ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.Prime Minister’s Departure Statement ahead of his visit to the UAE, Netherlands, Sweden, Norway, and Italy
May 15th, 07:56 am
PM Modi is embarking on a five-nation visit to the UAE, the Netherlands, Sweden, Norway and Italy from 15-20 May 2026. During the visit, he will meet various Heads of State and hold discussions to further strengthen partnerships across key sectors. Highlights of the visit include his participation in the European Round Table for Industry in Sweden and the 3rd India-Nordic Summit in Oslo.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.ಯುಎಇ ಮೇಲಿನ ದಾಳಿಯನ್ನು ಖಂಡಿಸಿದ ಪ್ರಧಾನಮಂತ್ರಿ, ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಗೆ ಬೆಂಬಲವನ್ನು ಪುನರುಚ್ಚರಿಸಿದರು
May 05th, 01:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೂವರು ಭಾರತೀಯ ಪ್ರಜೆಗಳು ಗಾಯಗೊಂಡ ಯುಎಇ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 24th, 02:05 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು
March 24th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 17th, 10:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಆರಂಭದಲ್ಲಿಯೇ ಈದ್ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷರು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಯುಎಇ ಮೇಲೆ ನಡೆದ ದಾಳಿಗಳಿಂದ ಅಮಾಯಕ ಜನರ ಪ್ರಾಣ ಹಾನಿ ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಉಂಟಾದ ಹಾನಿಯನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನಮಂತ್ರಿ ಪುನರುಚ್ಚರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯುಎಇ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ
March 01st, 11:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಯುಕ್ತ ಆರಬ್ ಎಮಿರೇಟ್ಸ್ (ಯುನೈಟೆಡ್ ಅರಬ್ ಎಮಿರೇಟ್ಸ್) ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಮೊದಲ ಮತದಾನದಿಂದ ಸ್ಟಾರ್ಟ್ಅಪ್ ಇಂಡಿಯಾದವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಭಾರತದ ಯುವಕರನ್ನು ಆಚರಿಸುತ್ತಾರೆ.
January 25th, 11:30 am
ಈ ವರ್ಷದ ರಾಷ್ಟ್ರೀಯ ಮತದಾರರ ದಿನದಂದು ನಡೆದ ಮೊದಲ ಮನ್ ಕಿ ಬಾತ್‌ನಲ್ಲಿ, ಪ್ರಧಾನಿ ಮೋದಿ ಮತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಶ್ಲಾಘಿಸಿದರು. ಅವರು ಸ್ಟಾರ್ಟ್‌ಅಪ್‌ಗಳು, ನೀರಿನ ಸಂರಕ್ಷಣೆ, ಗುಣಮಟ್ಟ, ಸಂಸ್ಕೃತಿ ಮತ್ತು ಹಬ್ಬಗಳು ಮತ್ತು ಸ್ವಚ್ಛತೆಯಂತಹ ಪ್ರಮುಖ ವಿಷಯಗಳನ್ನು ಸಹ ಸ್ಪರ್ಶಿಸಿದರು. ಮುಂದಿನ ತಿಂಗಳು ನಡೆಯಲಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ಎತ್ತಿ ತೋರಿಸಿದರು, ಅಲ್ಲಿ ಪ್ರಪಂಚದಾದ್ಯಂತದ ತಜ್ಞರು ಭಾಗವಹಿಸುತ್ತಾರೆ.ಫಲಿತಾಂಶಗಳ ಪಟ್ಟಿ: ಯುಎಇ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ
January 19th, 08:23 pm
ಧೋಲೆರಾ ವಿಶೇಷ ಹೂಡಿಕೆ ವಲಯದ ಅಭಿವೃದ್ಧಿಗಾಗಿ ಭಾರತ ಗಣರಾಜ್ಯದ ಗುಜರಾತ್ ಸರ್ಕಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನ ಹೂಡಿಕೆ ಸಚಿವಾಲಯದ ನಡುವೆ ಹೂಡಿಕೆ ಸಹಕಾರಕ್ಕಾಗಿ ಉದ್ದೇಶಿತ ಪತ್ರಜಂಟಿ ಹೇಳಿಕೆ: ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ
January 19th, 08:10 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 19 ಜನವರಿ 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಯುಎಇ ಅಧ್ಯಕ್ಷರಾಗಿ ಇದು ಅವರ ಮೂರನೇ ಅಧಿಕೃತ ಭಾರತ ಭೇಟಿಯಾಗಿದೆ.ಯುಎಇ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
January 19th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.ಸಮಗ್ರ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತಷ್ಟು ಬಲಪಡಿಸುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯು.ಎ.ಇ ಅಧ್ಯಕ್ಷ ಗೌರವಾನ್ವಿತ ಮೊಹಮ್ಮದ್ ಬಿನ್ ಝಾಯೆದ್
July 31st, 12:36 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೂರವಾಣಿ ಮೂಲಕ ಸಂಯುಕ್ತ ಅರಬ್ ಎಮಿರೇಟ್ಸ್ (ಯು.ಎ.ಇ) ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ ನಡೆಸಿದರು.ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 06th, 08:04 pm
ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 06th, 08:00 pm
ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ದುಬೈನ ರಾಜಕುಮಾರ, ಯುಎಇ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವರನ್ನು ಪ್ರಧಾನಮಂತ್ರಿ ಬರಮಾಡಿಕೊಂಡರು
April 08th, 05:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಬೈನ ರಾಜಕುಮಾರ, ಯುಎಇ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವರಾದ ಘನತೆವೆತ್ತ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಬರಮಾಡಿಕೊಂಡರು.