Every small step will build Viksit Bharat @ 2047: PM Modi to Students at Pariksha Pe Charcha
February 09th, 10:30 am
In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.PM Modi interacts with students from multiple locations in the second episode of Pariksha Pe Charcha 2026
February 09th, 10:00 am
In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.ಈ ವರ್ಷದ #ParikshaPeCharcha ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ
January 07th, 07:05 pm
ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾದ #ParikshaPeCharcha ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಮೂಲಕ ನಡೆಸಲಿದ್ದಾರೆ.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನ ಜನವರಿ 3 ರಂದು ಪ್ರಧಾನಮಂತ್ರಿ ಅವರಿಂದ ಉದ್ಘಾಟನೆ
January 01st, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 3 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಆಧ್ಯಾತ್ಮಿಕ ಶುದ್ಧತೆ ಮತ್ತು ಪರಿಪೂರ್ಣತೆ ಸಾರುವ “ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ (“ಬೆಳಕು ಮತ್ತು ಕಮಲ (ಆಧ್ಯಾತ್ಮಿಕ ಸಂಕೇತ): ಜ್ಞಾನೋದಯ ವ್ಯಕ್ತಿಯ ಅವಶೇಷ”) ಎಂಬ ಶೀರ್ಷಿಕೆಯಡಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.Cabinet approves 57 new Kendriya Vidyalayas worth Rs.5862 crore
October 01st, 03:43 pm
The Cabinet Committee on Economic Affairs, chaired by PM Modi, has approved the opening of 57 new Kendriya Vidyalayas (KVs) across the country, with an outlay of ₹5,862.55 crore for a period of nine years starting from 2026–27. These new KVs reflect a strong commitment to serving underserved and strategically important regions, while also creating employment opportunities.ಶಿಕ್ಷಕರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
September 05th, 08:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನವಾದ ಇಂದು ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಎಳೆ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಪ್ರಬಲವಾದ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ವಿಶಿಷ್ಟ ವಿದ್ವಾಂಸ ಮತ್ತು ಶಿಕ್ಷಕರಾದ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಆಲೋಚನೆಗಳನ್ನು ನಾವು ಸ್ಮರಿಸುತ್ತೇವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಶ್ರೀ ಗುರು ಗ್ರಂಥ ಸಾಹಿಬ್ ಅವರ ಪ್ರಕಾಶ್ ಪುರಬ್ ಪವಿತ್ರ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿ
August 24th, 01:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗ್ರಂಥ ಸಾಹಿಬ್ ಅವರ ಪ್ರಕಾಶ್ ಪುರಬ್ ಪವಿತ್ರ ಸಂದರ್ಭದಲ್ಲಿ ಆತ್ಮೀಯವಾಗಿ ಶುಭಾಶಯಗಳನ್ನು ಕೋರಿದ್ದಾರೆ.ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ
July 13th, 10:47 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.ಸಿ ಬಿ ಎಸ್ ಇ 12ನೇ ಮತ್ತು 10ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪ್ರಧಾನಮಂತ್ರಿ ಅಭಿನಂದನೆ
May 13th, 02:36 pm
ಸಿ ಬಿ ಎಸ್ ಇ 12ನೇ ಮತ್ತು 10ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ. ಇದು ನಿಮ್ಮ ದೃಢನಿಶ್ಚಯ, ಶಿಸ್ತು ಮತ್ತು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಇಂದು ಈ ಸಾಧನೆಗೆ ಕಾರಣರಾದ ಪೋಷಕರು, ಶಿಕ್ಷಕರು ಮತ್ತು ಇತರರ ಪಾತ್ರವನ್ನು ಶ್ಲಾಘಿಸುವ ದಿನವಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
February 10th, 11:30 am
ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 10th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
September 06th, 04:15 pm
ಸರ್, ಸಂಸ್ಕೃತ ಶಿಕ್ಷಕಿನಾಗಿ, ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ನನ್ನ ಕನಸಾಗಿತ್ತು. ಈ ಸಂಸ್ಕೃತಿಯು ನಮ್ಮ ಪುರಾತನ ಬೋಧನೆಗಳು ಅಥವಾ ಸಂಸ್ಕಾರಗಳ ಮೂಲಕ ಜೀವನದ ಮೌಲ್ಯಗಳು ಮತ್ತು ಆದರ್ಶಗಳನ್ನು ನೀಡುತ್ತದೆ. ಈ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಂಡು, ನಾನು ನನ್ನ ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಬಗ್ಗೆ ಆಸಕ್ತಿಯನ್ನು ಬೆಳೆಸಿದ್ದೇನೆ ಮತ್ತು ಅದನ್ನು ನೈತಿಕ ಶಿಕ್ಷಣದ ಅಡಿಪಾಯವನ್ನಾಗಿ ಮಾಡಿದ್ದೇನೆ. ವಿವಿಧ ಶ್ಲೋಕಗಳ ಮೂಲಕ, ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಲು ನಾನು ಪ್ರಯತ್ನಿಸಿದ್ದೇನೆ.ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರೊಂದಿಗೆ ಪ್ರಧಾನ ಮಂತ್ರಿ ಸಂವಾದ
September 06th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.