ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ

July 09th, 12:58 am

ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಅನ್ನು ಪ್ರದಾನ ಮಾಡಿದರು.

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 08th, 08:30 pm

ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.