ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
March 20th, 02:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ಥೈಲ್ಯಾಂಡ್ ನ ಮಾತೃ ರಾಣಿ ಅವರಾದ, ಘನತೆವೆತ್ತ ರಾಣಿ ಸಿರಿಕಿಟ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 26th, 03:39 pm
ಥೈಲ್ಯಾಂಡ್ ನ ಮಾತೃ ರಾಣಿ ಅವರಾದ, ಘನತೆವೆತ್ತ ರಾಣಿ ಸಿರಿಕಿಟ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಅವರು ಸಲ್ಲಿಸಿದ ಸೇವೆ ಮತ್ತು ಸಮರ್ಪಣೆಯನ್ನು ನೆನೆದ ಪ್ರಧಾನಮಂತ್ರಿ, ಅವರ ಪರಂಪರೆ ಪ್ರಪಂಚದಾದ್ಯಂತದ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಭಾರತ-ಥೈಲ್ಯಾಂಡ್ ವ್ಯೂಹಾತ್ಮಕ ಪಾಲುದಾರಿಕೆ ಸ್ಥಾಪನೆ ಕುರಿತ ಜಂಟಿ ಘೋಷಣೆ
April 04th, 07:29 pm
2025ರ ಏಪ್ರಿಲ್ 03-04 ರ ಅವಧಿಯಲ್ಲಿ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಗೆ ಅಧಿಕೃತ ಭೇಟಿ ನೀಡಿದರು ಮತ್ತು ಥೈಲ್ಯಾಂಡ್ ರಾಜಪ್ರಭುತ್ವದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ಬ್ಯಾಂಕಾಕ್ ನಲ್ಲಿ ನಡೆದ 6 ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ಯಾಂಕಾಕ್ ನ ಸರ್ಕಾರಿ ಭವನದಲ್ಲಿ ಪ್ರಧಾನಮಂತ್ರಿ ಶಿನವಾತ್ರಾ ಅವರು ಔಪಚಾರಿಕ, ಸಾಂಪ್ರದಾಯಿಕ ಸ್ವಾಗತ ಕೋರಿದರು.ಥೈಲ್ಯಾಂಡ್ ನ ಮಹಾರಾಜ ಮತ್ತು ಮಹಾರಾಣಿಯವರೊಂದಿಗೆ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
April 04th, 07:27 pm
ಪ್ರಧಾನಮಂತ್ರಿಯವರು ಇಂದು ಬ್ಯಾಂಕಾಕ್ ನ ದುಸಿತ್ ಅರಮನೆಯಲ್ಲಿ ಥೈಲ್ಯಾಂಡ್ ಸಾಮ್ರಾಜ್ಯದ ಘನತೆವೆತ್ತ ದೊರೆ ಮಹಾ ವಜಿರಲಾಂಗ್ ಕಾರ್ನ್ ಫ್ರಾ ವಜಿರಕ್ಲಾವೊಯುಹುವಾ ಮತ್ತು ಘನತೆವೆತ್ತ ರಾಣಿ ಸುಥಿಡಾ ಬಜ್ರಸುಧಾಬಿಮಲಾಲಕ್ಷಣ ಅವರೊಂದಿಗೆ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡರು.ಪ್ರಧಾನಮಂತ್ರಿ ಅವರಿಂದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ನೇಪಾಳ ಪ್ರಧಾನಮಂತ್ರಿಯವರ ಭೇಟಿ
April 04th, 04:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಕೆ.ಪಿ.ಶರ್ಮಾ ಓಲಿ ಅವರನ್ನು ಬ್ಯಾಂಕಾಕ್ ನಲ್ಲಿ ಇಂದು 6ನೇ ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿದರು.ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರರನ್ನು ಭೇಟಿಯಾದ ಪ್ರಧಾನಮಂತ್ರಿ
April 04th, 03:49 pm
ಬ್ಯಾಂಕಾಕ್ ನಲ್ಲಿ ನಡೆದ ಬಿ.ಐ.ಎಂ.ಎಸ್.ಟಿ.ಇ.ಸಿ. ( ಬಿಮ್ ಸ್ಟೆಕ್) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಭೇಟಿ ಮಾಡಿದರು.Prime Minister’s visit to Wat Pho
April 04th, 03:36 pm
PM Modi with Thai PM Paetongtarn Shinawatra, visited Wat Pho, paying homage to the Reclining Buddha. He offered ‘Sanghadana’ to senior monks and presented a replica of the Ashokan Lion Capital. He emphasized the deep-rooted civilizational ties between India and Thailand, strengthening cultural bonds.ಉಪಕ್ರಮಗಳ ಪಟ್ಟಿ: ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗಿ
