ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ
December 05th, 05:53 pm
ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ23ನೇ ಭಾರತ - ರಷ್ಯಾ ವಾರ್ಷಿಕ ಶೃಂಗಸಭೆಯ ನಂತರದ ಜಂಟಿ ಹೇಳಿಕೆ
December 05th, 05:43 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 04-05, 2025 ರಂದು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು.ನಾಲ್ಕು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿ ಅಕ್ಟೋಬರ್ 8-9ರಂದು ಮಹಾರಾಷ್ಟ್ರಕ್ಕೆ ಭೇಟಿ
October 07th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಕ್ಟೋಬರ್ 8-9 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನವಿ ಮುಂಬೈ ತಲುಪಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3:30 ರ ಸುಮಾರಿಗೆ ಪ್ರಧಾನ ಮಂತ್ರಿ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಅಸ್ಸಾಂನ ದರ್ರಾಂಗ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು
August 29th, 07:11 pm
ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 22nd, 05:15 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ. ಆನಂದ್ ಬೋಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶಾಂತನು ಠಾಕೂರ್ ಜಿ, ರವನೀತ್ ಸಿಂಗ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಶುವೇಂದು ಅಧಿಕಾರಿ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಶೋಮಿಕ್ ಭಟ್ಟಾಚಾರ್ಯ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ ಮತ್ತು ಉದ್ಘಾಟನೆ
August 22nd, 05:00 pm
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹5,200 ಕೋಟಿಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಮತ್ತೊಮ್ಮೆ ವೇಗ ನೀಡುವ ಅವಕಾಶ ದೊರೆತಿದೆ ಎಂದು ಹೇಳಿದರು. ನೋವಾಪಾರಾದಿಂದ ಜೈ ಹಿಂದ್ ವಿಮಾನ ನಿಲ್ದಾಣದವರೆಗಿನ ಕೋಲ್ಕತ್ತಾ ಮೆಟ್ರೋ ಪ್ರಯಾಣದ ತಮ್ಮ ಅನುಭವವನ್ನು ಹಂಚಿಕೊಂಡ ಶ್ರೀ ಮೋದಿ ಅವರು, ಈ ಭೇಟಿಯ ಸಮಯದಲ್ಲಿ ಅನೇಕ ಜನರೊಂದಿಗೆ ಸಂವಾದ ನಡೆಸಿದ್ದಾಗಿ ಮತ್ತು ಕೋಲ್ಕತ್ತಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಆಧುನೀಕರಣದ ಬಗ್ಗೆ ಪ್ರತಿಯೊಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಪ್ರಧಾನಮಂತ್ರಿ ಅವರು ಆರು-ಪಥಗಳ ಕಮರಿ ಕೋನಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಈ ಬಹು-ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗಾಗಿ ಅವರು ಕೋಲ್ಕತ್ತಾದ ಜನರಿಗೆ ಮತ್ತು ಪಶ್ಚಿಮ ಬಂಗಾಳದ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್ಪ್ರೆಸ್ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 02:35 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ₹5,400 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
July 18th, 02:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ 5,400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 'ಉಕ್ಕಿನ ನಗರಿ' ಎಂದೇ ಪ್ರಸಿದ್ಧವಾಗಿರುವ ದುರ್ಗಾಪುರವು ಭಾರತದ ಕಾರ್ಮಿಕ ಶಕ್ತಿಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು. ಈ ನಗರವು ಭಾರತದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದರು. ಇಂದು ಉದ್ಘಾಟಿಸಲಾದ ಯೋಜನೆಗಳು ಈ ಪ್ರದೇಶದ ಸಂಪರ್ಕವನ್ನು ಹೆಚ್ಚಿಸಲಿವೆ, ಅನಿಲ ಆಧಾರಿತ ಸಾರಿಗೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿವೆ. ಅಲ್ಲದೆ, ದುರ್ಗಾಪುರದ 'ಉಕ್ಕಿನ ನಗರಿ' ಎಂಬ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಹೇಳಿದರು. ಈ ಯೋಜನೆಗಳು “ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್” ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತವೆ. ಇದರ ಜೊತೆಗೆ, ಈ ಯೋಜನೆಗಳು ಈ ಪ್ರದೇಶದ ಯುವಕರಿಗೆ ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಈ ಮಹತ್ವದ ಅಭಿವೃದ್ಧಿ ಯೋಜನೆಗಳಿಗಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.ರೋಜ್ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ವಿಶ್ವ ಪರಿಸರ ದಿನದಂದು, ಏಕ್ ಪೆಡ್ ಮಾ ಕೆ ನಾಮ್ ಉಪಕ್ರಮದ ಅಡಿಯಲ್ಲಿ ವಿಶೇಷ ಮರ ನೆಡುವ ಅಭಿಯಾನದ ನೇತೃತ್ವ ವಹಿಸಲಿರುವ ಪ್ರಧಾನಮಂತ್ರಿ
June 04th, 01:20 pm
ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 5 ರಂದು ಬೆಳಗ್ಗೆ 10:15ಕ್ಕೆ ನವದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನವನದಲ್ಲಿ ವಿಶೇಷ ಮರ ನೆಡುವ ಉಪಕ್ರಮದ ನೇತೃತ್ವ ವಹಿಸಲಿದ್ದು, ಪರಿಸರ ನಿರ್ವಹಣೆ ಮತ್ತು ಹಸಿರು ಚಲನಶೀಲತೆಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ.