ಜೂನ್ 2 ರಂದು ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

June 01st, 08:01 pm

ವಿಶ್ವ ದರ್ಜೆಯ ವಾಯು ಸಾರಿಗೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಯಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 2 ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.