ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಪ್ರಧಾನಮಂತ್ರಿ ಅವರು ಮಾತನಾಡಿದರು
February 02nd, 11:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರೊಂದಿಗೆ ಮಾತನಾಡಿದರು. ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18 ಕ್ಕೆ ಇಳಿಸುವ ಮಹತ್ತರ ಘೋಷಣೆಗಾಗಿ ಶ್ರೀ ಮೋದಿ ಅವರು ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷರಾದ ಶ್ರೀ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.ಪ್ರಧಾನಮಂತ್ರಿ ಅವರು ಎಲ್‍ವಿಎಂ3-ಎಂ6 ಮೂಲಕ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಉಡಾವಣೆಗಾಗಿ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
December 24th, 10:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್‍ವಿಎಂ3-ಎಂ6 ಉಡಾವಣಾ ವಾಹನದ ಮೂಲಕ 'ಬ್ಲೂಬರ್ಡ್ ಬ್ಲಾಕ್-2' (BlueBird Block-2) ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಅಭಿನಂದಿಸಿದ್ದಾರೆ. ಬ್ಲೂಬರ್ಡ್ ಬ್ಲಾಕ್-2 ಅಮೆರಿಕದ ಒಂದು ಬಾಹ್ಯಾಕಾಶ ನೌಕೆಯಾಗಿದ್ದು, ಇದು ಭಾರತದಿಂದ ಉದ್ದೇಶಿತ ಕಕ್ಷೆಗೆ ಉಡಾವಣೆಗೊಂಡ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ ಮತ್ತು ಆತ್ಮನಿರ್ಭರ ಭಾರತದ ಕಡೆಗಿನ ನಮ್ಮ ಪ್ರಯತ್ನಗಳ ಪ್ರತಿಬಿಂಬವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 16th, 12:24 pm
ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ
December 16th, 12:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.ಅಮೆರಿಕ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಮಾತುಕತೆ
December 11th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷರಾದ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದರು.ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ, ಆ ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಅಧ್ಯಕ್ಷ ಟ್ರಂಪ್ ಅವರ ಪ್ರಾಮಾಣಿಕ ಪ್ರಯತ್ನಗಳನ್ನು ಸ್ವಾಗತಿಸಿದ್ದಾರೆ
October 13th, 07:59 pm
ಎರಡು ವರ್ಷಗಳಿಗೂ ಹೆಚ್ಚು ಕಾಲ ಸೆರೆಯಲ್ಲಿದ್ದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಒತ್ತೆಯಾಳುಗಳ ಬಿಡುಗಡೆಯು ಅವರ ಕುಟುಂಬಸ್ಥರ ಧೈರ್ಯ ಹಾಗೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಪ್ರಯತ್ನಗಳು ಮತ್ತು ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ದೃಢಸಂಕಲ್ಪದ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.ಭಾರತಕ್ಕಾಗಿ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
October 11th, 11:58 pm
ಭಾರತಕ್ಕಾಗಿ ಅಮೆರಿಕದ ನಿಯೋಜಿತ ರಾಯಭಾರಿ ಶ್ರೀ ಸೆರ್ಗಿಯೊ ಗೋರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಪ್ರಧಾನಮಂತ್ರಿ ಅವರು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರನ್ನು ಅಭಿನಂದಿಸಿದರು
October 09th, 09:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಐತಿಹಾಸಿಕ ಗಾಜಾ ಶಾಂತಿ ಯೋಜನೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು.ಗಾಜಾ ಸಂಘರ್ಷದ ಕುರಿತಾಗಿ ಅಧ್ಯಕ್ಷರಾದ ಟ್ರಂಪ್ ಅವರ ಶಾಂತಿ ಉಪಕ್ರಮವನ್ನು ಪ್ರಧಾನಮಂತ್ರಿ ಸ್ವಾಗತಿಸಿದ್ದಾರೆ
September 30th, 09:19 am
ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಧ್ಯಕ್ಷರಾದ ಡೊನಾಲ್ಡ್ ಜೆ. ಟ್ರಂಪ್ ಅವರ ಸಮಗ್ರ ಯೋಜನೆಯ ಘೋಷಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಅಮೆರಿಕಾದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
July 06th, 12:06 am
ಅಮೆರಿಕಾದ ಟೆಕ್ಸಾಸ್‌ನಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹದಲ್ಲಿ ಆದ ಜೀವಹಾನಿಗೆ, ವಿಶೇಷವಾಗಿ ಮಕ್ಕಳ ಸಾವು ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಉಡಾವಣೆ ಯಶಸ್ವಿ - ಪ್ರಧಾನಮಂತ್ರಿ ಸ್ವಾಗತ
