ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಪಾಟ್ನಾ ಸಾಹಿಬ್ ನ ತಖತ್ ಶ್ರೀ ಹರಿಮಂದಿರ ಜಿ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

November 02nd, 10:10 pm

ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ನಲ್ಲಿ ಪ್ರಾರ್ಥನೆ ಸಲ್ಲಿಸುವುದು ಅತ್ಯಂತ ದೈವಿಕ ಅನುಭವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸಿಖ್ ಗುರುಗಳ ಉದಾತ್ತ ಬೋಧನೆಗಳು ಇಡೀ ಮನುಕುಲಕ್ಕೆ ಪ್ರೇರಣೆ ನೀಡುತ್ತವೆ ಎಂದು ಅವರು ಹೇಳಿದರು.