ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ 73 ಪದಕಗಳನ್ನು ಗೆದ್ದು, ಭಾರತ ದಾಖಲೆ: ಕ್ರೀಡಾಪಟುಗಳಿಗೆ ಪ್ರಧಾನಿ ಶ್ಲಾಘನೆ
October 26th, 12:34 pm
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ 73 ಪದಕಗಳ ಗೆಲ್ಲುವ ಮೂಲಕ ಭಾರತ ದಾಖಲೆ ಮಾಡಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಜಕಾರ್ತಾ 2018ರಲ್ಲಿ 72 ಪದಕಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಪ್ಯಾರಾ ಕ್ರೀಡಾಪಟುಗಳ ಬದ್ಧತೆ, ದೃಢತೆ ಮತ್ತು ಅಚಲ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.