ಗೌರವದ ವಿಶ್ವ ಪ್ರವಾಸ: ಪ್ರಧಾನಿ ಮೋದಿ ಅವರನ್ನು ಗೌರವಿಸಿದ 29 ದೇಶಗಳು - ಮತ್ತು ಇಲ್ಲಿ ಏಕೆ!
July 07th, 04:59 pm
ಕುವೈತ್, ಫ್ರಾನ್ಸ್, ಪಪುವಾ ನ್ಯೂಗಿನಿಯಾ ಮತ್ತು ಇನ್ನೂ ಎರಡು ಡಜನ್‌ಗಿಂತಲೂ ಹೆಚ್ಚು ರಾಷ್ಟ್ರಗಳ ನಾಯಕರು ಭಾರತದ ಪ್ರಧಾನಿಗೆ ತಮ್ಮ ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿದಾಗ, ಅದು ರಾಜತಾಂತ್ರಿಕ ಸೌಜನ್ಯಕ್ಕಿಂತ ಹೆಚ್ಚಿನದನ್ನು ಪ್ರತಿಬಿಂಬಿಸುತ್ತದೆ. ಇದು ರಾಷ್ಟ್ರದ ಬೆಳೆಯುತ್ತಿರುವ ಪ್ರಭಾವ, ಮೌಲ್ಯಗಳು ಮತ್ತು ನಾಯಕತ್ವದ ಜಾಗತಿಕ ಮನ್ನಣೆಯನ್ನು ಸೂಚಿಸುತ್ತದೆ.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.“ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ” ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
July 03rd, 02:15 am
ಘಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ” ಅನ್ನು ಸ್ವತಃ ಅಧ್ಯಕ್ಷರು ನನಗೆ ಪ್ರದಾನ ಮಾಡಿರುವುದು ನನ್ನ ಸೌಭಾಗ್ಯ ಮತ್ತು ನನಗೆ ಸಂದ ಮಹಾನ್ ಗೌರವವೆಂದು ಭಾವಿಸುತ್ತೇನೆ.ಪ್ರಧಾನಮಂತ್ರಿಗಳಿಗೆ ಘಾನಾದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
July 03rd, 02:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವಕ್ಕಾಗಿ ಘಾನಾ ಅಧ್ಯಕ್ಷರಾದ ಮಾನ್ಯ ಜಾನ್ ಡ್ರಾಮಾನಿ ಮಹಮ ಅವರು ಘಾನಾದ ರಾಷ್ಟ್ರೀಯ ಗೌರವವಾದ ಆಫೀಸರ್ - ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ - ಪ್ರದಾನ ಮಾಡಿದರು. 140 ಕೋಟಿ ಭಾರತೀಯರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿ ಅವರು, ಈ ಪ್ರಶಸ್ತಿಯನ್ನು ಭಾರತದ ಯುವಜನರ ಆಕಾಂಕ್ಷೆಗಳು, ದೇಶದ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆ ಹಾಗೂ ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳಿಗೆ ಅರ್ಪಿಸುವುದಾಗಿ ಹೇಳಿದರು.