ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ

September 12th, 02:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

ಬಿಹಾರದ ಗಯಾಜಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 22nd, 12:00 pm

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಜಿ, ಜನಪ್ರಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಜಿತನ್ ರಾಮ್ ಮಾಂಝಿ ಜಿ, ರಾಜೀವ್ ರಂಜನ್ ಸಿಂಗ್, ಚಿರಾಗ್ ಪಾಸ್ವಾನ್ ಜಿ, ರಾಮ್ ನಾಥ್ ಠಾಕೂರ್ ಜಿ, ನಿತ್ಯಾನಂದ ರೈ ಜಿ, ಸತೀಶ್ ಚಂದ್ರ ದುಬೆ ಜಿ, ರಾಜ್ ಭೂಷಣ್ ಚೌಧರಿ ಜಿ, ಉಪಮುಖ್ಯಮಂತ್ರಿಗಳಾದ ಸಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಬಿಹಾರ ಸರ್ಕಾರದ ಸಚಿವರೆ, ನನ್ನ ಸಂಸದ ಮಿತ್ರರಾದ ಉಪೇಂದ್ರ ಕುಶ್ವಾಹ ಜಿ, ಇಲ್ಲಿರುವ ಇತರ ಸಂಸದರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಗಯಾದಲ್ಲಿ 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು

August 22nd, 11:20 am

ಬಿಹಾರದ ಗಯಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮತ್ತು ಮೋಕ್ಷದ ಪವಿತ್ರ ನಗರವಾದ ಗಯಾಕ್ಕೆ ಪ್ರಧಾನಿಯವರು ನಮನ ಸಲ್ಲಿಸಿದರು ಮತ್ತು ವಿಷ್ಣುಪಾದ ಮಂದಿರದ ಅದ್ಭುತ ಭೂಮಿಯಿಂದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಗಯಾ ಆಧ್ಯಾತ್ಮಿಕತೆ ಮತ್ತು ಶಾಂತಿಯ ಭೂಮಿ ಎಂದು ಶ್ರೀ ಮೋದಿ ಹೇಳಿದರು. ಭಗವಾನ್ ಬುದ್ಧ ಜ್ಞಾನೋದಯವನ್ನು ಪಡೆದದ್ದು ಈ ಪುಣ್ಯಭೂಮಿಯಲ್ಲಿ ಎಂದು ಅವರು ಹೇಳಿದರು. ಗಯಾ ಪ್ರಾಚೀನ ಮತ್ತು ಅತ್ಯಂತ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಈ ಪ್ರದೇಶದ ಜನರು ನಗರವನ್ನು ಗಯಾ ಎಂದು ಮಾತ್ರ ಕರೆಯಬಾರದು, ಬದಲಿಗೆ ಗೌರವಯುತವಾಗಿ ಗಯಾಜಿ ಎಂದು ಕರೆಯಬೇಕೆಂದು ಬಯಸುತ್ತಾರೆ ಎಂದು ಹೇಳಿದ ಪ್ರಧಾನಿ, ಈ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಅಭಿನಂದಿಸಿದರು. ಗಯಾದ ತ್ವರಿತ ಅಭಿವೃದ್ಧಿಗಾಗಿ ಕೇಂದ್ರ ಮತ್ತು ಬಿಹಾರದಲ್ಲಿರುವ ತಮ್ಮ ಸರ್ಕಾರಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.

ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 17th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

May 25th, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅವರು ದಾಹೋಡ್ ಗೆ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 11:15 ರ ಸುಮಾರಿಗೆ ಅವರು ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಎಲೆಕ್ಟ್ರಿಕ್ ಲೋಕೋಮೋಟಿವ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಅವರು ದಾಹೋಡ್ ನಲ್ಲಿ ಸುಮಾರು 24,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ

May 07th, 12:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ: