ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ
November 16th, 03:50 pm
ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು
November 16th, 03:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.The Congress has now turned into ‘MMC’ - the Muslim League Maowadi Congress: PM Modi at Surat Airport
November 15th, 06:00 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”PM Modi greets and addresses a gathering at Surat Airport
November 15th, 05:49 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ನವೆಂಬರ್ 15ರಂದು ಪ್ರಧಾನಮಂತ್ರಿ ಭೇಟಿ
November 14th, 11:43 am
ಎಂಎಎಚ್ಎಸ್ಆರ್ ಸುಮಾರು 508 ಕಿಲೋಮೀಟರ್ ವ್ಯಾಪಿಸಿದ್ದು, ಗುಜರಾತ್ ಮತ್ತು ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 352 ಕಿಮೀ ಮತ್ತು ಮಹಾರಾಷ್ಟ್ರದಲ್ಲಿ 156 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಈ ಕಾರಿಡಾರ್ ಸಬರಮತಿ, ಅಹಮದಾಬಾದ್, ಆನಂದ್, ವಡೋದರಾ, ಭರೂಚ್, ಸೂರತ್, ಬಿಲಿಮೊರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ, ಇದು ಭಾರತದ ಸಾರಿಗೆ ಮೂಲಸೌಕರ್ಯದಲ್ಲಿ ಪರಿವರ್ತನಾತ್ಮಕ ಹೆಜ್ಜೆಯಾಗಿದೆ.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ಮಾರ್ಚ್ 7-8 ರಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗುಜರಾತ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ
March 07th, 07:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 7 - 8 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾರ್ಚ್ 7 ರಂದು ಸಿಲ್ವಾಸ್ಸಾಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಮೋ ಆಸ್ಪತ್ರೆಯನ್ನು (I ಹಂತ) ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ರ ಸುಮಾರಿಗೆ, ಅವರು ಸಿಲ್ವಾಸ್ಸಾದಲ್ಲಿ 2580 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕೇಂದ್ರಾಡಳಿತ ಪ್ರದೇಶಕ್ಕಾಗಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಸೂರತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5 ಗಂಟೆಗೆ ಅವರು ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 8 ರಂದು, ಪ್ರಧಾನ ಮಂತ್ರಿ ನವಸಾರಿಗೆ ಪ್ರಯಾಣಿಸಲಿದ್ದಾರೆ ಮತ್ತು ಸುಮಾರು 11:30ಕ್ಕೆ, ಅವರು ಲಕ್ಷಪತಿ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ವಿವಿಧ ಯೋಜನೆಗಳ ಉದ್ಘಾಟನೆಯನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಸೂರತ್‌ನಲ್ಲಿ #HarGharTiranga ಅಭಿಯಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ ಮೋದಿ
