ರಕ್ಷಣೆ ಮತ್ತು ಭದ್ರತಾ ಸಹಕಾರ ಕುರಿತು ಭಾರತ-ಆಸ್ಟ್ರೇಲಿಯಾ ಜಂಟಿ ಘೋಷಣೆ
July 09th, 10:55 am
ನಾವು, ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳಾದ ನಾವು, ನಮ್ಮ ನಿರಂತರವಾಗಿ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯದಿಂದ ಒಗ್ಗೂಡಿದ್ದೇವೆ. ನಮ್ಮ ರಾಷ್ಟ್ರಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ದೃಢಸಂಕಲ್ಪ ಮಾಡಿದ್ದೇವೆ. ಮುಕ್ತ, ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ಗಾಗಿರುವ ಸಾಮಾನ್ಯ ಮಹತ್ವಾಕಾಂಕ್ಷೆಯಿಂದ ಪ್ರೇರಿತರಾಗಿ, ಈ ಮೂಲಕ ರಕ್ಷಣೆ ಮತ್ತು ಭದ್ರತಾ ಸಹಕಾರದ ಜಂಟಿ ಘೋಷಣೆಗೆ ಬದ್ಧರಾಗಿದ್ದೇವೆ.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ
July 02nd, 10:14 pm
ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.ವರ್ಷದ ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿಗೆ ಭಾಜನರಾಗಿರುವ ಅಭಿಲಾಷಾ ಬರಾಕ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 07th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದ ಇಯರ್’ ಪ್ರಶಸ್ತಿಗೆ ಭಾಜನರಾಗಿರುವ ಮೇಜರ್ ಅಭಿಲಾಷಾ ಬರಾಕ್ ಅವರನ್ನು ಇಂದು ಅಭಿನಂದಿಸಿದ್ದಾರೆ. ಮೇಜರ್ ಬರಾಕ್ ಅವರು ಲೆಬನಾನ್ ನ ವಿಶ್ವಸಂಸ್ಥೆ ಮಧ್ಯಂತರ ಪಡೆ (ಯು ಎನ್ ಐ ಎಫ್ ಐ ಎಲ್) ನಲ್ಲಿ ಎಂಗೇಜ್ ಮೆಂಟ್ ಟೀಮ್ ಕಮಾಂಡರ್ ಮತ್ತು ಜೆಂಡರ್ ಫೋಕಲ್ ಪಾಯಿಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
June 07th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಫುಟ್ಬಾಲ್ ಒಕ್ಕೂಟ (ಸ್ಯಾಫ್ - ಎಸ್ ಎ ಎಫ್ ಎಫ್) ಮಹಿಳಾ ಫುಟ್ಬಾಲ್ ಚಾಂಪಿಯನ್ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡವನ್ನು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ವನಿತೆಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
June 04th, 06:41 pm
ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
June 04th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ
May 22nd, 09:31 pm
ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್ ಜಂಟಿ ಹೇಳಿಕೆ
March 05th, 08:03 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಪ್ರಧಾನಮಂತ್ರಿ ಸಭೆ
February 20th, 09:52 pm
2026 ಫೆಬ್ರವರಿ 20 ರಂದು ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ (UNSG) ಶ್ರೀ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಫೆಬ್ರವರಿ 19ರಂದು ಭಾರತ ಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 18th, 03:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 19ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ಕ್ಕೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ, ಫೆಬ್ರವರಿ 18ರಂದು ಸಂಜೆ 7 ಗಂಟೆಗೆ ಭಾರತ ಮಂಟಪದಲ್ಲಿ ಶೃಂಗಸಭೆಯಲ್ಲಿ ಭಾಗವಹಿಸುವ ವಿವಿಧ ದೇಶಗಳ ನಾಯಕರನ್ನು ಪ್ರಧಾನಮಂತ್ರಿಯವರು ಸ್ವಾಗತಿಸಲಿದ್ದಾರೆ. ಶೃಂಗಸಭೆಯಲ್ಲಿ ಭಾಗವಹಿಸುವ ಹಲವಾರು ವಿಶ್ವ ನಾಯಕರೊಂದಿಗೆ ಪ್ರಧಾನಮಂತ್ರಿಯವರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.25ನೇ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
September 01st, 10:14 am
ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 25ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನನಗೆ ಸಂತಸವಾಗಿದೆ. ಸಂಭ್ರಮದಿಂದ ಸ್ವಾಗತಿಸಿ, ಸಂತೋಷದಿಂದ ಆತಿಥ್ಯ ಸತ್ಕಾರ ನೀಡಿದ ಅಧ್ಯಕ್ಷರಾದ ಕ್ಸಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.ರಿಯೋ ಡಿ ಜನೈರೋ ಘೋಷಣೆ - ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ 'ಗ್ಲೋಬಲ್ ಸೌತ್' ಸಹಕಾರ ಬಲವರ್ಧನೆ
July 07th, 06:00 am
ಬ್ರಿಕ್ಸ್ ರಾಷ್ಟ್ರಗಳ ನಾಯಕರಾದ ನಾವು, ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ ಗ್ಲೋಬಲ್ ಸೌತ್ ಸಹಕಾರವನ್ನು ಬಲಪಡಿಸುವುದು ಎಂಬ ಧ್ಯೇಯವಾಕ್ಯದ ಅಡಿಯಲ್ಲಿ, ಜುಲೈ 6 ರಿಂದ 7, 2025 ರವರೆಗೆ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಸಭೆ ಸೇರಿದ್ದೇವೆ.ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲಿಷ್ ಅನುವಾದ: ಜಾಗತಿಕ ಆಡಳಿತದ ಸುಧಾರಣೆ
July 06th, 09:41 pm
17ನೇ ಬ್ರಿಕ್ಸ್ ಶೃಂಗಸಭೆಯ ಅತ್ಯುತ್ತಮ ಸಂಘಟನೆಗಾಗಿ ಅಧ್ಯಕ್ಷ ಲೂಲಾ ಅವರಿಗೆ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರೆಜಿಲ್‌ನ ಕ್ರಿಯಾತ್ಮಕ ಅಧ್ಯಕ್ಷತೆಯಲ್ಲಿ, ನಮ್ಮ ಬ್ರಿಕ್ಸ್ ಸಹಕಾರವು ಹೊಸ ಆವೇಗ ಮತ್ತು ಚೈತನ್ಯವನ್ನು ಪಡೆದುಕೊಂಡಿದೆ. ನಾವು ಪಡೆದ ಶಕ್ತಿಯು ಕೇವಲ ಎಸ್ಪ್ರೆಸೊ ಅಲ್ಲ; ಇದು ಡಬಲ್ ಎಸ್ಪ್ರೆಸೊ ಶಾಟ್! ಇದಕ್ಕಾಗಿ, ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಅವರ ಅಚಲ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ. ಭಾರತದ ಪರವಾಗಿ, ಬ್ರಿಕ್ಸ್ ಕುಟುಂಬದಲ್ಲಿ ಇಂಡೋನೇಷ್ಯಾ ಸೇರ್ಪಡೆಗಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪ್ರಬೋವೊ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ.