Prime Minister pays tributes to former PM Chaudhary Charan Singh ji on his birth anniversary
December 23rd, 09:39 am
On the birth anniversary of Former PM Bharat Ratna Chaudhary Charan Singh, PM Modi lauded his dedication to the welfare of the deprived sections of society and farmers. The PM also remarked that the country can never forget his contributions to nation-building.ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 03rd, 09:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ, ಎಂದು ಶ್ರೀ ಮೋದಿ ಹೇಳಿದ್ದಾರೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
November 19th, 01:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.ರಾಣಿ ಲಕ್ಷ್ಮಿಬಾಯಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿಬಾಯಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ
November 15th, 08:22 am
ಜಾರ್ಖಂಡ್ ರಾಜ್ಯದ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಎಲ್ಲಾ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಾರ್ಖಂಡ್ ಶ್ರೀಮಂತ ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಅದ್ಭುತ ಭೂಮಿಯಾಗಿದೆ ಎಂದು ಅವರು ಹೇಳಿದರು. ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ನೆನಪಿಸಿಕೊಳ್ಳುತ್ತಾ, ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಘನತೆಯ ಸ್ಪೂರ್ತಿದಾಯಕ ಕಥೆಗಳಿಂದ ತುಂಬಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.ಬಿಹಾರ ಕೋಕಿಲಾ ಶಾರದಾ ಸಿನ್ಹಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 05th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಕೋಕಿಲಾ ಶಾರದಾ ಸಿನ್ಹಾ ಅವರ ಮೊದಲ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಪಾಟ್ನಾದಲ್ಲಿ ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 02nd, 10:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾಟ್ನಾದ ದಿನಕರ್ ಗೋಲಂಬರ್ ನಲ್ಲಿ ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಭಾರತದಾದ್ಯಂತ ಜನರನ್ನು ಸಂಪರ್ಕಿಸುವ ಸಾಮೂಹಿಕ ಚಳುವಳಿಯ ಮೂಲಕ ನಿರ್ಮಿಸಲಾದ ಏಕತೆಯ ಪ್ರತಿಮೆಯು ಸರ್ದಾರ್ ಪಟೇಲ್ ಅವರಿಗೆ ನೀಡುವ ಗೌರವವಾಗಿದೆ: ಪ್ರಧಾನಮಂತ್ರಿ
October 31st, 12:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ‘ಏಕತೆಯ ಪ್ರತಿಮೆ’ಯು ಸರ್ದಾರ್ ವಲ್ಲಭಭಾಯಿ ಪಟೇಲ್ ಗೆ ನೀಡುವ ಗೌರವವಾಗಿದೆ ಮತ್ತು ಭಾರತದಾದ್ಯಂತದ ನಾಗರಿಕರು, ವಿಶೇಷವಾಗಿ, ಈ ಪ್ರದೇಶದ ಹಳ್ಳಿಗಳ ನಾಗರಿಕರು ಈ ಪ್ರತಿಮೆಯ ಪ್ರತಿಮೆಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಜನರ ಚಳವಳಿಯ ಗಮನಾರ್ಹ ಉದಾಹರಣೆಯಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.Prime Minister pays tributes to Sardar Vallabhbhai Patel at the Statue of Unity in Kevadia
October 31st, 12:41 pm
The Prime Minister, Shri Narendra Modi has paid tributes to Sardar Vallabhbhai Patel at the ‘Statue of Unity’ in Kevadia.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತದೆ: ಪ್ರಧಾನಮಂತ್ರಿ
October 31st, 08:05 am
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಅವರಿಂದ ಗೌರವ ಸಲ್ಲಿಕೆ
October 15th, 09:00 am
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
October 12th, 09:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮದಿನದಂದು ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ್ದಾರೆ.ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
October 04th, 09:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಅಚಲ ಸಮರ್ಪಣೆಯನ್ನು ಗುರುತಿಸಿದರುಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 25th, 08:30 am
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿಯಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಸೈದ್ಧಾಂತಿಕ ಮತ್ತು ಅಭಿವೃದ್ಧಿಯ ಪ್ರಯಾಣಕ್ಕೆ ಅವರ ಆಳವಾದ ಕೊಡುಗೆಗಳನ್ನು ಸ್ಮರಿಸಿ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.ಮಹಾರಾಜ ಅಗ್ರಸೇನ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
September 22nd, 02:11 pm
ಮಹಾರಾಜ ಅಗ್ರಸೇನ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಇಂಜಿನಿಯರ್ ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
September 15th, 08:44 am
ಇಂಜಿನಯರ್ ಗಳ ದಿನದ ನಿಮಿತ್ತ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಆಧುನಿಕ ಇಂಜಿನಿಯರಿಂಗ್ ಕ್ಷೇತ್ರದ ಅಡಿಪಾಯಕ್ಕೆ ಆರಂಭಿಕ ಕೊಡುಗೆ ನೀಡಿದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸಿದರು.ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಮಂತ್ರಿ ಶುಭಾಶಯ; ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ನಮನ ಸಲ್ಲಿಕೆ
August 29th, 08:39 am
ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಗೌರವಾರ್ಥ ಪ್ರತಿ ವರ್ಷ ಆಗಸ್ಟ್ 29ರಂದು ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಭಾರತದ ವಿಕಸನಗೊಳ್ಳುತ್ತಿರುವ ಕ್ರೀಡಾ ವಲಯವನ್ನು ಪ್ರತಿಬಿಂಬಿಸುತ್ತಾ, ಕ್ರೀಡೆ ಮತ್ತು ಸುಸ್ಥಿತಿಯ ಸಂಸ್ಕೃತಿಯನ್ನು ಪೋಷಿಸುವ, ಕ್ರೀಡಾಪಟುಗಳಿಗೆ ಸಾಂಸ್ಥಿಕ ಬೆಂಬಲವನ್ನು ಬಲಪಡಿಸುವ ಮತ್ತು ದೇಶಾದ್ಯಂತ ಆಧುನಿಕ ತರಬೇತಿ ಮತ್ತು ಸ್ಪರ್ಧಾ ಸ್ಥಳಗಳಿಗೆ ಪ್ರವೇಶಾವಕಾಶವನ್ನು ವಿಸ್ತರಿಸುವ ಸರ್ಕಾರದ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ.ಪ್ರಧಾನಮಂತ್ರಿ ಅವರು ಮಹಾತ್ಮ ಅಯ್ಯಂಕಾಳಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದರು
August 28th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮ ಅಯ್ಯಂಕಾಳಿ ಅವರ ಜಯಂತಿಯಂದು ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು, ಅವರನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಶಾಶ್ವತ ಸಂಕೇತ ಎಂದು ಸ್ಮರಿಸಿದರು. ಶ್ರೀ ಮೋದಿ ಅವರು, ಶಿಕ್ಷಣ ಮತ್ತು ಸಮಾನತೆಗೆ ಮಹಾತ್ಮ ಅಯ್ಯಂಕಾಳಿ ಅವರ ಅಚಲ ಬದ್ಧತೆ, ಜೊತೆಗೆ ಅವರ ಪರಂಪರೆಯು ಸಮಗ್ರ ಪ್ರಗತಿಯತ್ತ ರಾಷ್ಟ್ರದ ಸಾಮೂಹಿಕ ಪ್ರಯಾಣವನ್ನು ಈಗಲೂ ಪ್ರೇರೇಪಿಸುತ್ತಿದೆ ಎಂದು ಉಲ್ಲೇಖಿಸಿದರು.ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದಂದು ಪ್ರಧಾನಮಂತ್ರಿಗಳಿಂದ ಅವರಿಗೆ ಗೌರವ ನಮನ
August 19th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ತ್ರಿಪುರಾ ಅಭಿವೃದ್ಧಿಯಲ್ಲಿ ಮಹಾರಾಜ ಬೀರ್ ಬಿಕ್ರಮ್ ಕಿಶೋರ್ ಮಾಣಿಕ್ಯ ಬಹದ್ದೂರ್ ಅವರ ಮಾದರಿ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಸಾರ್ವಜನಿಕ ಸೇವೆಗಾಗಿ ಅವರ ಒಲವು, ಬಡವರ ಸಬಲೀಕರಣಕ್ಕಾಗಿ ಬದ್ಧತೆ ಮತ್ತು ಸಾಮಾಜದ ಔನ್ನತ್ಯಕ್ಕಾಗಿ ಅವರ ಸಮರ್ಪಣೆ ಸದಾ ಹೆಚ್ಚಿನ ಪ್ರೇರಣೆ ನೀಡಲಿದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ವಿಭಜನೆ ಭಯಾನಕತೆ ಸ್ಮರಣಾರ್ಥ ದಿನದ ಅಂಗವಾಗಿ ದೇಶ ವಿಭಜನೆಯಿಂದ ಬಾಧಿತರಾದವರ ಧೈರ್ಯ ಮತ್ತು ಚೇತರಿಕೆಯ ಸ್ಥೈರ್ಯಕ್ಕೆ ಪ್ರಧಾನಮಂತ್ರಿ ಗೌರವ ನಮನ
August 14th, 08:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ಇತಿಹಾಸದ ಅತ್ಯಂತ ದುರಂತ ಅಧ್ಯಾಯಗಳಲ್ಲಿ ಒಂದಾದ ವಿಭಜನೆ ಭಯಾನಕತೆಯ ನೆನಪಿನ ದಿನದ ಅಂಗವಾಗಿ ದೇಶ ವಿಭಜನೆಯ ಸಮಯದಲ್ಲಿ ಅಸಂಖ್ಯಾತ ಜನರು ಅನುಭವಿಸಿದ ಅಪಾರ ವಿಪ್ಲವ ಮತ್ತು ನೋವನ್ನು ಸ್ಮರಿಸಿದ್ದಾರೆ.