Prime Minister greets doctors on National Doctors' Day
July 01st, 12:22 pm
The Prime Minister, Shri Narendra Modi, today extended his greetings to doctors across the country on the occasion of National Doctors' Day, expressing gratitude for their unwavering service, compassion and commitment towards the nation.PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 28th, 02:02 pm
ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ವ್ಯಕ್ತಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ, ಅವರನ್ನು ಸ್ಮರಿಸಿದರು. ಅವರ ಬರಹಗಳು ಭಾರತೀಯರ ತಲೆಮಾರುಗಳಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸೂಧಿರ್ತಿಯನ್ನು ಹುಟ್ಟುಹಾಕಿದ ಅತ್ಯುನ್ನತ ಸಾಹಿತ್ಯಕ ದಿಗ್ಗಜರಾಗಿದ್ದರು.ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು
June 25th, 10:53 am
ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 19th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 11:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸೇರ್ಪಡೆಯಾಗಲಿದ್ದಾರೆ, ಇದು ರಾಜ್ಯದ ಅಪರೂಪದ ಮತ್ತು ಮಹತ್ವದ ಸಂದರ್ಭವಾಗಿದೆ.ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿರುವ ಪ್ರಧಾನಮಂತ್ರಿ
June 18th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ಪ್ರಯತ್ನಗಳನ್ನು ವಿವರಿಸಿದ್ದಾರೆ ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲಾಗುತ್ತಿದೆ, ಆಚರಿಸಲಾಗುತ್ತಿದೆ ಮತ್ತು ಹೊಸ ಚೈತನ್ಯದೊಂದಿಗೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ.ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ
June 17th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.ಭಾರತ-ಫ್ರಾನ್ಸ್ ನಾವೀನ್ಯತೆ ನೀಲನಕ್ಷೆ 2030
June 15th, 05:42 am
2026ರ ಫೆಬ್ರವರಿ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ದ್ವಿಪಕ್ಷೀಯ ಸಂಬಂಧವನ್ನು ”ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ’ ಯ ಎತ್ತರಕ್ಕೆ ಏರಿಸಿದರು ಮತ್ತು ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಉಭಯ ನಾಯಕರು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಸಂಶೋಧನೆ, ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಸೈಬರ್ ಸ್ಪೇಸ್, ಆರೋಗ್ಯ, ಸಂಸ್ಕೃತಿ, ಆರ್ಥಿಕತೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ವಲಯಗಳಲ್ಲಿ ವಿಸ್ತೃತ ಮತ್ತು ವೈವಿಧ್ಯಮಯ ಸಹಕಾರಕ್ಕೆ ಕರೆ ನೀಡಿದರು.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಜೈ ಪ್ರಕಾಶ್ ನಾರಾಯಣ ಪಕ್ಷಿಧಾಮವನ್ನು ಭಾರತದ 100ನೇ ರಾಮ್ಸರ್ ತಾಣವೆಂದು ಗುರುತಿಸಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿ
June 05th, 11:58 am
ಉತ್ತರ ಪ್ರದೇಶದ ಬಲ್ಲಿಯಾದಲ್ಲಿರುವ ಜೈ ಪ್ರಕಾಶ್ ನಾರಾಯಣ ಪಕ್ಷಿಧಾಮವನ್ನು (ಸುರ್ಹಾ ತಾಲ್) ದೇಶದ 100ನೇ ರಾಮ್ಸರ್ ತಾಣವೆಂದು ಗೊತ್ತುಪಡಿಸಿದ ನಂತರ ಭಾರತವು ರಾಮ್ಸರ್ ತಾಣಗಳ ಶತಮಾನವನ್ನು ಸಾಧಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಸ ವ್ಯಕ್ತಪಡಿಸಿದ್ದಾರೆ.ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ
June 04th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.