ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025ರಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಸಂವಾದ

November 20th, 12:30 pm

ಇವೆಲ್ಲವೂ ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು, ಇದು ತ್ಯಾಜ್ಯ... ಸರ್, ಇದು ಬಾಳೆಹಣ್ಣಿನ ತ್ಯಾಜ್ಯದಿಂದ ಬಂದಿದೆ; ಇದು ಬಾಳೆಹಣ್ಣಿನ ಮೌಲ್ಯವರ್ಧನೆಯಿಂದ ಬಂದಿದೆ, ಸರ್

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 20th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ ಉತ್ಪನ್ನಗಳು ಭಾರತದಾದ್ಯಂತ ಆನ್ ಲೈನ್ ನಲ್ಲಿ ಮಾರಾಟವಾಗುತ್ತವೆಯೇ ಎಂದು ಪ್ರಧಾನಮಂತ್ರಿಯವರು ಕೇಳಿದರು, ಅದಕ್ಕೆ ರೈತರು ಹೌದು ಎಂದು ಉತ್ತರಿಸಿದರು. ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ವೈಯಕ್ತಿಕ ಕೊಡುಗೆದಾರರ ಮೂಲಕ ತಾವು ಇಡೀ ತಮಿಳುನಾಡನ್ನು ಪ್ರತಿನಿಧಿಸುತ್ತಿರುವುದಾಗಿ ರೈತರು ತಿಳಿಸಿದರು. ತಮ್ಮ ಉತ್ಪನ್ನಗಳು ಆನ್ ಲೈನ್ನಲ್ಲಿ ಮಾರಾಟವಾಗುವುದರ ಜೊತೆಗೆ ರಫ್ತು ಕೂಡ ಆಗುತ್ತವೆ ಮತ್ತು ಭಾರತದಾದ್ಯಂತ ಸ್ಥಳೀಯ ಮಾರುಕಟ್ಟೆಗಳು ಹಾಗೂ ಸೂಪರ್ಮಾರ್ಕೆಟ್ ಗಳಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ FPO ನಲ್ಲಿ ಎಷ್ಟು ಜನರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದು ಶ್ರೀ ಮೋದಿ ಕೇಳಿದರು, ಇದಕ್ಕೆ ಉತ್ತರಿಸಿದ ರೈತರು, ಸುಮಾರು ಒಂದು ಸಾವಿರ ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಇದನ್ನು ಆಲಿಸಿದ ಪ್ರಧಾನಮಂತ್ರಿಯವರು, ಬಾಳೆ ಕೃಷಿಯನ್ನು ಒಂದೇ ಪ್ರದೇಶದಲ್ಲಿ ಪ್ರತ್ಯೇಕವಾಗಿ ಮಾಡಲಾಗುತ್ತಿದೆಯೇ ಅಥವಾ ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ರೈತರು, ವಿವಿಧ ಪ್ರದೇಶಗಳು ವಿಭಿನ್ನ ಮತ್ತು ವಿಶೇಷ ಉತ್ಪನ್ನಗಳಲ್ಲಿ ಪರಿಣತಿ ಹೊಂದಿವೆ ಎಂದು ತಿಳಿಸಿದರು ಮತ್ತು ತಮ್ಮಲ್ಲಿ ಜಿಐ (GI - ಭೌಗೋಳಿಕ ಸೂಚಕ) ಟ್ಯಾಗ್ ಹೊಂದಿರುವ ಉತ್ಪನ್ನಗಳು ಸಹ ಇವೆ ಎಂದು ಹೇಳಿದರು.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 19th, 07:01 pm

ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

November 19th, 02:30 pm

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.