ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ

June 17th, 12:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ಯುನೈಟೆಡ್ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಅವರಿಂದ ಪ್ರಧಾನಮಂತ್ರಿ ಅವರ ಭೇಟಿ

June 04th, 09:56 pm

ಯುನೈಟೆಡ್‌ ಕಿಂಗ್ಡಮ್ ವಿದೇಶಾಂಗ ಕಾರ್ಯದರ್ಶಿ ಇವ್ಯಾಟ್ ಕೂಪರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 15th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.

ರೋಲ್ಸ್-ರಾಯ್ಸ್ ಸಿಇಒ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

February 11th, 10:24 pm

ರೋಲ್ಸ್-ರಾಯ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಶ್ರೀ ತುಫಾನ್ ಎರ್ಗಿನ್‌ಬಿಲ್ಗಿಕ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತ-ಯುಕೆ ಜಂಟಿ ಹೇಳಿಕೆ

October 09th, 03:24 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.

ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಶ್ರುತಿ

October 09th, 01:55 pm

ಭಾರತ-ಯುಕೆ ಸಂಪರ್ಕ ಮತ್ತು ನಾವಿನ್ಯತಾ ಕೇಂದ್ರದ ಸ್ಥಾಪನೆ.

ಭಾರತಕ್ಕೆ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿರುವ ಬ್ರಿಟನ್ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರನ್ನು ಸ್ವಾಗತಿಸಿದ ಪ್ರಧಾನಮಂತ್ರಿ

October 08th, 12:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತಕ್ಕೆ ಐತಿಹಾಸಿಕ ಮೊದಲ ಭೇಟಿ ನೀಡುತ್ತಿರುವ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಘನತೆವೆತ್ತ ಕೀರ್ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಶ್ರೀ ಸ್ವರಾಜ್ ಪೌಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

August 22nd, 09:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ‌ಮೋದಿ‌ ಅವರು, ಶ್ರೀ ಸ್ವರಾಜ್ ಪೌಲ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ಜುಲೈ 26-27ರಂದು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 25th, 10:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 26ರಂದು ರಾತ್ರಿ 8 ಗಂಟೆಗೆ ತಮಿಳುನಾಡಿನ ಟ್ಯುಟಿಕೋರಿನ್ ನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ 4800 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ ನ ಮಹಾರಾಜ ಚಾರ್ಲ್ಸ್ III ಅವರನ್ನು ಭೇಟಿಯಾದರು

July 24th, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜರ ಬೇಸಿಗೆಯ ನಿವಾಸವಾದ ಸ್ಯಾಂಡ್ರಿಂಗ್‌ಹ್ಯಾಮ್ ಎಸ್ಟೇಟ್‌ ನಲ್ಲಿ ಮಹಾರಾಜ ಮೂರನೇ ಚಾರ್ಲ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು

July 24th, 07:38 pm

'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್‌ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.

ಭಾರತ-ಯುಕೆ (ಯುನೈಟೆಡ್‌ ಕಿಂಗ್‌ಡಮ್‌) ವಿಷನ್‌ 2035

July 24th, 07:12 pm

ಭಾರತ ಮತ್ತು ಯುನೈಟೆಡ್‌ ಕಿಂಗ್‌ಡಮ್‌ನ ಪ್ರಧಾನ ಮಂತ್ರಿಗಳು 2025 ರ ಜುಲೈ 24ರಂದು ಲಂಡನ್‌ನಲ್ಲಿ ನಡೆದ ಸಭೆಯಲ್ಲಿ ಹೊಸ ಭಾರತ-ಯುಕೆ ವಿಷನ್‌ 2035 ಅನ್ನು ಅನುಮೋದಿಸಿದರು. ಇದು ಪುನರುಜ್ಜೀವನಗೊಂಡ ಪಾಲುದಾರಿಕೆಯ ಸಂಪೂರ್ಣ ಸಾಮರ್ಥ್ಯ‌ವನ್ನು ಮುಕ್ತಗೊಳಿಸುವ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಈ ಮಹತ್ವಾಕಾಂಕ್ಷೆಯ ಮತ್ತು ಭವಿಷ್ಯದ ಕೇಂದ್ರಿತ ಒಪ್ಪಂದವು ಪರಸ್ಪರ ಬೆಳವಣಿಗೆ, ಸಮೃದ್ಧಿಗಾಗಿ ಮತ್ತು ತ್ವರಿತ ಜಾಗತಿಕ ಬದಲಾವಣೆಯ ಸಮಯದಲ್ಲಿಸಮೃದ್ಧ, ಸುರಕ್ಷಿತ ಮತ್ತು ಸುಸ್ಥಿರ ಜಗತ್ತನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವ ಉಭಯ ರಾಷ್ಟ್ರಗಳ ಸಂಕಲ್ಪವನ್ನು ಒತ್ತಿಹೇಳುತ್ತದೆ.

ಬ್ರಿಟನ್ ಪ್ರಧಾನಮಂತ್ರಿಯವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 24th, 04:20 pm

ಮೊದಲನೆಯದಾಗಿ, ಪ್ರಧಾನಿ ಸ್ಟಾರ್ಮರ್ ಅವರ ಆತ್ಮೀಯ ಸ್ವಾಗತ ಮತ್ತು ಸೌಹಾರ್ದಯುತ ಆತಿಥ್ಯಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು. ಹಲವು ವರ್ಷಗಳ ಸಮರ್ಪಿತ ಪ್ರಯತ್ನಗಳ ನಂತರ, ಇಂದು ನಮ್ಮ ಎರಡೂ ದೇಶಗಳ ನಡುವೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ನನಗೆ ಸಂತೋಷವಾಗಿದೆ.

ಯುಕೆ ಪ್ರಧಾನಮಂತ್ರಿ ಭೇಟಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಹೇಳಿಕೆ

July 24th, 04:00 pm

ಈ ಆತ್ಮೀಯ ಸ್ವಾಗತ ಮತ್ತು ಅದ್ಧೂರಿ ಗೌರವಕ್ಕೆ ನಾನು ಕೃತಜ್ಞನಾಗಿದ್ದೇನೆ. ಇಂದು ಚೆಕರ್ಸ್‌ನಲ್ಲಿ, ನಾವು ಹೊಸ ಇತಿಹಾಸ ಸೃಷ್ಟಿಸಲಿದ್ದೇವೆ. ಭಾರತ ಮತ್ತು ಯುಕೆ ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಒಟ್ಟಾಗಿ ಬರುತ್ತಿವೆ.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿಯನ್ನು ಭೇಟಿಯಾದರು

July 24th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜುಲೈ 23-24, 2025 ರಂದು ಯುನೈಟೆಡ್ ಕಿಂಗ್ ಡಮ್ ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದರು. ಬಕಿಂಗ್‌ಹ್ಯಾಮ್‌ಶೈರ್‌ನಲ್ಲಿರುವ ಯುಕೆ ಪ್ರಧಾನಮಂತ್ರಿಗಳ ನಿವಾಸವಾದ ಚೆಕರ್ಸ್‌ನಲ್ಲಿ ಪ್ರಧಾನಿ ಸ್ಟಾರ್ಮರ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ನಂತರ ಇಬ್ಬರು ನಾಯಕರು ಮುಖಾಮುಖಿ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು.