ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
March 31st, 10:58 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಸಮಾಜದ ಮೇಲೆ ಶಾಶ್ವತ ಪ್ರಭಾವ ಬೀರಿದ್ದಾರೆ ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ. ಪೂಜ್ಯ ಸ್ವಾಮಿಗಳು ಅನೇಕ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಬಹುವಾಗಿ ಬದ್ಧರಾಗಿದ್ದರು ಎಂದು ಅವರು ವಿವರಿಸಿದ್ದಾರೆ.