ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಳೆಯ ಟ್ರಕ್‌ಗಳು ಮತ್ತು ಬಸ್‌ಗಳನ್ನು ಬದಲಾಯಿಸಲು ಎನ್‌ಸಿಆರ್‌ಪಿಬಿಗೆ ಬೆಂಬಲ ನೀಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
June 03rd, 03:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಮತ್ತು ಶುದ್ಧ ಸಾರಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಎರಡು ವರ್ಷಗಳ ಮಹತ್ವದ ಯೋಜನೆಗೆ ಅನುಮೋದನೆ ನೀಡಿದೆ.ಈ ಯೋಜನೆಗೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ (ಎಂ ಒ ಎಚ್ ಯು ಎ) ಅಡಿಯಲ್ಲಿ ಬರುವ ರಾಷ್ಟ್ರೀಯ ರಾಜಧಾನಿ ಪ್ರದೇಶ ಯೋಜನಾ ಮಂಡಳಿ (ಎನ್ ಸಿ ಆರ್ ಪಿ ಬಿ) ಮೂಲಕ ಆರ್ಥಿಕ ನೆರವು ಒದಗಿಸಲಾಗುವುದು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಇದನ್ನು ಜಾರಿಗೊಳಿಸಲಿದೆ. ಇದನ್ನು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಯೋಗದೊಂದಿಗೆ ಜಾರಿಗೆ ತರಲಾಗುವುದು.ಫೆಬ್ರವರಿ 16 ರಂದು ಟಿಇಆರ್ ಐನ ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಲಿರುವ ಪ್ರಧಾನಿ
February 15th, 11:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಫೆಬ್ರವರಿ 16 ರಂದು ಸಂಜೆ 6 ಗಂಟೆಗೆ ಇಂಧನ ಮತ್ತು ಸಂಪನ್ಮೂಲಗಳ ಸಂಸ್ಥೆ (TERI) ವಿಶ್ವ ಸುಸ್ಥಿರ ಅಭಿವೃದ್ಧಿ ಶೃಂಗಸಭೆಯಲ್ಲಿ ವೀಡಿಯೊ ಸಂದೇಶದ ಮೂಲಕ ಉದ್ಘಾಟನಾ ಭಾಷಣ ಮಾಡಲಿದ್ದಾರೆ.