದ ಎರಡು ದಿನಗಳಿಂದ ತಾವು ಈಶಾನ್ಯದಲ್ಲಿದ್ದು, ಪ್ರತಿ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಅಸಾಧಾರಣ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆಯುವುದಾಗಿ ಪ್ರಧಾನಮಂತ್ರಿಯವರು ಹೇಳಿದರು. ಅಸ್ಸಾಂನ ಈ ಭಾಗದಲ್ಲಿ ತಾವು ಅನುಭವಿಸುವ ವಿಶಿಷ್ಟವಾದ ಆತ್ಮೀಯತೆ ಮತ್ತು ಬಂಧುತ್ವದ ಭಾವನೆಯನ್ನು ಅವರು ಎತ್ತಿ ತೋರಿಸಿದರು ಮತ್ತು ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ

April 11th, 11:00 am

ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್‌; ಉಪ ಮುಖ್ಯಮಂತ್ರಿಗಳಾದ ಕೇಶವ್‌ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್‌ ಪಾಠಕ್‌; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್‌ ಡೈರಿಯ ಅಧ್ಯಕ್ಷ ಶಂಕರ್‌ ಭಾಯ್‌ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

April 11th, 10:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.