ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

May 19th, 01:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಂಗೋತ್ರಿಯಿಂದ ಗಂಗಾಸಾಗರದವರೆಗೆ... ಎಲ್ಲೆಡೆ ಕಮಲ ಅರಳುತ್ತಿದೆ: ಬಿಜೆಪಿ ಕೇಂದ್ರ ಕಚೇರಿಯಿಂದ ಪ್ರಧಾನಿ ಮೋದಿ

May 04th, 07:01 pm

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.

ರಾಜ್ಯಗಳಾದ್ಯಂತ ಭರ್ಜರಿ ಜಯಗಳಿಸಿದ ನಂತರ ಪ್ರಧಾನಿ ಮೋದಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದರು

May 04th, 07:00 pm

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭರ್ಜರಿ ವಿಜಯಗಳ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಕ್ಷಣವನ್ನು ಐತಿಹಾಸಿಕ, ಭಾವನಾತ್ಮಕ ಮತ್ತು ಪ್ರಜಾಪ್ರಭುತ್ವ ಮತ್ತು ಕಾರ್ಯಕ್ಷಮತೆ ಆಧಾರಿತ ಆಡಳಿತದ ಮೇಲಿನ ನಂಬಿಕೆಯ ಪ್ರಬಲ ದೃಢೀಕರಣ ಎಂದು ಕರೆದರು. ಧೋತಿಯೊಂದಿಗೆ ಸಾಂಪ್ರದಾಯಿಕ ಬಂಗಾಳಿ ಉಡುಪನ್ನು ಧರಿಸಿದ್ದ ಪ್ರಧಾನಿಯವರ ನೋಟವು ಆಳವಾದ ಸಾಂಸ್ಕೃತಿಕ ಸಂಪರ್ಕವನ್ನು ಪ್ರತಿಬಿಂಬಿಸುತ್ತದೆ ಮತ್ತು ಬಂಗಾಳದ ಹೆಗ್ಗುರುತು ಜನಾದೇಶದ ಮಹತ್ವವನ್ನು ಸಂಕೇತಿಸುತ್ತದೆ.

ಉತ್ತರಾಖಂಡದ ತೆಹ್ರಿ ಗರ್ವಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

April 23rd, 07:24 pm

ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಶ್ರೀ ಕೇದಾರನಾಥ ಧಾಮ ಉದ್ಘಾಟನೆ ಮತ್ತು ಚಾರ್ ಧಾಮ್ ಯಾತ್ರೆಗೆ ಚಾಲನೆ ನೀಡಿದ ಪ್ರಧಾನಮಂತ್ರಿ

April 22nd, 11:28 am

ಈ ವರ್ಷದ ಚಾರ್ ಧಾಮ್ ಯಾತ್ರೆಯ ಆರಂಭದ ಅಂಗವಾಗಿ ದೇವಭೂಮಿ ಉತ್ತರಾಖಂಡದಲ್ಲಿ ಶ್ರೀ ಕೇದಾರನಾಥ ಧಾಮದ ಬಾಗಿಲುಗಳನ್ನು ತೆರೆದ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಇಂದು ಗೌರವ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ, ಯಾತ್ರೆಗಾಗಿ ಉತ್ತರಾಖಂಡಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರನ್ನು ಉದ್ದೇಶಿಸಿ ಪತ್ರದ ಮೂಲಕ ಪ್ರಧಾನಮಂತ್ರಿ ಅವರು ತಮ್ಮ ಹೃತ್ಪೂರ್ವಕ ಭಾವನೆಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಯೋಗಕ್ಷೇಮಕ್ಕಾಗಿ ತಮ್ಮ ಶುಭ ಹಾರೈಕೆಗಳನ್ನು ಮತ್ತು ಪ್ರಾರ್ಥನೆಗಳನ್ನು ತಿಳಿಸಿದ್ದಾರೆ.

ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ

April 14th, 01:25 pm

ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 14th, 01:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ಏಪ್ರಿಲ್ 14 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 13th, 04:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14, 2026 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:15ರ ಸುಮಾರಿಗೆ, ಪ್ರಧಾನಮಂತ್ರಿಯವರು ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ನ ಎಲಿವೇಟೆಡ್ ವಿಭಾಗದಲ್ಲಿ ವನ್ಯಜೀವಿ ಕಾರಿಡಾರ್ ನ ಪರಿಶೀಲನೆಯನ್ನು ಕೈಗೊಳ್ಳಲು ಉತ್ತರ ಪ್ರದೇಶದ ಸಹರಾನ್ ಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:40ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ಬಳಿಯ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ನಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಾಖಂಡದ ರಾಜ್ಯಪಾಲರು

April 08th, 06:41 pm

ಉತ್ತರಾಖಂಡ ರಾಜ್ಯಪಾಲರಾದ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

December 30th, 12:37 pm

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಡೆಹ್ರಾಡೂನ್‌ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 09th, 01:00 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!

ಡೆಹ್ರಾಡೂನ್‌ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 09th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.

ಉತ್ತರಾಖಂಡ ರಾಜ್ಯದ 25ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

November 09th, 09:05 am

ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮದ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ನವೆಂಬರ್ 9ರಂದು ಡೆಹ್ರಾಡೂನ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 08th, 09:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್ ಗೆ ಭೇಟಿ ನೀಡಲಿದ್ದು, ನವೆಂಬರ್ 9 ರಂದು ಮಧ್ಯಾಹ್ನ 12:30ರ ಸುಮಾರಿಗೆ ಉತ್ತರಾಖಂಡದ ರಚನೆಯ ರಜತ ಮಹೋತ್ಸವ ಆಚರಣೆಯ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿರುವ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು

September 11th, 06:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 10th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.

ಉತ್ತರಕಾಶಿಯ ಧರಾಲೀಯಲ್ಲಿ ನಡೆದ ದುರಂತಕ್ಕೆ ಪ್ರಧಾನಮಂತ್ರಿ ಸಂತಾಪ

August 05th, 04:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಕಾಶಿಯ ಧರಾಲೀಯಲ್ಲಿ ನಡೆದ ದುರಂತದಿಂದ ಬಾಧಿತರಾದವರಿಗೆ ಸಂತಾಪ ವ್ಯಕ್ತಪಡಿಸಿದರು. ಘಟನೆಯಿಂದ ಆಘಾತಕ್ಕೊಳಗಾದವರ ಚೇತರಿಕೆಗೂ ಅವರು ಕೋರಿದರು.

ಹರಿದ್ವಾರದ ಉತ್ತರಾಖಂಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

July 27th, 12:39 pm

ಹರಿದ್ವಾರ, ಉತ್ತರಾಖಂಡದ ಮಾನಸ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ

July 15th, 10:02 pm

ಉತ್ತರಾಖಂಡದ ಪಿತೋರಾಗಢದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಪಿ.ಎಂ.ಎನ್.ಆರ್‌.ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.