India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ
July 02nd, 10:14 pm
ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.PM marks 11 years of Digital India, says initiative strengthened the foundation of a Viksit Bharat
July 01st, 12:04 pm
Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.ಮಾರಿಷಸ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
June 28th, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿ ಮಾರಿಷಸ್ ನ ಪ್ರಧಾನಮಂತ್ರಿ ಘನತೆವೆತ್ತ ಡಾ. ನವೀನ್ ಚಂದ್ರ ರಾಮಗೂಲಂ ಅವರನ್ನು ಭೇಟಿಯಾದರು. ಸೆಶೆಲ್ಸ್ ನ ಸುವರ್ಣ ಮಹೋತ್ಸವ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ನಾಯಕರು ಭೇಟಿಯಾದರು. 2024ರ ನವೆಂಬರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇದು ನಾಲ್ಕನೇ ಭೇಟಿಯಾಗಿದೆ.ಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್‌ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್‌ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ಪ್ರಧಾನಮಂತ್ರಿ ಅವರಿಗೆ ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಗೌರವ ಪ್ರದಾನ
June 28th, 03:07 pm
ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರು ಇಂದು ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಪ್ರದಾನ ಮಾಡಿದರು. ಪ್ರಧಾನಮಂತ್ರಿಗಳಿಗೆ ಅವರ ಹಸಿರು ನಾಯಕತ್ವ, ಅಭಿವೃದ್ಧಿಶೀಲ ರಾಷ್ಟ್ರಗಳ ಹಿತಾಸಕ್ತಿಗಳನ್ನು ಮುನ್ನಡೆಸುವ ಪ್ರಯತ್ನಗಳು ಮತ್ತು ನೀಲಿ ಆರ್ಥಿಕತೆ, ಹವಾಮಾನ ನಿಯಂತ್ರಣ ಕ್ರಮಗಳು, ಸಾಗರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಜ್ಯಗಳ ಅಭಿವೃದ್ಧಿಯ ಆಕಾಂಕ್ಷೆಗಳನ್ನು ಉತ್ತೇಜಿಸುವ ಅವರ ದೀರ್ಘಕಾಲದ ಬದ್ಧತೆಗಾಗಿ ಈ ಗೌರವವನ್ನು ನೀಡಲಾಗಿದೆ. ಈ ವಿಶಿಷ್ಟ ಗೌರವವನ್ನು ನೀಡುತ್ತಿರುವುದು ಇದೇ ಮೊದಲು.ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 28th, 02:02 pm
ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 19th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ
June 18th, 05:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು
June 17th, 06:07 pm
ಫ್ರಾನ್ಸ್‌ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.ಎವಿಯಾನ್ ನಲ್ಲಿ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
June 17th, 05:34 pm
ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದಿರುವ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಮಾನ್ಯ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಿದರು. ಈ ವರ್ಷದಲ್ಲಿ ಉಭಯ ನಾಯಕರ ನಡುವಿನ ಎರಡನೇ ಭೇಟಿ ಇದಾಗಿದೆ.ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ
June 15th, 05:32 pm
ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಕೊನೆಗೊಳಿಸುವ ಕುರಿತಾದ ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಸ್ವಾಗತಿಸಿರುವ ಪ್ರಧಾನಮಂತ್ರಿ
June 15th, 01:21 pm
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ಕುರಿತಾದ ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆ ಒಪ್ಪಂದವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.ಭಾರತ-ಫ್ರಾನ್ಸ್ ನಾವೀನ್ಯತೆ ನೀಲನಕ್ಷೆ 2030
June 15th, 05:42 am
2026ರ ಫೆಬ್ರವರಿ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ದ್ವಿಪಕ್ಷೀಯ ಸಂಬಂಧವನ್ನು ”ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ’ ಯ ಎತ್ತರಕ್ಕೆ ಏರಿಸಿದರು ಮತ್ತು ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಉಭಯ ನಾಯಕರು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಸಂಶೋಧನೆ, ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಸೈಬರ್ ಸ್ಪೇಸ್, ಆರೋಗ್ಯ, ಸಂಸ್ಕೃತಿ, ಆರ್ಥಿಕತೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ವಲಯಗಳಲ್ಲಿ ವಿಸ್ತೃತ ಮತ್ತು ವೈವಿಧ್ಯಮಯ ಸಹಕಾರಕ್ಕೆ ಕರೆ ನೀಡಿದರು.ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05th, 07:20 pm
ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು
June 05th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.ವಿಶ್ವ ಪರಿಸರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
June 05th, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದಂದು ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರನ್ನೂ ಶ್ಲಾಘಿಸಿದ್ದಾರೆ.Prime Minister congratulates Ms. Mette Frederiksen on assuming office as the Prime Minister of Denmark
June 03rd, 06:45 pm
Prime Minister Shri Narendra Modi today congratulated Ms. Mette Frederiksen on assuming office as the Prime Minister of Denmark for a remarkable third consecutive term.