ರಷ್ಯಾದ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆ
September 01st, 01:24 pm
ನಿಮ್ಮನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ ಮತ್ತು ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ನೆನಪಿನಲ್ಲಿಡುವ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಇದು ವಿವಿಧ ವಿಷಯಗಳ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ನಮಗೆ ಅವಕಾಶವನ್ನು ಒದಗಿಸುತ್ತದೆ.ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
September 01st, 01:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೀನಾದ ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ನೇಪಥ್ಯದಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು.25ನೇ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
September 01st, 10:14 am
ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 25ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನನಗೆ ಸಂತಸವಾಗಿದೆ. ಸಂಭ್ರಮದಿಂದ ಸ್ವಾಗತಿಸಿ, ಸಂತೋಷದಿಂದ ಆತಿಥ್ಯ ಸತ್ಕಾರ ನೀಡಿದ ಅಧ್ಯಕ್ಷರಾದ ಕ್ಸಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಚೀನಾದ ಟಿಯಾಂಜಿನ್ ನಲ್ಲಿ ನಡೆದ 25ನೇ ʻಎಸ್‌ಸಿಒʼ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
September 01st, 10:00 am
2025ರ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 25ನೇ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು. ಶೃಂಗಸಭೆಯು ʻಎಸ್‌ಸಿಒʼ ಅಭಿವೃದ್ಧಿ ಕಾರ್ಯತಂತ್ರ, ಜಾಗತಿಕ ಆಡಳಿತದ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಶಾಂತಿ ಮತ್ತು ಭದ್ರತೆ, ಆರ್ಥಿಕ ಮತ್ತು ಹಣಕಾಸು ಸಹಕಾರ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ನಿರ್ಮಾಣಾತ್ಮಕ ಚರ್ಚೆಗಳಿಗೆ ಸಾಕ್ಷಿಯಾಯಿತು.ಎಸ್.ಸಿ.ಒ. ಶೃಂಗಸಭೆಯ ಸಂದರ್ಭದಲ್ಲಿ ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
August 31st, 04:50 pm
ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದರು.ತಿಯಾನ್ ಜಿನ್ ನಲ್ಲಿ ಚೀನಾ ಅಧ್ಯಕ್ಷರಾದ ಕ್ಸಿ ಜಿನ್ ಪಿಂಗ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
August 31st, 11:06 am
ನಿಮ್ಮ ಆತ್ಮೀಯ ಸ್ವಾಗತಕ್ಕೆ ನನ್ನ ಹೃತ್ಪೂರ್ವಕ ವಂದನೆಗಳು. ಕಜಾನ್ ನಲ್ಲಿ ಕಳೆದ ವರ್ಷ ನಾವು ನಡೆಸಿದ ಅರ್ಥಪೂರ್ಣ ಚರ್ಚೆಯು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ದಿಶೆಯನ್ನು ನೀಡಿದೆ. ಗಡಿಯಲ್ಲಿ ಯುದ್ಧದ ಸನ್ನಿವೇಶದಿಂದ ಹಿಂದಕ್ಕೆ ಸರಿದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನೆಲೆಸಿದೆ. ನಮ್ಮ ವಿಶೇಷ ಪ್ರತಿನಿಧಿಗಳು ಗಡಿ ನಿರ್ವಹಣೆಯ ಕುರಿತು ಒಮ್ಮತದ ತಿಳುವಳಿಕೆ ಹೊಂದಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಯು ಪುನರಾರಂಭಗೊಂಡಿದೆ ಮತ್ತು ಎರಡೂ ದೇಶಗಳ ನಡುವೆ ನೇರ ವಿಮಾನ ಸೇವೆಯನ್ನೂ ಸಹ ಪ್ರಾರಂಭಿಸಲಾಗುತ್ತಿದೆ. ನಮ್ಮ ನಡುವಿನ ಸಹಕಾರವು ನಮ್ಮ ಎರಡೂ ರಾಷ್ಟ್ರಗಳ 2.8 ಶತಕೋಟಿ ಜನರ ಹಿತಾಸಕ್ತಿಗಳಿಗೆ ಸಂಬಂಧಿಸಿದೆ. ಇದು ಎಲ್ಲಾ ಮಾನವೀಯ ಕಲ್ಯಾಣಕ್ಕೂ ದಾರಿ ಮಾಡಿಕೊಡಲಿದೆ. ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮ ಭಾವನಾತ್ಮಕತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ.ಪ್ರಧಾನಿ ಮೋದಿ ಅವರು ಚೀನಾದ ಟಿಯಾಂಜಿನ್‌ಗೆ ಆಗಮಿಸಿದರು
August 30th, 04:00 pm
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಚೀನಾಕ್ಕೆ ಆಗಮಿಸಿದರು. ಭೇಟಿಯ ಸಮಯದಲ್ಲಿ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಟಿಯಾಂಜಿನ್‌ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಅವರು ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಅಧ್ಯಕ್ಷ ಪುಟಿನ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ.ಪ್ರಧಾನಮಂತ್ರಿ ಅವರ ಜಪಾನ್ ಮತ್ತು ಚೀನಾ ದೇಶಗಳ ಭೇಟಿಯ ಮುನ್ನಾ ದಿನದಂದು ನೀಡಿರುವ ನಿರ್ಗಮನ ಹೇಳಿಕೆ
August 28th, 08:40 pm
ನನ್ನ ಭೇಟಿಯ ಸಮಯದಲ್ಲಿ, ಕಳೆದ ಹನ್ನೊಂದು ವರ್ಷಗಳಲ್ಲಿ ಆಗಿರುವ ಸ್ಥಿರತೆ ಕುರಿತು ಮತ್ತು ಗಮನಾರ್ಹ ಪ್ರಗತಿಯನ್ನು ಸಾಧಿಸಿರುವ ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯಲ್ಲಿ ಮುಂದಿನ ಹಂತವನ್ನು ರೂಪಿಸುವತ್ತ ನಾವು ಗಮನಹರಿಸುತ್ತೇವೆ. ನಮ್ಮ ಸಹಯೋಗಕ್ಕೆ ಹೊಸ ರೆಕ್ಕೆ ಹಾಗೂ ಆಯಾಮಗಳನ್ನು ನೀಡಲು, ನಮ್ಮ ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸಲು ಮತ್ತು ಕೃತಕ ಬುದ್ಧಿಮತ್ತೆ (ಎಐ)ಮತ್ತು ಸೆಮಿಕಂಡಕ್ಟರ್ ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಮುನ್ನಡೆಸಲು ನಾವು ಪ್ರಯತ್ನಿಸುತ್ತೇವೆ. ಈ ಭೇಟಿಯು ನಮ್ಮ ನಾಗರಿಕತೆಯ ಪರಸ್ಪರ ಬಂಧಗಳು ಮತ್ತು ನಮ್ಮ ಜನರನ್ನು ಸಂಪರ್ಕಿಸುವ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ.ಜಪಾನ್ ಮತ್ತು ಚೀನಾಕ್ಕೆ ಪ್ರಧಾನ ಮಂತ್ರಿಗಳ ಭೇಟಿ
August 22nd, 06:15 pm
ಜಪಾನ್ ಪ್ರಧಾನಿ ಶಿಗೇರು ಇಶಿಬಾ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಆಗಸ್ಟ್ 29–30, 2025 ರವರೆಗೆ ಜಪಾನ್‌ಗೆ ಮತ್ತು ಆಗಸ್ಟ್ 31–1, 2025 ರವರೆಗೆ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಜಪಾನ್‌ನಲ್ಲಿ, ಪ್ರಧಾನಿಯವರು 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಜಪಾನಿನ ಪ್ರಧಾನಿ ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಚೀನಾದಲ್ಲಿ, ಪ್ರಧಾನಿಯವರು ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಚೀನಾ ವಿದೇಶಾಂಗ ಸಚಿವರಾದ ವಾಂಗ್ ಯಿ
August 19th, 07:34 pm
ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀನಾದ ಕಮ್ಯುನಿಸ್ಟ್ ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಹಾಗೂ ವಿದೇಶಾಂಗ ಸಚಿವರಾದ ಶ್ರೀ ವಾಂಗ್ ಯಿ ಅವರನ್ನು ಬರಮಾಡಿಕೊಂಡರು.