16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ

July 02nd, 10:22 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.

ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 05:04 am

ಜೂನ್ 17, 2026 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಭೇಟಿಯಾದರು.

ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 17th, 12:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. 2026ರಲ್ಲಿ ಉಭಯ ನಾಯಕರ ನಡುವಿನ ಮೂರನೇ ಭೇಟಿ ಇದಾಗಿದ್ದು, ಇದು ಬಲವಾದ ಮತ್ತು ರೋಮಾಂಚಕ ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ.

ಭಾರತ-ಇಟಲಿ ಜಂಟಿ ಘೋಷಣೆ

May 20th, 10:28 pm

ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.

ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ

May 15th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.

ಯುಎಇ ಮೇಲಿನ ದಾಳಿಯನ್ನು ಖಂಡಿಸಿದ ಪ್ರಧಾನಮಂತ್ರಿ, ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಗೆ ಬೆಂಬಲವನ್ನು ಪುನರುಚ್ಚರಿಸಿದರು

May 05th, 01:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೂವರು ಭಾರತೀಯ ಪ್ರಜೆಗಳು ಗಾಯಗೊಂಡ ಯುಎಇ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ ಮಾಡಿದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಾಗರ ಭದ್ರತೆಯ ಕುರಿತು ಚರ್ಚೆ

April 16th, 10:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರು ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದರು.

ಪ್ರಧಾನ ಮಂತ್ರಿ ಅವರಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್; ದ್ವಿಪಕ್ಷೀಯ ಸಹಕಾರದ ಪರಿಶೀಲನೆ ಮತ್ತು ಪಶ್ಚಿಮ ಏಷ್ಯಾ ಮತ್ತು ಹೊರ್ಮುಜ್ ಜಲಸಂಧಿಯ ಕುರಿತು ಚರ್ಚೆ

April 14th, 10:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದರು.