ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 08th, 05:33 pm

ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,

"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 08th, 05:00 pm

ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.

“ಕಾನೂನು ನೆರವು ವಿತರಣಾ ಕಾರ್ಯವಿಧಾನ ಬಲಪಡಿಸುವಿಕೆ” ರಾಷ್ಟ್ರೀಯ ಸಮ್ಮೇಳನ ನವೆಂಬರ್ 8 ರಂದು ಉದ್ಘಾಟಿಸಲಿರುವ ಪ್ರಧಾನಮಂತ್ರಿ

November 06th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 8, 2025 ರಂದು ಸಂಜೆ 5 ಗಂಟೆ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ “ಕಾನೂನು ನೆರವು ಕಾರ್ಯವಿಧಾನಗಳನ್ನು ಬಲಪಡಿಸುವಿಕೆ” ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್.ಎ.ಎಲ್.ಎಸ್.ಎ - NALSA) ಸಿದ್ಧಪಡಿಸಿದ ಸಮುದಾಯ ಮಧ್ಯಸ್ಥಿಕೆ ತರಬೇತಿ ಮಾಡ್ಯೂಲ್ ಅನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