ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 02:32 pm
ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 02:30 pm
ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 13th, 12:45 pm
ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು
September 13th, 12:30 pm
ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 26th, 08:16 pm
ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
July 26th, 07:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
May 30th, 03:29 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ಶ್ರೀ ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವರೇ, ಸಂಸದರೇ, ಶಾಸಕರೇ, ಮತ್ತು ಕಾನ್ಪುರದಿಂದ ಇಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ
May 30th, 03:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸುಮಾರು 47,600 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ 2025ರ ಏಪ್ರಿಲ್ 24 ರಂದು ಆರಂಭದಲ್ಲಿ ನಿಗದಿಯಾಗಿದ್ದ ಕಾನ್ಪುರ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂದು ತಿಳಿಸಿದರು. ಈ ಅನಾಗರಿಕ ಕೃತ್ಯಕ್ಕೆ ಬಲಿಯಾದ ಕಾನ್ಪುರದ ಪುತ್ರ ಶ್ರೀ ಶುಭಂ ದ್ವಿವೇದಿಗೆ ಅವರು ಗೌರವ ಸಲ್ಲಿಸಿದರು. ದೇಶಾದ್ಯಂತ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು, ಸಂಕಟ, ಕೋಪ ಮತ್ತು ಸಾಮೂಹಿಕ ಯಾತನೆಯನ್ನು ತಾವು ಆಳವಾಗಿ ಅನುಭವಿಸಿರುವುದಾಗಿ ಪ್ರಧಾನಿ ಹೇಳಿದರು. ಆಪರೇಷನ್ ಸಿಂದೂರ್ ನಡೆದಾಗ ಈ ಸಾಮೂಹಿಕ ಕೋಪವು ವಿಶ್ವಾದ್ಯಂತ ಕಂಡುಬಂದಿತು ಎಂದು ಅವರು ಹೇಳಿದರು.ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ
May 28th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 22nd, 12:00 pm
ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.