ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಶ್ರೀಲಂಕಾ ಅಧ್ಯಕ್ಷರ ದೂರವಾಣಿ ಸಂಭಾಷಣೆ
March 24th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾದ ಅಧ್ಯಕ್ಷರಾದ ಮಾನ್ಯ ಅನುರ ಕುಮಾರ ದಿಸ್ಸಾನಾಯಕ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.President of Sri Lanka, Anura Kumara Dissanayake meets Prime Minister
February 20th, 09:49 pm
PM Modi met Sri Lankan President Anura Kumara Dissanayake, reaffirming the strong friendship between India and Sri Lanka. The two leaders reviewed the progress in India–Sri Lanka relations in recent times and discussed avenues of cooperation in multiple areas..ಪ್ರಧಾನಮಂತ್ರಿ ಅವರು ಶ್ರೀಲಂಕಾದ ಅಧ್ಯಕ್ಷರು ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ
February 05th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು
December 01st, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದ ಉಂಟಾದ ಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
November 28th, 03:37 pm
ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಶ್ರೀಲಂಕಾದ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ. ಎಲ್ಲಾ ದಿತ್ವಾ ಚಂಡಮಾರುತದಿಂದ ಪೀಡಿತ ಕುಟುಂಬಗಳ ಸುರಕ್ಷತೆ, ಸಾಂತ್ವನ ಮತ್ತು ತ್ವರಿತ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ಶ್ರೀಲಂಕಾದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
October 17th, 04:26 pm
ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಪ್ರಧಾನಮಂತ್ರಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದ್ದಾರೆ.ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 06th, 02:00 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು
April 06th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.ಭಾರತ ನೆರವಿನ ರೈಲು ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
April 06th, 12:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷರಾದ ಘನತೆವೆತ್ತ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಇಂದು ಅನುರಾಧಪುರದಲ್ಲಿ ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಎರಡು ರೈಲ್ವೆ ಯೋಜನೆಗಳನ್ನು ಉದ್ಘಾಟಿಸುವ ಮತ್ತು ಪ್ರಾರಂಭಿಸುವ ಸಮಾರಂಭದಲ್ಲಿ ಭಾಗವಹಿಸಿದ್ದರು.ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
April 06th, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಅನುರಾ ಕುಮಾರ ದಿಸ್ಸನಾಯಕೆ ಅವರೊಂದಿಗೆ ಅನುರಾಧಪುರದ ಪವಿತ್ರ ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಮಹಾಬೋಧಿ ಮರಕ್ಕೆ ಪೂಜೆ ಸಲ್ಲಿಸಿದರು.