The words of the Gita not only guide individuals but also shape the direction of the nation's policies: PM Modi in Udupi, Karnataka
November 28th, 11:45 am
During his address at the Laksha Kantha Gita Parayana programme at Sri Krishna Matha in Udupi, PM Modi highlighted the special connection between Gujarat and Udupi. He remarked that Jagadguru Shri Madhvacharya, the pioneer of India’s Dvaita philosophy, is a shining light of Vedanta. The PM said that the entire life of Bhagwan Shri Krishna and every chapter of the Gita conveys the message of action, duty and welfare and announced nine resolutions for every citizen to adopt.PM Modi addresses the Laksha Kantha Gita Parayana programme at Sri Krishna Matha in Udupi, Karnataka
November 28th, 11:30 am
During his address at the Laksha Kantha Gita Parayana programme at Sri Krishna Matha in Udupi, PM Modi highlighted the special connection between Gujarat and Udupi. He remarked that Jagadguru Shri Madhvacharya, the pioneer of India’s Dvaita philosophy, is a shining light of Vedanta. The PM said that the entire life of Bhagwan Shri Krishna and every chapter of the Gita conveys the message of action, duty and welfare and announced nine resolutions for every citizen to adopt.Prime Minister Congratulates Nation as India Wins Centenary Commonwealth Games 2030 Bid
November 26th, 09:23 pm
The Prime Minister, Shri Narendra Modi, has expressed delight at India winning the bid to host the Centenary Commonwealth Games in 2030.ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
November 21st, 06:45 am
ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ
June 18th, 11:15 am
ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.ಸೈಪ್ರಸ್ನ ಪ್ರತಿಷ್ಠಿತ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣ
June 16th, 01:35 pm
ನನಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ನೀಡಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಸೈಪ್ರಸ್ ಜನತೆಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ - III ಗೌರವ ಪ್ರದಾನ
June 16th, 01:33 pm
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಅನ್ನು ಪ್ರದಾನ ಮಾಡಿದರು.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,