PM Modi arrives in Muscat, Oman to a warm welcome
December 17th, 07:19 pm
PM Modi arrived in Muscat, Oman, a short while ago. He was accorded a ceremonial welcome at the airport. The PM’s visit marks 70 years of the establishment of diplomatic ties between India and Oman. In Muscat, the PM will hold discussions with His Majesty the Sultan of Oman to further strengthen the Strategic Partnership.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ
December 11th, 08:43 pm
ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.ಒಮಾನ್ ಸುಲ್ತಾನರಿಂದ ಅಭಿನಂದನಾ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿಗಳು
June 11th, 01:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಮಾನ್‌ನ ಸುಲ್ತಾನರಾದ ಘನತೆವೆತ್ತ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.