August 12th, 09:21 pm
ಇಂದು #HarGharTiranga (ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನದಲ್ಲಿ ಭಾಗವಹಿಸಿದ ಸೂರತ್ ಜನರ ಭಾವೋದ್ರಿಕ್ತ ಮನೋಭಾವದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಗುಜರಾತ್ ನ ಸೂರತ್ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
December 17th, 04:19 pm
ನವೀಕರಿಸಿದ ಟರ್ಮಿನಲ್ ಕಟ್ಟಡದ ಮುಂಭಾಗವು ಸೂರತ್ ನಗರದ 'ರಾಂಡರ್' ಪ್ರದೇಶದ ಹಳೆಯ ಮನೆಗಳ ಶ್ರೀಮಂತ ಮತ್ತು ಸಾಂಪ್ರದಾಯಿಕ ಮರಗೆಲಸದೊಂದಿಗೆ ಪ್ರಯಾಣಿಕರ ಅನುಭವವನ್ನು ಉತ್ಕೃಷ್ಟಗೊಳಿಸುವ ಗುರಿಯನ್ನು ಹೊಂದಿದೆ. ಡಬಲ್ ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಶಕ್ತಿ ಉಳಿತಾಯಕ್ಕಾಗಿ ಕ್ಯಾನೋಪಿಗಳು, ಕಡಿಮೆ ಶಾಖದ ಲಾಭ ಡಬಲ್ ಗ್ಲೇಜಿಂಗ್ ಘಟಕ, ಮಳೆ ನೀರು ಕೊಯ್ಲು, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಇತರ ಸೌರ ವಿದ್ಯುತ್ ಸ್ಥಾವರಕ್ಕಾಗಿ ಭೂಚೌಕಟ್ಟು ಮತ್ತು ಮರುಬಳಕೆಯ ನೀರಿನ ಬಳಕೆಯಂತಹ ವಿವಿಧ ಸಮರ್ಥನೀಯ ವೈಶಿಷ್ಟ್ಯಗಳನ್ನು ವಿಮಾನ ನಿಲ್ದಾಣದ ಗೃಹ IV ಕಂಪ್ಲೈಂಟ್ ಹೊಸ ಟರ್ಮಿನಲ್ ಕಟ್ಟಡವು ಹೊಂದಿದೆ.ಗುಜರಾತ್ ನ ಸೂರತ್ ಡೈಮಂಡ್ ವಾಣಿಜ್ಯ ಸಮುಚ್ಛಯದ (ಬೋರ್ಸ್) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
December 17th, 12:00 pm
ಸೂರತ್ ತನ್ನದೇ ಆದ ಮಹತ್ವವನ್ನು ಹೊಂದಿದೆ. ಸೂರತ್ ನ ಇತಿಹಾಸದ ಪ್ರಸಿದ್ಧತೆ; ಅದರ ಹೆಚ್ಚುತ್ತಿರುವ ಪ್ರಸ್ತುತತೆ; ಮತ್ತು ಅದರ ಭವಿಷ್ಯದ ದೃಷ್ಟಿಕೋನ - ಅದುವೇ ಸೂರತ್ ನ ವಿಶೇಷತೆ! ಮತ್ತು ಅಂತಹ (ಅಭಿವೃದ್ಧಿ) ಕೆಲಸದಲ್ಲಿ ಯಾರೂ ಯಾವುದೇ ಉಪದ್ರಕಾರಿ ಕಲ್ಲನ್ನು ಹಾಕುವುದಿಲ್ಲ ಎಂಬುದು ನನ್ನ ನಂಬಿಕೆ. ಸೂರತ್ ನ ವ್ಯಕ್ತಿ ಪ್ರತಿ ಕ್ಷೇತ್ರದಲ್ಲೂ ಆತುರದಲ್ಲಿರಬಹುದು, ಆದರೆ ಅವನಿಗೆ ಆಹಾರದ ಅಂಗಡಿಯ ಹೊರಗೆ ಅರ್ಧ ಘಂಟೆಯವರೆಗೆ ಸರದಿಯಲ್ಲಿ ನಿಲ್ಲುವ ತಾಳ್ಮೆ ಇದೆ. ಉದಾಹರಣೆಗೆ, ಭಾರೀ ಮಳೆಯಾದರೂ ಮತ್ತು ಮೊಣಕಾಲು ಆಳದ ನೀರು ಇದ್ದರೂ ಪರವಾಗಿಲ್ಲ; ಪಕೋಡ ಸ್ಟಾಲ್ ನ ಹೊರಗೆ ಇನ್ನೂ ಸರತಿ ಸಾಲಾಗಿ ನಿಂತಿರುತ್ತಾನೆ. ಶರದ್ ಪೂರ್ಣಿಮಾ, ಚಂಡಿ ಪಾಡ್ವಾದಲ್ಲಿ, ಎಲ್ಲರೂ ಮೇಲ್ಛಾವಣಿಗೆ ಹೋಗುತ್ತಾರೆ, ತನ್ನ ಕುಟುಂಬದೊಂದಿಗೆ ಫುಟ್ಪಾತ್ನಲ್ಲಿ ಸರತಿ ಸಾಲಾಗಿ ಘರಿ (ಸಿಹಿ) ತಿನ್ನುತ್ತಾನೆ. ಮತ್ತು ಅವನು ಹತ್ತಿರದಲ್ಲಿ ಎಲ್ಲಿಯೂ ಸುತ್ತಾಡಲು ಹೋಗುವುದಿಲ್ಲ, ಆದರೆ ಪ್ರಪಂಚದ ಪ್ರತಿಯೊಂದು ಮೂಲೆ ಮತ್ತು ಮೂಲೆಯಲ್ಲಿ ಸಂಚರಿಸುತ್ತಾನೆ. ಸುಮಾರು 40-45 ವರ್ಷಗಳ ಹಿಂದೆ ಸೌರಾಷ್ಟ್ರದಿಂದ ಯಾರೋ ಸೂರತ್ ಗೆ ಭೇಟಿ ನೀಡಿದ್ದು ನನಗೆ ಇನ್ನೂ ನೆನಪಿದೆ. ಹಾಗಾದರೆ, ನಾನು ಸೌರಾಷ್ಟ್ರದ ಆ ಸ್ನೇಹಿತನನ್ನು ಕೇಳಿದೆ - ನೀವು ಸೂರತ್ ಅನ್ನು ಹೇಗೆ ಇಷ್ಟಪಡುತ್ತೀರಿ? ಸೂರತ್ ಮತ್ತು ಕಥಿಯಾವರ್ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಅವರು ಹೇಳಿದರು. ಆದ್ದರಿಂದ, ನಾನು 40-45 ವರ್ಷಗಳ ಹಿಂದಿನ ಘಟನೆ ಬಗ್ಗೆ ಮಾತನಾಡುತ್ತಿದ್ದೇನೆ. ಕಾಠಿಯಾವರದಲ್ಲಿ ಮೋಟಾರು ಸೈಕಲ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದರೆ ಘೋರ ಜಗಳವಾಗುತ್ತದೆ ಎಂದು ಉದಾಹರಣೆ ನೀಡಿದರು. ಆದರೆ ಸೂರತ್ ನಲ್ಲಿ ಭಾಗಿಯಾದವರು ಹೇಳುತ್ತಿದ್ದರು, 'ಇದು ಎರಡೂ ಕಡೆಯವರ ತಪ್ಪು. ಹಾಗಾಗಿ ಈ ಸಮಸ್ಯೆಯನ್ನು ಈಗಲೇ ಕೈಬಿಡೋಣ'. ನಗರಗಳ ಸ್ವಭಾವದಲ್ಲಿ ಅಜಗಜಾಂತರ ವ್ಯತ್ಯಾಸವಿದೆ.ಸೂರತ್ ವಜ್ರದ ಮಾರುಕಟ್ಟೆ ಉದ್ಘಾಟಿಸಿದ ಪ್ರಧಾನಿ
December 17th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸೂರತ್‌ನಲ್ಲಿ ʻಸೂರತ್ ವಜ್ರ ಮಾರುಕಟ್ಟೆʼಯನ್ನು (ಸೂರತ್ ಡೈಮಂಡ್ ಬೋರ್ಸ್) ಉದ್ಘಾಟಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ʻಪಂಚತತ್ವʼ ಉದ್ಯಾನಕ್ಕೂ ಭೇಟಿ ನೀಡಿ, ʻಸೂರತ್ ಡೈಮಂಡ್ ಬೋರ್ಸ್ʼ ಮತ್ತು ʻಸ್ಪೈನ್-4ʼರ ಹಸಿರು ಕಟ್ಟಡವನ್ನು ವೀಕ್ಷಿಸಿದರು. ಸಂದರ್ಶಕರ ಕಿರುಪುಸ್ತಕಕ್ಕೂ ಅವರು ಸಹಿ ಹಾಕಿದರು. ಇದಕ್ಕೂ ಮುನ್ನ ಪ್ರಧಾನಮಂತ್ರಿಯವರು ಸೂರತ್ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ್ದರು.ಡಿಸೆಂಬರ್ 17-18ರಂದು ಸೂರತ್ ಮತ್ತು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಿ
December 16th, 10:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17 ಮತ್ತು 18ರಂದು ಗುಜರಾತ್‌ನ ಸೂರತ್ ಮತ್ತು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 17ರಂದು ಬೆಳಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಸೂರತ್ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11:15ಕ್ಕೆ ಪ್ರಧಾನಮಂತ್ರಿಯವರು ʻಸೂರತ್ ಡೈಮಂಡ್ ಬೋರ್ಸ್ʼ ಅನ್ನು ಉದ್ಘಾಟಿಸಲಿದ್ದಾರೆ. ನಂತರ ವಾರಣಾಸಿಗೆ ಪ್ರಯಾಣ ಬೆಳೆಸಲಿರುವ ಅವರು, ಮಧ್ಯಾಹ್ನ 3:30ರ ಸುಮಾರಿಗೆ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:15ರ ಸುಮಾರಿಗೆ ಅವರು ʻನಮೋ ಘಾಟ್ʼನಲ್ಲಿ ʻಕಾಶಿ ತಮಿಳು ಸಂಗಮಂ-2023ʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 26th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.