Close cooperation between India and Germany is important for the entire humanity: PM Modi during Joint Press Meet
January 12th, 12:49 pm
PM Modi and German Chancellor Friedrich Merz attended the joint press meet in Ahmedabad. In his remarks, PM Modi said that India is fully committed to further strengthening its friendship and partnership with Germany. He highlighted that bilateral trade has reached its highest-ever level, crossing the 50 billion dollar mark. The PM also noted that both countries held detailed discussions on several global and regional issues.ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
October 09th, 11:25 am
ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..ಪ್ರಧಾನಮಂತ್ರಿ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಅಧ್ಯಕ್ಷರಾದ ಶ್ರೀ ಪುಟಿನ್
September 17th, 07:14 pm
ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಪ್ರಧಾನಮಂತ್ರಿ ಅವರ 75ನೇ ಹುಟ್ಟುಹಬ್ಬದಂದು ಅಧ್ಯಕ್ಷರಾದ ಶ್ರೀ ಪುಟಿನ್ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ರಷ್ಯಾ ಒಕ್ಕೂಟದ ಅಧ್ಯಕ್ಷರ ಶುಭಾಶಯಗಳು ಮತ್ತು ನಿರಂತರ ಸ್ನೇಹಕ್ಕಾಗಿ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ
September 16th, 07:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಫ್ರಾನ್ಸ್ ಅಧ್ಯಕ್ಷರಾದ ಮ್ಯಾಕ್ರನ್ ಅವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ
September 06th, 06:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ರಷ್ಯಾದ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆ
September 01st, 01:24 pm
ನಿಮ್ಮನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ ಮತ್ತು ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ನೆನಪಿನಲ್ಲಿಡುವ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಇದು ವಿವಿಧ ವಿಷಯಗಳ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲು ನಮಗೆ ಅವಕಾಶವನ್ನು ಒದಗಿಸುತ್ತದೆ.ರಷ್ಯಾ-ಯುಕ್ರೇನ್ ಸಂಘರ್ಷವನ್ನು ಕೊನೆಗೊಳಿಸುವ ಕುರಿತು ಪ್ರಧಾನಿ ಮೋದಿ ಅವರ ದೊಡ್ಡ ಹೇಳಿಕೆ
September 01st, 12:48 pm
ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸಿದರು, ಅಲ್ಲಿ ಯುಕ್ರೇನ್ ಸಂಘರ್ಷವು ಚರ್ಚೆಯ ಕೇಂದ್ರಬಿಂದುವಾಗಿತ್ತು. ಶಾಂತಿಗಾಗಿ ಇತ್ತೀಚಿನ ಪ್ರಯತ್ನಗಳನ್ನು ಪ್ರಧಾನಿ ಮೋದಿ ಸ್ವಾಗತಿಸಿದರು ಮತ್ತು ಎಲ್ಲಾ ಕಡೆಯವರು ರಚನಾತ್ಮಕವಾಗಿ ಮುಂದುವರಿಯುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸುವ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು ಮತ್ತು ಶಾಶ್ವತ ಶಾಂತಿಗೆ ಮಾರ್ಗವನ್ನು ಕಂಡುಕೊಳ್ಳುವುದು ಅತ್ಯಗತ್ಯ ಎಂದು ಒತ್ತಿ ಹೇಳಿದರು. ವಿಶಾಲ ಮಾನವ ಆಯಾಮವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಇದು ಕೇವಲ ಪ್ರಾದೇಶಿಕ ಕಾಳಜಿಯಲ್ಲ, ಬದಲಾಗಿ ಮಾನವೀಯತೆಯ ಕರೆ ಎಂದು ಹೇಳಿದರು.ಉಕ್ರೇನ್ ಅಧ್ಯಕ್ಷರಾದ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
August 30th, 07:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷರಾದ ಮಾನ್ಯ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಇಂದು ದೂರವಾಣಿ ಮುಖಾಂತರ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಫಿನ್ಲೆಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ದೂರವಾಣಿ ಕರೆ
August 27th, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷರಾದ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ
August 21st, 06:30 pm
ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರೆಂಚ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ ಬಂದಿತು.ಉಕ್ರೇನ್ ಅಧ್ಯಕ್ಷರಾದ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಮಾತುಕತೆ
August 11th, 06:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷರಾದ ಮಾನ್ಯ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಪ್ರಧಾನಮಂತ್ರಿ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ದೂರವಾಣಿ ಸಂಭಾಷಣೆ ಕುರಿತು ವಿದೇಶಾಂಗ ಕಾರ್ಯದರ್ಶಿ ಹೇಳಿಕೆ
June 18th, 12:32 pm
ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಮತ್ತು ಅಮೆರಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನಿಗದಿಯಾಗಿತ್ತು. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಅಮೆರಿಕಕ್ಕೆ ಬೇಗನೆ ಹಿಂತಿರುಗಬೇಕಾದ ಹಿನ್ನೆಲೆಯಲ್ಲಿ ಈ ಸಭೆ ಸಾಧ್ಯವಾಗಲಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು
April 16th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಹೇಳಿಕೆ (ಅಕ್ಟೋಬರ್ 22, 2024)
October 22nd, 07:39 pm
ನಿಮ್ಮ ಸ್ನೇಹ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಗಾಗಿ ಕಜಾನ್ ನಂತಹ ಸುಂದರ ನಗರಕ್ಕೆ ಭೇಟಿ ನೀಡುವ ಅವಕಾಶ ದೊರೆತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ನಗರವು ಭಾರತದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಕಜನ್ ನಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದರಿಂದ ಈ ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ.ಉಕ್ರೇನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
September 24th, 03:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರುವ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.