ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 03rd, 01:03 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳು-ಮನೋಹರ್ ಲಾಲ್ ಜೀ, ಧರ್ಮೇಂದ್ರ ಪ್ರಧಾನ ಜೀ, ತೋಖಾನ್ ಸಾಹು ಜೀ, ಡಾ. ಸುಕಾಂತ ಮಜುಂದಾರ್ ಜೀ, ಹರ್ಷ್ ಮಲ್ಹೋತ್ರಾ ಜೀ-ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಜೀ, ನನ್ನ ಎಲ್ಲಾ ಸಂಸದರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಲ್ಲಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು

January 03rd, 12:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಇನ್ನು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಯೋಜನೆಯಾಗಿದ್ದ ಸಭೆಯಲ್ಲಿ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು ಮತ್ತು 2025 ಭಾರತದ ಅಭಿವೃದ್ಧಿಗೆ ಅಪಾರ ಅವಕಾಶಗಳ ವರ್ಷವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು, ಇದು ರಾಷ್ಟ್ರವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ಕೊಂಡೊಯ್ಯುತ್ತದೆ ಎಂದರು. ಇಂದು, ಭಾರತವು ರಾಜಕೀಯ ಮತ್ತು ಆರ್ಥಿಕ ಸ್ಥಿರತೆಯ ಜಾಗತಿಕ ಸಂಕೇತವಾಗಿ ನಿಂತಿದೆ ಎಂದು ಪ್ರಧಾನಿ ಹೇಳಿದರು. ಮುಂಬರುವ ವರ್ಷದಲ್ಲಿ ದೇಶದ ಈ ಚಿತ್ರಣವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಉತ್ಪಾದನಾ ಕೇಂದ್ರವಾಗಲು, ನವೋದ್ಯಮಗಳು ಮತ್ತು ಉದ್ಯಮಶೀಲತೆಗೆ ಯುವಜನರನ್ನು ಸಬಲೀಕರಣಗೊಳಿಸಲು, ಹೊಸ ಕೃಷಿ ದಾಖಲೆಗಳನ್ನು ಸ್ಥಾಪಿಸಲು, ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಜೀವನವನ್ನು ಸುಲಭಗೊಳಿಸುವತ್ತ ಗಮನ ಹರಿಸುವ ಮೂಲಕ ಪ್ರತಿಯೊಬ್ಬ ನಾಗರಿಕನ ಜೀವನದ ಗುಣಮಟ್ಟವನ್ನು ಸುಧಾರಿಸುವ ವರ್ಷವಾಗಿ 2025 ಮೂಡಿ ಬರುವ ಕುರಿತ ತಮ್ಮ ಚಿಂತನೆ/ದೃಷ್ಟಿಕೋನವನ್ನು ಶ್ರೀ ಮೋದಿ ವಿವರಿಸಿದರು.

ಜನವರಿ 3 ರಂದು ದೆಹಲಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

January 02nd, 10:18 am

'ಎಲ್ಲರಿಗೂ ವಸತಿ' ಎಂಬ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಜನವರಿ 3 ರಂದು ಮಧ್ಯಾಹ್ನ 12:10ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ ನ ಸ್ವಾಭಿಮಾನ್ ಅಪಾರ್ಟ್ ಮೆಂಟ್ ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ ಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12:45ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.