June 25th, 01:30 pm
ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಯಾನದ ಯಶಸ್ವಿ ಉಡಾವಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿರುವ ಗ್ರೂಪ್ ಕ್ಯಾಪ್ಟನ್ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.ಪ್ರಧಾನಮಂತ್ರಿ ಶ್ರೀ ಜೋ ಬಿಡೆನ್ ಅವರು ಶೀಘ್ರ ಮತ್ತು ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ
May 19th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕದ ಮಾಜಿ ಅಧ್ಯಕ್ಷ ಶ್ರೀ ಜೋ ಬಿಡೆನ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಶೀಘ್ರ ಮತ್ತು ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಡಾ. ಜಿಲ್ ಬಿಡೆನ್ ಮತ್ತು ಅವರ ಕುಟುಂಬದೊಂದಿಗೆ ನಮ್ಮ ಆಲೋಚನೆಗಳು ಇವೆ ಎಂದು ಶ್ರೀ ಮೋದಿ ಹೇಳಿದರು.ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ
April 21st, 08:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.ಪ್ರಧಾನಿ ಮೋದಿ ಮತ್ತು ಟ್ರಂಪ್ ಭಾರತ-ಅಮೆರಿಕ ಮೆಗಾ ಪಾಲುದಾರಿಕೆಯನ್ನು ರೂಪಿಸಿದರು
February 14th, 06:46 pm
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಅಮೆರಿಕ ಭೇಟಿಯು ಒಂದು ಸ್ಮರಣೀಯ ಸಂದರ್ಭವಾಗಿದ್ದು, ಎರಡೂ ರಾಷ್ಟ್ರಗಳ ನಡುವಿನ ಆಳವಾದ ಕಾರ್ಯತಂತ್ರ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ತಮ್ಮ ವಾಸ್ತವ್ಯದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಮೆರಿಕದ ನಾಯಕರು, ವ್ಯಾಪಾರ ಉದ್ಯಮಿಗಳು ಮತ್ತು ಭಾರತೀಯ ವಲಸೆಗಾರರೊಂದಿಗೆ ಉನ್ನತ ಮಟ್ಟದ ಸಭೆಗಳು ಮತ್ತು ಚರ್ಚೆಗಳಲ್ಲಿ ತೊಡಗಿಸಿಕೊಂಡರು, ಇದು ರಕ್ಷಣೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ರಾಜತಾಂತ್ರಿಕತೆಯಂತಹ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧವನ್ನು ಪುನರುಚ್ಚರಿಸಿತು, ಹೊಸ ವಿಶ್ವ ಕ್ರಮವನ್ನು ರೂಪಿಸುವಲ್ಲಿ ಎರಡೂ ರಾಷ್ಟ್ರಗಳನ್ನು ಜಾಗತಿಕ ಪಾಲುದಾರರನ್ನಾಗಿ ಇರಿಸಿತು.ಭಾರತದ ಪ್ರಧಾನಮಂತ್ರಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತ - ಅಮೆರಿಕ ಜಂಟಿ ಹೇಳಿಕೆ
February 14th, 09:07 am
ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾದ ಗೌರವಾನ್ವಿತ ಡೊನಾಲ್ಡ್ ಜೆ. ಟ್ರಂಪ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 2025ರ ಫೆಬ್ರವರಿ 13ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಧಿಕೃತ ಭೇಟಿಗಾಗಿ ಆತಿಥ್ಯ ವಹಿಸಿದರು.ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
February 14th, 04:57 am
ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರು (ಡಿಓಜಿಇ) ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು
February 13th, 11:51 pm
ಪ್ರಧಾನ ಮಂತ್ರಿ ಮೋದಿ ಅವರು ನಾವೀನ್ಯತೆ, AI, ಬಾಹ್ಯಾಕಾಶ, ಸುಸ್ಥಿರತೆ, ಉದಯೋನ್ಮುಖ ತಂತ್ರಜ್ಞಾನ ಮತ್ತು ಆಡಳಿತದಲ್ಲಿ ಸಹಯೋಗವನ್ನು ಚರ್ಚಿಸಲು ಟೆಸ್ಲಾ ಸಿಇಒ ಮತ್ತು ಅಮೆರಿಕದ ಡಿಓಜಿಇ ಮುಖ್ಯಸ್ಥ ಎಲೋನ್ ಮಸ್ಕ್ ಅವರನ್ನು ಭೇಟಿಯಾದರು.ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ
February 13th, 11:32 pm
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಶ್ರೀ ಮೈಕೆಲ್ ವಾಲ್ಟ್ಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಿ ಮೋದಿ ವಾಷಿಂಗ್ಟನ್ ಡಿಸಿಗೆ ಆಗಮಿಸಿದರು
February 13th, 11:59 am
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ವಾಷಿಂಗ್ಟನ್ ಡಿಸಿಗೆ ಆಗಮಿಸಿದ್ದಾರೆ. ಭೇಟಿಯ ಸಮಯದಲ್ಲಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇತರ ನಾಯಕರನ್ನು ಭೇಟಿ ಮಾಡಲಿದ್ದಾರೆ. ಅವರು ವಿವಿಧ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.