ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 04th, 10:45 am

ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ

October 04th, 10:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.