Over the last 11 years, India has changed its economic DNA: PM Modi during India-Oman Business Forum
December 18th, 04:08 pm
PM Modi addressed the India–Oman Business Forum in Muscat, highlighting centuries-old maritime ties, the India–Oman CEPA as a roadmap for shared growth, and India’s strong economic momentum. He invited Omani businesses to partner in future-ready sectors such as green energy, innovation, fintech, AI and agri-tech to deepen bilateral trade and investment.ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
November 26th, 10:10 am
ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು
November 26th, 10:00 am
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 02nd, 05:34 pm
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
June 02nd, 05:00 pm
ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಜನವರಿ 18 ರಂದು ಪ್ರಧಾನಮಂತ್ರಿ ಅವರಿಂದ ಆಸ್ತಿ ಕಾರ್ಡ್ ಗಳ ವಿತರಣೆ
January 16th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18 ರಂದು ಮಧ್ಯಾಹ್ನ 12:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 230ಕ್ಕೂ ಹೆಚ್ಚು ಜಿಲ್ಲೆಗಳ 50000ಕ್ಕೂ ಹೆಚ್ಚು ಹಳ್ಳಿಗಳಲ್ಲಿನ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಲಿದ್ದಾರೆ.ಸ್ವಾಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಪ್ರಾಪರ್ಟಿ ಕಾರ್ಡ್ ವಿತರಿಸಲಿರುವ ಪ್ರಧಾನಮಂತ್ರಿ
December 26th, 04:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಗ್ರಾಮಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ (SVAMITVA) ಯೋಜನೆಯಡಿ 50 ಲಕ್ಷ ಪ್ರಾಪರ್ಟಿ ಕಾರ್ಡ್ಗಳನ್ನು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ.ಭಾರತದ ಮೈತ್ರಿ ಪಂಜಾಬ್ನಲ್ಲಿ ಉದ್ಯಮ ಮತ್ತು ಕೃಷಿ ಎರಡನ್ನೂ ಹಾಳುಮಾಡಿದೆ: ಪಂಜಾಬ್ನ ಹೋಶಿಯಾರ್ಪುರದಲ್ಲಿ ಪ್ರಧಾನಿ ಮೋದಿ
May 30th, 11:53 am
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್ನ ಹೋಶಿಯಾರ್ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.ಪಂಜಾಬ್ನ ಹೋಶಿಯಾರ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 30th, 11:14 am
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024 ರ ಚುನಾವಣಾ ಪ್ರಚಾರವನ್ನು ಪಂಜಾಬ್ನ ಹೋಶಿಯಾರ್ಪುರದಲ್ಲಿ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯೊಂದಿಗೆ ಮುಕ್ತಾಯಗೊಳಿಸಿದರು, ಗುರು ರವಿದಾಸ್ ಜಿ ಅವರ ಪವಿತ್ರ ಭೂಮಿಗೆ ನಮನ ಸಲ್ಲಿಸಿದರು ಮತ್ತು ಅಭಿವೃದ್ಧಿ ಮತ್ತು ಪರಂಪರೆಯ ಸಂರಕ್ಷಣೆಗೆ ತಮ್ಮ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು.