ಫಲಶ್ರುತಿಯ ಪಟ್ಟಿ: ಇಸ್ರೇಲ್‌ಗೆ ಪ್ರಧಾನಮಂತ್ರಿ ಭೇಟಿ
February 26th, 07:41 pm
ಭೂಭೌತಿಕ ಪರಿಶೋಧನೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದToday, Sansad Khel Mahotsav has truly become a people’s movement: PM Modi
December 25th, 05:30 pm
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.Our country is full of talent in every village and town: PM Modi
December 25th, 11:10 am
PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.PM Modi addressed the Sansad Khel Mahotsav via video conferencing
December 25th, 11:09 am
PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
October 24th, 11:20 am
ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
October 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.ಐ.ಎನ್.ಎಸ್. ವಿಕ್ರಾಂತ್ ನಲ್ಲಿ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
October 21st, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐ.ಎನ್.ಎಸ್. ವಿಕ್ರಾಂತ್ ನಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಆಚರಿಸಿದ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡರು. ಈ ದಿನವು ಒಂದು ಗಮನಾರ್ಹ ದಿನ, ಒಂದು ಗಮನಾರ್ಹ ಕ್ಷಣ ಮತ್ತು ಒಂದು ಗಮನಾರ್ಹ ದೃಶ್ಯವಾಗಿತ್ತು ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಂದು ಕಡೆ ವಿಶಾಲ ಸಾಗರ ಮತ್ತು ಇನ್ನೊಂದು ಕಡೆ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಗಾಧ ಶಕ್ತಿಯನ್ನು ಪ್ರದರ್ಶಿಸುತ್ತದೆ. ಒಂದು ಕಡೆ ಅನಂತ ದಿಗಂತ ಮತ್ತು ಮಿತಿಯಿಲ್ಲದ ಆಕಾಶವನ್ನು ಪ್ರಸ್ತುತಪಡಿಸಿದರೆ, ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐ.ಎನ್.ಎಸ್. ವಿಕ್ರಾಂತ್ ನ ಬೃಹತ್ ಶಕ್ತಿಯನ್ನು ಪ್ರದರ್ಶಿಸುತ್ತದೆ. ಸಮುದ್ರದ ಮೇಲಿನ ಸೂರ್ಯನ ಬೆಳಕಿನ ಹೊಳಪು ದೀಪಾವಳಿಯ ಸಮಯದಲ್ಲಿ ವೀರ ಸೈನಿಕರು ಬೆಳಗಿದ ದೀಪಗಳನ್ನು ಹೋಲುತ್ತದೆ, ಇದು ದೀಪಗಳ ದೈವಿಕ ಹಾರವನ್ನು ಸ್ಪಷ್ಟವಾಗಿ ರೂಪಿಸುತ್ತದೆ ಎಂದು ಹೇಳಿದರು. ಭಾರತೀಯ ನೌಕಾಪಡೆಯ ಧೈರ್ಯಶಾಲಿ ಸಿಬ್ಬಂದಿಯ ಜೊತೆಗೆ ಈ ದೀಪಾವಳಿ ಹಬ್ಬವನ್ನು ಆಚರಿಸಲು ದೊರಕಿದ ಅವಕಾಶವನ್ನು ಬಹುದೊಡ್ಡ ಸೌಭಾಗ್ಯವೆಂದು ಅವರು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ನವದೆಹಲಿಯಲ್ಲಿ ನಡೆದ ಕೃಷಿ ಕಾರ್ಯಕ್ರಮದಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಅವರು ನಡೆಸಿದ ಸಂವಾದದ ಕನ್ನಡ ಅವತರಣಿಕೆ
October 12th, 06:45 pm
ರಾಮ್-ರಾಮ್! ನಾನು ಹರಿಯಾಣದ ಹಿಸಾರ್ ಜಿಲ್ಲೆಯವನು. ನಾನು ಕಾಬೂಲಿ ಚನಾ (ಕಡಲೆ) ಕೃಷಿಯೊಂದಿಗೆ ಕೃಷಿ ಮಾಡಲು ಪ್ರಾರಂಭಿಸಿದೆ. ಆರಂಭದಲ್ಲಿ, ಸ್ವಲ್ಪ ಮಾತ್ರ ಇತ್ತು..ಕೃಷಿ ಕ್ಷೇತ್ರದಲ್ಲಿ ₹35,440 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು
October 12th, 06:25 pm
ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮವು ರೈತರ ಕಲ್ಯಾಣ, ಕೃಷಿಯಲ್ಲಿ ಸ್ವಾವಲಂಬನೆ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರಿಗಿರುವ ನಿರಂತರ ಬದ್ಧತೆಯನ್ನು ಸಾರುತ್ತದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ನಂತರ ಕೃಷಿ ವಲಯಕ್ಕಾಗಿ ₹35,440 ಕೋಟಿ ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. ಅವರು ₹24,000 ಕೋಟಿ ವೆಚ್ಚದ 'ಪಿ.ಎಂ. ಧನ ಧಾನ್ಯ ಕೃಷಿ ಯೋಜನೆ' ಹಾಗೂ ₹11,440 ಕೋಟಿ ವೆಚ್ಚದ 'ಬೇಳೆಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್' ಅನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣಾ ವಲಯಗಳಿಗೆ ಸಂಬಂಧಿಸಿದ ₹5,450 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ, ಸುಮಾರು ₹815 ಕೋಟಿ ಮೌಲ್ಯದ ಹೆಚ್ಚುವರಿ ಯೋಜನೆಗಳಿಗೂ ಶಂಕುಸ್ಥಾಪನೆ ನೆರವೇರಿಸಿದರು.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.Cabinet approves Phase III of Biomedical Research Career Programme (BRCP)
October 01st, 03:28 pm
The Union Cabinet, chaired by PM Modi, has approved Phase III of the Biomedical Research Career Programme (BRCP) (2025-26 to 2037-38) with a total outlay of ₹1,500 crore. Led by DBT in partnership with Wellcome Trust, it will provide fellowships, collaborative grants, and research management to nurture talent, enhance biomedical research, and drive innovation across India.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ
September 26th, 03:00 pm
ಈಗ, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ(ಮುಖ್ಯಮಂತ್ರಿ ಮಹಿಳಾ ಉದ್ಯೋಗ ಯೋಜನೆ) ಆಯ್ದ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಮೊದಲು, ಪಶ್ಚಿಮ ಚಂಪಾರಣ್ ಜಿಲ್ಲೆಯ ರಂಜಿತಾ ಕಾಜಿ ದೀದಿ ಅವರಿಗೆ ತಮ್ಮ ಅನುಭವ ಹಂಚಿಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
September 26th, 02:49 pm
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬುಡಕಟ್ಟು ಮಹಿಳಾ ಫಲಾನುಭವಿ ಶ್ರೀಮತಿ ರಂಜೀತಾ ಕಾಜಿ ಅವರು ತಮ್ಮ ಪ್ರದೇಶದಲ್ಲಿ ತಂದ ಪರಿವರ್ತನಾತ್ಮಕ ಬದಲಾವಣೆಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಜೀವಿಕಾ ಸ್ವಸಹಾಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದ ಅವರು, ಒಂದು ಕಾಲದಲ್ಲಿ ಮೂಲಭೂತ ಮೂಲಸೌಕರ್ಯಗಳಿಂದ ವಂಚಿತವಾಗಿದ್ದ ತಮ್ಮ ಅರಣ್ಯ ಪ್ರದೇಶವು ಈಗ ರಸ್ತೆಗಳು, ವಿದ್ಯುತ್, ನೀರು, ನೈರ್ಮಲ್ಯ ಮತ್ತು ಶಿಕ್ಷಣದ ಪ್ರವೇಶವನ್ನು ಹೊಂದಿದೆ ಎಂದು ಎತ್ತಿ ತೋರಿಸಿದರು. ಸರ್ಕಾರಿ ಉದ್ಯೋಗಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಿರುವ ಮೀಸಲಾತಿ ನಿಬಂಧನೆಗಳು ಸೇರಿದಂತೆ ಮಹಿಳೆಯರ ಮೇಲೆ ಗಮನ ಕೇಂದ್ರೀಕರಿಸಿದ ಉಪಕ್ರಮಗಳಿಗಾಗಿ ಅವರು ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಹುಡುಗಿಯರು ಶಾಲಾ ಸಮವಸ್ತ್ರದಲ್ಲಿ ಸೈಕಲ್ ಸವಾರಿ ಮಾಡುವಾಗ ಅನುಭವಿಸುವ ಹೆಮ್ಮೆಯತ್ತ ಅವರು ಗಮನ ಸೆಳೆದರು, ಸೈಕಲ್ ಮತ್ತು ಸಮವಸ್ತ್ರ ಯೋಜನೆಗಳನ್ನು ಶ್ಲಾಘಿಸಿದರು.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
September 26th, 11:30 am
ಇಂದು ನವರಾತ್ರಿಯ ಈ ಪವಿತ್ರ ದಿನಗಳಲ್ಲಿ, ಬಿಹಾರದ ಮಹಿಳಾ ಶಕ್ತಿಯೊಂದಿಗೆ ಸಂತೋಷದಿಂದ ಸೇರಲು ನನಗೆ ಅವಕಾಶ ಸಿಕ್ಕಿದೆ. ನಾನು ಇಲ್ಲಿ ಪರದೆಯನ್ನು ನೋಡುತ್ತಿದ್ದೆ, ಲಕ್ಷಾಂತರ ಮಹಿಳೆಯರು ಮತ್ತು ಸಹೋದರಿಯರು ಕಾಣುತ್ತಿದ್ದಾರೆ. ಈ ಪವಿತ್ರ ನವರಾತ್ರಿ ಹಬ್ಬದ ಸಮಯದಲ್ಲಿ ನಿಮ್ಮೆಲ್ಲರ ಆಶೀರ್ವಾದಗಳು ನಮಗೆಲ್ಲರಿಗೂ ದೊಡ್ಡ ಶಕ್ತಿಯಾಗಿದೆ. ನಾನು ಇಂದು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಇಂದಿನಿಂದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ನನಗೆ ತಿಳಿದುಬಂದಂತೆ, ಇಲ್ಲಿಯವರೆಗೆ 75 ಲಕ್ಷ ಸಹೋದರಿಯರು ಈ ಯೋಜನೆಗೆ ಸೇರಿದ್ದಾರೆ. ಈಗ ಈ 75 ಲಕ್ಷ ಸಹೋದರಿಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ಹಣವನ್ನು ಏಕಕಾಲದಲ್ಲಿ ಕಳುಹಿಸಲಾಗಿದೆ.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
September 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿಯ ಶುಭಾಶಯ ಕೋರಿದರು. ಬಿಹಾರದ ಮಹಿಳೆಯರೊಂದಿಗೆ ಈ ಆಚರಣೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. 75 ಲಕ್ಷ ಮಹಿಳೆಯರು ಈಗಾಗಲೇ ಈ ಉಪಕ್ರಮಕ್ಕೆ ಸೇರಿದ್ದಾರೆ . ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.