The fact sheet on India's growth is a success story of the Reform-Perform-Transform mantra: PM Modi in Rajkot
January 11th, 02:45 pm
PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.PM Narendra Modi inaugurates Vibrant Gujarat Regional Conference for Kutch and Saurashtra Region in Rajkot
January 11th, 02:30 pm
PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.The history of Somnath is not one of destruction or defeat, it is a history of victory and renewal: PM Modi during Somnath Swabhiman Parv
January 11th, 12:00 pm
PM Modi addressed the Somnath Swabhiman Parv in Somnath, recalling the sacrifices of those who dedicated their lives to the protection and reconstruction of the temple. Emphasising that the festival is not merely a remembrance of the destruction that took place a thousand years ago, the PM said it is a celebration of a thousand-year journey of resilience, as well as of India’s existence and pride. He underscored the resolve to move forward with the vision of “Dev se Desh.”PM Modi addresses the Somnath Swabhiman Parv in Somnath, Gujarat
January 11th, 11:41 am
PM Modi addressed the Somnath Swabhiman Parv in Somnath, recalling the sacrifices of those who dedicated their lives to the protection and reconstruction of the temple. Emphasising that the festival is not merely a remembrance of the destruction that took place a thousand years ago, the PM said it is a celebration of a thousand-year journey of resilience, as well as of India’s existence and pride. He underscored the resolve to move forward with the vision of “Dev se Desh.”Prime Minister Narendra Modi to visit Rajkot
January 09th, 12:07 pm
PM Modi will visit Rajkot on 11 January 2026 to attend the Vibrant Gujarat Regional Conference for Kutch and Saurashtra. He will inaugurate the trade show at the conference. He will announce the development of 14 greenfield smart Gujarat Industrial Development Corporation Limited (GIDC) estates and inaugurate the medical device park of GIDC.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ
December 31st, 03:11 pm
1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಐದನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 28th, 09:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ 5ನೇ ರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಮೂರು ದಿನಗಳ ಸಮ್ಮೇಳನವು 2025 ರ ಡಿಸೆಂಬರ್ 26 ರಿಂದ 28 ರವರೆಗೆ ದೆಹಲಿಯ ಪೂಸಾದಲ್ಲಿ ನಡೆಯಿತು.ದೆಹಲಿಯಲ್ಲಿ ಡಿಸೆಂಬರ್ 27 ಮತ್ತು 28 ರಂದು ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 26th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 27 ಮತ್ತು 28 ರಂದು ದೆಹಲಿಯಲ್ಲಿ ನಡೆಯಲಿರುವ ಐದನೇ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ವ್ಯವಸ್ಥಿತ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ-ರಾಜ್ಯ ಪಾಲುದಾರಿಕೆಯನ್ನು ಬಲವರ್ಧನೆಗೊಳಿಸುವಲ್ಲಿ ಈ ಸಮ್ಮೇಳನವು ಮತ್ತೊಂದು ಪ್ರಮುಖ ಮೈಲಿಗಲ್ಲೆಂದು ಗುರುತಿಸಿಕೊಳ್ಳುತ್ತದೆ.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಅಸ್ಸಾಂನ ನಮ್ರಪ್ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 21st, 04:25 pm
ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.ಅಸ್ಸಾಂನ ನಮ್ರೂಪ್ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 21st, 12:00 pm
ಅಸ್ಸಾಂನ ದಿಬ್ರುಗಢದ ನಮ್ರೂಪ್ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 20th, 03:20 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು
December 20th, 03:10 pm
ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 16th, 12:24 pm
ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ
December 16th, 12:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.