April 04th, 02:32 pm
ಬಿಮ್ ಸ್ಟೆಕ್ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ.ಭೂತಾನ್ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
April 04th, 01:30 pm
ಇಂದು ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ 6 ನೇ ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೂತಾನ್ ಪ್ರಧಾನಮಂತ್ರಿ ತ್ಶೆರಿಂಗ್ ಟೋಬ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ ವೇಳೆ ನೀಡಿದ ಹೇಳಿಕೆಯ ಕನ್ನಡ ಅನುವಾದ
April 04th, 12:59 pm
ಮೊದಲಿಗೆ ನಾನು ಈ ಶೃಂಗಸಭೆಯನ್ನು ಅತ್ಯುತ್ತಮವಾಗಿ ಆಯೋಜಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ಘನತೆವೆತ್ತ ಶಿನವತ್ರಾ ಮತ್ತು ಥೈಲ್ಯಾಂಡ್ ಸರ್ಕಾರಕ್ಕೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇನೆ.ಥಾಯ್ಲೆಂಡ್ ನಲ್ಲಿ ನಡೆದ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು
April 04th, 12:54 pm
ಥಾಯ್ಲೆಂಡ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 6ನೇ ಬಿಮ್‌ಸ್ಟೆಕ್ (ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಶೃಂಗಸಭೆಯ ವಿಷಯ - ಬಿಮ್‌ಸ್ಟೆಕ್: ಸಮೃದ್ಧ, ಸ್ಥಿತಿಸ್ಥಾಪಕ ಮತ್ತು ಮುಕ್ತ. ಇದು ಬಿಮ್‌ಸ್ಟೆಕ್ ಪ್ರದೇಶದ ನಾಯಕರ ಆದ್ಯತೆಗಳು ಮತ್ತು ಜನರ ಆಕಾಂಕ್ಷೆಗಳನ್ನು ಹಾಗೂ ಜಾಗತಿಕ ಅನಿಶ್ಚಿತತೆಯ ಸಮಯದಲ್ಲಿ ಹಂಚಿಕೆಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಬಿಮ್‌ಸ್ಟೆಕ್ ನ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ
April 04th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ 6ನೇ ʻಬಿಮ್‌ಸ್ಟೆಕ್ʼ ಶೃಂಗಸಭೆಯಲ್ಲಿ ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದರು. ʻಬಿಮ್‌ಸ್ಟೆಕ್ʼ ರಾಷ್ಟ್ರಗಳಾದ್ಯಂತ ವ್ಯಾಪಾರವನ್ನು ಉತ್ತೇಜಿಸಲು ಮತ್ತು ಐಟಿ ಕ್ಷೇತ್ರದ ಶ್ರೀಮಂತ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅವರು ಒತ್ತಾಯಿಸಿದರು. ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಶ್ರೀ ಮೋದಿ ಅವರು ಕರೆ ನೀಡಿದರು. ʻಬಿಮ್‌ಸ್ಟೆಕ್ʼಗೆ ಸಾಮೂಹಿಕವಾಗಿ ಶಕ್ತಿ ತುಂಬುವಂತೆ ಒತ್ತಾಯಿಸಿದ ಅವರು, ನಾಯಕತ್ವ ವಹಿಸುವ ಯುವಕರ ಪಾತ್ರವನ್ನು ಒತ್ತಿಹೇಳಿದರು. ಸಾಂಸ್ಕೃತಿಕ ಸಂಪರ್ಕಗಳು ʻಬಿಮ್‌ಸ್ಟೆಕ್ʼ ರಾಷ್ಟ್ರಗಳನ್ನು ಮತ್ತಷ್ಟು ಹತ್ತಿರ ತರುತ್ತವೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
April 04th, 09:43 am
ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ಪ್ರಧಾನಮಂತ್ರಿ ವಿವರಣೆ
April 03rd, 09:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸಿರುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ತಿಳಿಸಿದ್ದಾರೆ.