ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 27th, 12:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:15ರ ಸುಮಾರಿಗೆ ಅಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಠದ 550ನೇ ವರ್ಷಾಚರಣೆಯಾದ 'ಸಾರ್ಧ ಪಂಚಮ ಶತಮಾನೋತ್ಸವ' (550ನೇ ವರ್ಷಾಚರಣೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.