ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 09th, 04:41 pm
ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ
September 26th, 09:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು
July 24th, 07:38 pm
'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.ಭಾರತ-ಯುಕೆ (ಯುನೈಟೆಡ್ ಕಿಂಗ್‌ಡಮ್) ವಿಷನ್ 2035
July 24th, 07:12 pm
ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್‌ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.Today, India is not just a Nation of Dreams but also a Nation That Delivers: PM Modi in TV9 Summit
March 28th, 08:00 pm
PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು
March 28th, 06:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಪ್ರಧಾನಮಂತ್ರಿಯವರು ಅಕ್ಟೋಬರ್ 15 ರಂದು ಐಟಿಯು ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 ಅನ್ನು ಉದ್ಘಾಟಿಸಲಿದ್ದಾರೆ
October 14th, 05:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಂತರರಾಷ್ಟ್ರೀಯ ದೂರಸಂಪರ್ಕ ಮಹಾಸಂಘ - ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಮ್ಮೇಳನ 2024 (ಡಬ್ಲ್ಯುಟಿಎಸ್ಎ) ಅನ್ನು ಉದ್ಘಾಟಿಸಲಿದ್ದಾರೆ.ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಮತ್ತೊಂದು ಸೆಮಿಕಂಡಕ್ಟರ್ (ಅರೆವಾಹಕ) ಘಟಕಕ್ಕೆ ಕ್ಯಾಬಿನೆಟ್ ಅನುಮೋದನೆ
September 02nd, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಗುಜರಾತ್ನ ಸನಂದ್ನಲ್ಲಿ ಅರೆವಾಹಕ ಘಟಕವನ್ನು ಸ್ಥಾಪಿಸುವ ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್ನ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಅರೆವಾಹಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.ಹೂಡಿಕೆ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯ ಚೊಚ್ಚಲ ಸಭೆ ನಡೆಸಿದ ಭಾರತ-ಸೌದಿ ಅರೇಬಿಯಾ
July 28th, 11:37 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಡಾ.ಪಿ.ಕೆ. ಮಿಶ್ರಾ ಮತ್ತು ಸೌದಿ ಇಂಧನ ಸಚಿವ ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಸಹ ಅಧ್ಯಕ್ಷತೆಯಲ್ಲಿ ಹೂಡಿಕೆಗಳ ಕುರಿತ ಭಾರತ-ಸೌದಿ ಅರೇಬಿಯಾ ಉನ್ನತ ಮಟ್ಟದ ಕಾರ್ಯಪಡೆಯ ಮೊದಲ ಸಭೆಯು ಇಂದು ವರ್ಚುವಲ್ ಮಾದರಿಯಲ್ಲಿ ನಡೆಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ
June 17th, 07:44 pm
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್ ಎಸ್ ಎ) ಶ್ರೀ.ಜೇಕ್ ಸಲಾವನ್ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 11:30 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜೀ, ರಾಜೀವ್ ಚಂದ್ರಶೇಖರ್ ಜೀ, ಅಸ್ಸಾಂ ಮತ್ತು ಗುಜರಾತ್ ಮುಖ್ಯಮಂತ್ರಿಗಳು, ಟಾಟಾ ಗ್ರೂಪ್ ನ ಅಧ್ಯಕ್ಷ ಶ್ರೀ ಎನ್ ಚಂದ್ರಶೇಖರನ್, ಸಿಜಿ ಪವರ್ ಅಧ್ಯಕ್ಷ ವೆಲ್ಲಯನ್ ಸುಬ್ಬಯ್ಯ ಜೀ ಮತ್ತು ಕೇಂದ್ರ, ರಾಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಇತರ ಎಲ್ಲ ಗಣ್ಯರು. ಮಹಿಳೆಯರೇ ಮತ್ತು ಮಹನೀಯರೇ!