ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
May 29th, 01:30 pm
ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
May 29th, 01:20 pm
ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.