ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.CoalSETU ವಿಂಡೋಗೆ ಸಚಿವ ಸಂಪುಟದ ಅನುಮೋದನೆ: ವಿವಿಧ ಕೈಗಾರಿಕಾ ಬಳಕೆ ಮತ್ತು ರಫ್ತುಗಳಿಗಾಗಿ ಕಲ್ಲಿದ್ದಲು ಲಿಂಕೇಜ್ ಹರಾಜು; ನ್ಯಾಯಯುತ ಪ್ರವೇಶ ಹಾಗೂ ಸಂಪನ್ಮೂಲಗಳ ಸದ್ಬಳಕೆಯ ಖಾತರಿ
December 12th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕೇಂದ್ರ ಸಚಿವ ಸಂಪುಟ ಸಮಿತಿಯು CoalSETU ನೀತಿಗೆ ಇಂದು ಹಸಿರು ನಿಶಾನೆ ತೋರಿದೆ. ಕಲ್ಲಿದ್ದಲಿನ ತಡೆರಹಿತ, ದಕ್ಷ ಹಾಗೂ ಪಾರದರ್ಶಕ ಬಳಕೆಗಾಗಿ ಈ ನೀತಿಯನ್ನು ರೂಪಿಸಲಾಗಿದೆ. ಇದರ ಅನ್ವಯ, ಲಿಂಕೇಜ್ ನೀತಿಯ ಅಡಿಯಲ್ಲಿ CoalSETU ವಿಂಡೋ ಎಂಬ ಹೊಸ ವ್ಯವಸ್ಥೆಯನ್ನು ತೆರೆಯಲಾಗುತ್ತಿದ್ದು, ಇದು ಯಾವುದೇ ಕೈಗಾರಿಕಾ ಬಳಕೆ ಹಾಗೂ ರಫ್ತಿಗಾಗಿ ಕಲ್ಲಿದ್ದಲನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಸರ್ಕಾರ ಕೈಗೊಳ್ಳುತ್ತಿರುವ ಕಲ್ಲಿದ್ದಲು ವಲಯದ ಸರಣಿ ಸುಧಾರಣೆಗಳಲ್ಲಿ ಇದೂ ಒಂದಾಗಿದೆ.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ
December 11th, 08:43 pm
ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
December 05th, 05:53 pm
ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:46 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.ಜೋಹಾನ್ಸ್‌ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
November 23rd, 02:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಹಾನ್ಸ್‌ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರನ್ನು ಇಂದು ಭೇಟಿ ಮಾಡಿದರು. ಶೃಂಗಸಭೆಯ ಆತ್ಮೀಯ ಆತಿಥ್ಯ ಮತ್ತು ಯಶಸ್ವಿ ನಡವಳಿಕೆಗಳಿಗಾಗಿ ಅಧ್ಯಕ್ಷ ಶ್ರೀ ರಾಮಫೋಸಾ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಮತ್ತು ನೂತನ ಹಂತ ನಿರ್ಮಿಸಲು ದಕ್ಷಿಣ ಆಫ್ರಿಕಾದ ಜಿ20 ಮಾಡಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ
November 19th, 10:42 pm
2025 ರ ನವೆಂಬರ್ 21 ರಿಂದ 23 ರವರೆಗೆ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಭೇಟಿ ನೀಡಲಿದ್ದು, 20 ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಅಧಿವೇಶನಗಳಲ್ಲಿ, ಪ್ರಧಾನಿಯವರು ಜಿ20 ಕಾರ್ಯಸೂಚಿಯಲ್ಲಿನ ಪ್ರಮುಖ ವಿಷಯಗಳ ಕುರಿತು ಭಾರತದ ದೃಷ್ಟಿಕೋನಗಳನ್ನು ಪ್ರಸ್ತುತಪಡಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ, ಅವರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಮತ್ತು ದಕ್ಷಿಣ ಆಫ್ರಿಕಾ ಆಯೋಜಿಸುತ್ತಿರುವ ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ (ಐಬಿಎಸ್‌ಎ) ನಾಯಕರ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ.Cabinet approves Export Promotion Mission to strengthen India’s export ecosystem with an outlay of Rs.25,060 crore
November 12th, 08:15 pm
