The days of TMC’s hooliganism are coming to an end: PM Modi in Kolkata, West Bengal

March 14th, 03:30 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

PM Modi’s fiery speech electrifies the crowd in Kolkata

March 14th, 03:00 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 17th, 04:00 pm

ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,

2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ​​​​​​​ ಸಂವಾದ

February 09th, 10:30 am

ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.

ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.

ಮಲೇಷ್ಯಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 07th, 03:59 pm

ನಿಮ್ಮ ಶುಭಾಶಯಗಳ ಆತ್ಮೀಯತೆಯು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

February 07th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಆತ್ಮೀಯ ಸ್ವಾಗತವು ನಮ್ಮ ಹಂಚಿಕೆಯ ಸಂಸ್ಕೃತಿಯ ಸುಂದರ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಈ ಸಮುದಾಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರು ತಮ್ಮ ಆತ್ಮೀಯ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮನ್ನು ಸ್ವಾಗತಿಸಿ, ತಮ್ಮ ಕಾರಿನಲ್ಲೇ ಈ ಕಾರ್ಯಕ್ರಮಕ್ಕೆ ಕರೆತಂದಿದ್ದನ್ನು ಅವರು ಸ್ಮರಿಸಿದರು. ಈ ವಿಶೇಷ ಸನ್ನೆಗಳು ಭಾರತದ ಮೇಲೆ ಮತ್ತು ಇಲ್ಲಿ ಉಪಸ್ಥಿತರಿರುವ ಜನರ ಮೇಲೆ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗಿರುವ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಸೇರಿಸಿದರು.

Ending TMC’s Maha Jungle Raj and bringing BJP’s good governance is essential: PM Modi in Singur, West Bengal

January 18th, 03:35 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

PM Modi addresses a massive public rally in Singur, Hooghly, West Bengal

January 18th, 03:32 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 12th, 06:45 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು

January 12th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.

ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

January 12th, 01:35 pm

ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.

ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 12th, 12:49 pm

ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.

ಯುವ ಶಕ್ತಿಯ ಮೇಲೆ ಸ್ವಾಮಿ ವಿವೇಕಾನಂದರಿಗೆ ಇದ್ದ ನಂಬಿಕೆಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

January 12th, 10:11 am

ರಾಷ್ಟ್ರ ನಿರ್ಮಾಣದ ಅತ್ಯಂತ ಶಕ್ತಿಶಾಲಿ ಅಡಿಪಾಯ ಎಂದರೆ ಅದು ಯುವಶಕ್ತಿ ಎಂದು ಸ್ವಾಮಿ ವಿವೇಕಾನಂದರು ಬಲವಾಗಿ ನಂಬಿದ್ದರು ಎಂದು ಸಾರುವ ಸಂಸ್ಕೃತ ಸುಭಾಷಿತವನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ. ಭಾರತೀಯ ಯುವಜನರು ತಮ್ಮ ಉತ್ಸಾಹ ಮತ್ತು ತೀವ್ರ ಆಸಕ್ತಿಯ ಮೂಲಕ ಪ್ರತಿಯೊಂದು ಮಹತ್ವಾಕಾಂಕ್ಷೆಯನ್ನೂ ಸಾಕಾರಗೊಳಿಸಬಹುದು ಎಂಬ ಸಂದೇಶವನ್ನು ಈ ಸುಭಾಷಿತ ಸಾರುತ್ತದೆ:

ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 12th, 09:17 am

ಇಂದು ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಮತ್ತು ಅವರ ಕಾರ್ಯಗಳು ಅಭಿವೃದ್ಧಿಶೀಲ ಭಾರತದ ಸಂಕಲ್ಪಕ್ಕೆ ನಿರಂತರವಾಗಿ ಹೊಸ ಶಕ್ತಿಯನ್ನು ತುಂಬುತ್ತಿವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ರಾಷ್ಟ್ರೀಯ ಯುವ ದಿನದ ಈ ಶುಭ ಸಂದರ್ಭದಲ್ಲಿ, ದೇಶದ ಎಲ್ಲಾ ನಾಗರಿಕರಿಗೆ ವಿಶೇಷವಾಗಿ ನಮ್ಮ ಯುವಜನತೆಗೆ ಹೊಸ ಶಕ್ತಿ ಮತ್ತು ಹೊಸ ಆತ್ಮವಿಶ್ವಾಸವನ್ನು ತಂದುಕೊಡಲಿ ಎಂಬುದು ನನ್ನ ಆಶಯ'' ಎಂದು ಶ್ರೀ ಮೋದಿ ಅವರು ಹೇಳಿದರು.

ಜನವರಿ 12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯ ಸಂದರ್ಭದಲ್ಲಿ, 'ವಿಕಸಿತ ಭಾರತ ಯುವ ನಾಯಕರ ಸಂವಾದ - 2026'ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

January 10th, 11:03 am

ಸ್ವಾಮಿ ವಿವೇಕಾನಂದರ ಜನ್ಮದಿನದ ಸ್ಮರಣಾರ್ಥ ಆಚರಿಸುವ 'ರಾಷ್ಟ್ರೀಯ ಯುವ ದಿನ'ದ ಅಂಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 12 ರಂದು ಸಂಜೆ 4:30 ರ ಸುಮಾರಿಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026' ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧಾರ್ಮಿಕ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣವನ್ನು ಹಂಚಿಕೊಂಡ ಪ್ರಧಾನಮಂತ್ರಿ

September 11th, 08:49 am

ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಮಾಡಿದ ಐತಿಹಾಸಿಕ ಭಾಷಣದ 132ನೇ ವಾರ್ಷಿಕೋತ್ಸವದ ಶುಭ ಸಂದರ್ಭವನ್ನು ಮೆಲುಕುಹಾಕಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಸಾಮರಸ್ಯ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಒತ್ತಿಹೇಳುವ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಹೇಳಿದ್ದಾರೆ. ಈ ಭಾಷಣವು ನಿಜವಾಗಿಯೂ ನಮ್ಮ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಮತ್ತು ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಸ್ವಾಮಿ ವಿವೇಕಾನಂದ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

July 04th, 08:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಚಿಂತನೆಗಳು ಮತ್ತು ದೂರದೃಷ್ಟಿ ನಮ್ಮ ಸಮಾಜಕ್ಕೆ ದಾರಿದೀಪವಾಗಿ ಉಳಿದಿವೆ ಎಂದು ಅವರು ಹೇಳಿದರು. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಆತ್ಮವಿಶ್ವಾಸವನ್ನು ಮೂಡಿಸಿದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.