ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
September 16th, 08:47 am
2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ, ವೇಗ ಮತ್ತು ಉತ್ಸಾಹ ಅವರನ್ನು ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆ ಅಸಂಖ್ಯಾತ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಶ್ರೀ ಮೋದಿ ಅವರು ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಶಂಸಿಸಿದ್ದಾರೆ.