The Union Cabinet chaired by PM Modi has approved the Export Promotion Mission (EPM) with a total outlay of Rs.25,060 crore for FY 2025–26 to FY 2030–31 to strengthen India’s export competitiveness. EPM represents a forward-looking effort to make India’s export framework more inclusive, technology-enabled and globally competitive, aligning with the vision of Viksit Bharat @2047.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಈಜಿಪ್ಟ್ ವಿದೇಶಾಂಗ ಸಚಿವರು
October 17th, 04:22 pm
ಈಜಿಪ್ಟ್ ನ ವಿದೇಶಾಂಗ ಸಚಿವ ಡಾ. ಬದರ್ ಅಬ್ದೆಲಟ್ಟಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಶ್ರುತಿ
October 09th, 01:55 pm
ಭಾರತ-ಯುಕೆ ಸಂಪರ್ಕ ಮತ್ತು ನಾವಿನ್ಯತಾ ಕೇಂದ್ರದ ಸ್ಥಾಪನೆ.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ಹಡಗು ನಿರ್ಮಾಣ, ಸಾಗರ ಹಣಕಾಸು ಮತ್ತು ದೇಶೀಯ ಸಾಮರ್ಥ್ಯ ಬಲವರ್ಧನೆಗೆ ಸಮಗ್ರ 4-ಸ್ತಂಭ ವಿಧಾನ
September 24th, 03:08 pm
ಸಾಗರ ವಲಯದ ಕಾರ್ಯತಂತ್ರ ಮತ್ತು ಆರ್ಥಿಕ ಪ್ರಾಮುಖ್ಯತೆಯನ್ನು ಗುರುತಿಸಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟವು ಭಾರತದ ಹಡಗು ನಿರ್ಮಾಣ ಮತ್ತು ಸಾಗರ ಪೂರಕ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು 69,725 ಕೋಟಿ ರೂಪಾಯಿಗಳ ಸಮಗ್ರ ಪ್ಯಾಕೇಜ್‌ಗೆ ಅನುಮೋದನೆ ನೀಡಿದೆ. ದೇಶೀಯ ಸಾಮರ್ಥ್ಯ ಬಲವರ್ಧನೆಗೊಳಿಸುವುದು, ದೀರ್ಘಕಾಲೀನ ಹಣಕಾಸು ಸುಧಾರಣೆ, ಗ್ರೀನ್‌ಫೀಲ್ಡ್ ಮತ್ತು ಬ್ರೌನ್‌ಫೀಲ್ಡ್ ಶಿಪ್‌ಯಾರ್ಡ್ ಅಭಿವೃದ್ಧಿಗೆ ಉತ್ತೇಜನ, ತಾಂತ್ರಿಕ ಸಾಮರ್ಥ್ಯಗಳು ಮತ್ತು ಕೌಶಲ್ಯ ವೃದ್ಧಿ ಮತ್ತು ಉತ್ಕೃಷ್ಟ ಕಡಲ ಮೂಲಸೌಕರ್ಯವನ್ನು ಸೃಷ್ಟಿಸಲು ಕಾನೂನು, ತೆರಿಗೆ ಮತ್ತು ನೀತಿ ಸುಧಾರಣೆಗಳನ್ನು ಜಾರಿಗೆ ತರಲು ರೂಪಿಸಲಾದ ನಾಲ್ಕು ಸ್ತಂಭಗಳ ವಿಧಾನವನ್ನು ಈ ಪ್ಯಾಕೇಜ್ ಒಳಗೊಂಡಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೀಸ್ ಪ್ರಧಾನಮಂತ್ರಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು
September 19th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೆಲೆನಿಕ್ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
September 10th, 07:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕಾ ನಡುವಿನ ಸಂಬಂಧಗಳ ಬಲವನ್ನು ಪುನರುಚ್ಚರಿಸಿದ್ದಾರೆ ಹಾಗೂ ಎರಡು ರಾಷ್ಟ್ರಗಳ ನಡುವೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಎರಡೂ ರಾಷ್ಟ್ರಗಳು ಜನರ ಉಜ್ವಲ, ಸಮೃದ್ಧ ಭವಿಷ್ಯದ ಭದ್ರತೆಗೆ ಒಟ್ಟಾಗಿ ಕೆಲಸ ಮಾಡಲಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಹೇಳಿದ್ದಾರೆ.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಜರ್ಮನಿಯ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಭೇಟಿಯಾದರು
September 03rd, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿಯಾದರು. ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಸಹಭಾಗಿತ್ವವನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.